ಚನ್ನಪಟ್ಟಣ : ರಾಜ್ಯದಲ್ಲಿ ನ.13ರಂದು ನಡೆದ ಮೂರೂ ಕ್ಷೇತ್ರಗಳ ವಿಧಾನಸಭಾ ಉಪಚುನಾವಣೆಗೆ ಇಂದು ಫಲಿತಾಂಶ ಹೊರಬೀಳಲಿದ್ದು, ಇದೀಗ ಚನ್ನಪಟ್ಟಣ, ಶಿಗ್ಗಾವಿ ಹಾಗೂ ಸಂಡೂರಿನಲ್ಲಿ ಮೂರೂ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಮುನ್ನಡೆ ಸಾಧಿಸಿದ್ದು ಬಿಜೆಪಿ ಹಾಗೂ ಜೆಡಿಎಸ್ ಗೆ ಹಿನ್ನಡೆಯಾಗಿದೆ.
ರಾಜ್ಯದಲ್ಲಿ ನಡೆದ ಮೂರು ಕ್ಷೇತ್ರಗಳ ಉಪ ಚುನಾವಣೆಯಲ್ಲಿ ಬೇರೆ ಕ್ಷೇತ್ರಗಳಿಗಿಂತ ಹೆಚ್ಚು ಕುತೂಹಲ ಮೂಡಿಸಿರುವ ಚನ್ನಪಟ್ಟಣ ಕ್ಷೇತ್ರದಲ್ಲಿ ಇದೀಗ ಕಾಂಗ್ರೆಸ್ ಅಭ್ಯರ್ಥಿ ಸಿ ಪಿ ಯೋಗೇಶ್ವರ್ 18 ಸಾವಿರಕ್ಕೂ ಅಧಿಕ ಮತಗಳೊಂದಿಗೆ ಮುನ್ನಡೆ ಸಾಧಿಸಿದ್ದಾರೆ ಈ ನೆಲೆಯಲ್ಲಿ ಮತ ಕೇಂದ್ರದ ಬಳಿ ಕಾಂಗ್ರೆಸ್ ಕಾರ್ಯಕರ್ತರು ಸಂಭ್ರಮಾಚರಣೆ ಆರಂಭಿಸಿದ್ದಾರೆ.
ಸಿಪಿ ಯೋಗೇಶ್ವರ್ 18,000 ಮತಗಳ ಮುನ್ನಡೆ ಸಾಧಿಸಿದ್ದು, ಇನ್ನು ಸಂಡೂರಿನಲ್ಲಿ ಅನ್ನಪೂರ್ಣ ತುಕಾರಾಮ ಅವರು ಕೇವಲ 6562 ಮತಗಳ ಅಂತರದಿಂದ ಮುನ್ನಡೆ ಸಾಧಿಸಿದ್ದಾರೆ.ಅದೇ ರೀತಿಯಾಗಿ ಶಿಗ್ಗಾವಿಯಲ್ಲಿ ಯಾಸೀರ್ ಪಠಾಣ್ ಖಾನ್ ಅವರು ಭರತ್ ಬೊಮ್ಮಾಯಿ ವಿರುದ್ಧ 6479 ದ ಮತಗಳ ಅಂತರದಿಂದ ಮುನ್ನಡೆ ಸಾಧಿಸಿದ್ದಾರೆ.
ಆರಂಭಿಕ ಸತ್ತುಗಳ ಮತ ಎಣಿಕೆಯಲ್ಲಿ ಬಿಜೆಪಿ ಅಭ್ಯರ್ಥಿಗಳು ಮುನ್ನಡೆ ಸಾಧಿಸಿದ್ದರು. ಆದರೆ ಇದೀಗ ಚನ್ನಪಟ್ಟಣ ಶಿಗ್ಗಾವಿ ಹಾಗೂ ಸಂಡೂರಿನಲ್ಲಿ ಕಾಂಗ್ರೆಸ್ಸಿನ ಮೂರು ಅಭ್ಯರ್ಥಿಗಳು ಭಾರಿ ಮತಗಳ ಅಂತರದಿಂದ ಮುನ್ನಡೆ ಸಾಧಿಸಿದ್ದಾರೆ ಎಂದು ತಿಳಿದುಬಂದಿದೆ. ಹಾಗಾಗಿ ಉಪಚುನಾವಣೆಯಲ್ಲಿ ಕಾಂಗ್ರೆಸ್ ಮೂರು ಕ್ಷೇತ್ರಗಳನ್ನು ಗೆಲ್ಲುವ ನಿಟ್ಟಿನಲ್ಲಿ ದಾಪುಗಾಲು ಇಟ್ಟಿದೆ.