Friday, April 4, 2025
Google search engine

Homeರಾಜ್ಯಸುದ್ದಿಜಾಲದೇಶದ ಮಾನವ ಸಂಪನ್ಮೂಲ ವ್ಯಕ್ತಿಗಳನ್ನು ರೂಪಿಸುವಲ್ಲಿ ಶಿಕ್ಷಕರ ಪಾತ್ರ ಬಹುಮುಖ್ಯ: ಡಾ. ನಿರ್ಮಲಾನಂದನಾಥ ಸ್ವಾಮೀಜಿ

ದೇಶದ ಮಾನವ ಸಂಪನ್ಮೂಲ ವ್ಯಕ್ತಿಗಳನ್ನು ರೂಪಿಸುವಲ್ಲಿ ಶಿಕ್ಷಕರ ಪಾತ್ರ ಬಹುಮುಖ್ಯ: ಡಾ. ನಿರ್ಮಲಾನಂದನಾಥ ಸ್ವಾಮೀಜಿ

ಮಂಡ್ಯ: ದೇಶದ ಮಾನವ ಸಂಪನ್ಮೂಲ ವ್ಯಕ್ತಿಗಳನ್ನು ರೂಪಿಸುವಲ್ಲಿ ಶಿಕ್ಷಕರ ಪಾತ್ರ ಬಹುಮುಖ್ಯವಾಗಿದ್ದು ಶಿಕ್ಷಣ ವೃತ್ತಿಗೆ ಬರುವವರು ಶಿಸ್ತು, ಸಂಯಮ,ಮತ್ತು ತಾಳ್ಮೆಯನ್ನು ಬೆಳೆಸಿಕೊಳ್ಳಬೇಕೆಂದು ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಪೀಠಾಧ್ಯಕ್ಷರಾದ ಡಾ. ನಿರ್ಮಲಾನಂದನಾಥ ಸ್ವಾಮೀಜಿ ಹೇಳಿದರು.

ನಗರದ ಕೃಷಿಕ್ ಸರ್ವೋದಯ ಟ್ರಸ್ಟ್ ನ ಸ್ಪರ್ಧಾತ್ಮಕ ಪರೀಕ್ಷೆಗಳ ತರಬೇತಿ ಕೇಂದ್ರದಲ್ಲಿ ಎಇಟಿ ಮಹಾ ಶಿಕ್ಷಣ ವಿದ್ಯಾನಿಲಯ ಹಾಗೂ ಭಾರತಿ ಶಿಕ್ಷಣ ಮಹಾವಿದ್ಯಾನಿಲಯದ ಬಿಇಡ್ ಪ್ರಶಿಕ್ಷಣಾರ್ಥಿಗಳಿಗೆ ಆಯೋಜಿಸಿದ ಸ್ಪರ್ಧಾತ್ಮಕ ಪರೀಕ್ಷೆಗಳ ಬಗ್ಗೆ ಕುರಿತ ಮಾಹಿತಿ ಹಾಗೂ ಮಾರ್ಗದರ್ಶನ ಕಾರ್ಯಗಾರದಲ್ಲಿ ಅವರು ಮಾತನಾಡಿದರು.

ಸ್ಪರ್ಧಾತ್ಮಕ ಯುಗದಲ್ಲಿ ವಯೋಮಾನದ ಮಕ್ಕಳು ಗುಣಮಟ್ಟದ ಶಿಕ್ಷಣವನ್ನು ಪಡೆದುಕೊಳ್ಳುವ ಮೂಲಕ ಸಮಾಜದ ಮುಖ್ಯವಾಹಿನಿಗೆ ಬರಬೇಕು ಎಂದ ಅವರು ಕಠಿಣ ಪರಿಶ್ರಮವಿಲ್ಲದೆ ಯಶಸ್ಸು ಗಳಿಸಲು ಸಾಧ್ಯವಿಲ್ಲ ಎಂದು ಕಿವಿಮಾತು ಹೇಳಿದರು.

ಸಮಾಜದ ಬಹುತೇಕ ಸಮಸ್ಯೆಗಳಿಗೆ ಶಿಕ್ಷಣದಲ್ಲಿ ಉತ್ತರವಿದ್ದು ಶಾಲೆಗೆ ದಾಖಲಾದ ಪ್ರತಿ ಮಕ್ಕಳಿಗೂ ಶಿಕ್ಷಕರು ಹಾಗೂ ಶಿಕ್ಷಣ ಸಂಸ್ಥೆಗಳು ಗುಣಮಟ್ಟದ ಶಿಕ್ಷಣ ನೀಡಿ ಸಮಾಜದ ಉತ್ತಮ ಪ್ರಜೆಗಳಾಗಿ ರೂಪಿಸಬೇಕಾದ ಜವಾಬ್ದಾರಿ ಇದೆ ಎಂದ ಅವರು ಶಿಕ್ಷಕರಿಲ್ಲದ ಸಮಾಜವನ್ನು ಊಹಿಸಲು ಸಾಧ್ಯವಿಲ್ಲ ಎಂದು ಅಭಿಪ್ರಾಯಪಟ್ಟರು.

ಶಿಕ್ಷಣ ಮಕ್ಕಳಲ್ಲಿ ಅಕ್ಷರ ಜ್ಞಾನ,ಸಾಮರ್ಥ್ಯ ಮತ್ತು ವ್ಯಕ್ತಿತ್ವ ಬೆಳೆಸುವ ಜೊತೆಗೆ ಮಾನವೀಯ ಮೌಲ್ಯಗಳನ್ನು ಬೆಳೆಸಿ ಮತ್ತೊಬ್ಬರ ಕಷ್ಟ ಕಾರ್ಪಣ್ಯಗಳಿಗೆ ಸ್ಪಂದಿಸುವ ಮನೋಭಾವನೆಯನ್ನು ಬೆಳೆಸಿದಾಗ ಮಾತ್ರ ಶಿಕ್ಷಣಕ್ಕೆ ಮೌಲ್ಯ ಬರುತ್ತದೆ ಎಂದರು.

ಆಧುನಿಕ ಕಾಲದಲ್ಲಿ ಮಾನವ ಹಲವಾರು ಸಮಸ್ಯೆಗಳನ್ನ ಎದುರಿಸುತ್ತಿದ್ದು ಯಾರು ಜೀವನದಲ್ಲಿ ನಿರಾಶಗೊಳಗಾಗದೆ ಜೀವನ ದೃಷ್ಟಿಕೋನವನ್ನು ಬದಲಾಯಿಸಿಕೊಳ್ಳುವಂತಹ ಮಕ್ಕಳ ವಯಸ್ಸು ಮತ್ತು ಆಸಕ್ತಿಗೆ ಅನುಗುಣವಾಗಿ ಸಾಮಾಜಿಕ, ಪ್ರಾಕೃತಿಕ, ನೈತಿಕ ಮಾನವೀಯ ಹಾಗೂ ಮಾನಸಿಕ ದೃಢತೆಯ ಹೆಚ್ಚಿಸುವಂತಹ ಶಿಕ್ಷಣವನ್ನು ನೀಡಬೇಕೆಂದು ಕಿವಿಮಾತು ಹೇಳಿದರು.

ಈ ವೇಳೆ ಕೊಮ್ಮೆರಹಳ್ಳಿ ಸಾಕಾಮಠದ ಪೀಠಾಧ್ಯಕ್ಷರಾದ ಪುರುಷೋತ್ತಮನಂದನಾಥ ಸ್ವಾಮೀಜಿ, ಕೃಷಿಕ್ ಫೌಂಡೇಶನ್ನ ಟ್ರಸ್ಟಿಗಳಾದ ಡಾ.ರಾಮಲಿಂಗಯ್ಯ, ದೇವರಾಜು ,ಲೋಕೇಶ್, ಶೈಕ್ಷಣಿಕ ಸಂಯೋಜಕ ವಿಶ್ವನಾಥ್, ಸಹಾಯಕ ಪ್ರಾಧ್ಯಾಪಕರುಗಳಾದ ಧರ್ಮೇಶ್, ಗಂಗೇಗೌಡ ,ರಕ್ಷಿತ ಸೇರಿದಂತೆ ಇತರರು ಹಾಜರಿದ್ದರು.

RELATED ARTICLES
- Advertisment -
Google search engine

Most Popular