Wednesday, April 23, 2025
Google search engine

Homeರಾಜಕೀಯರಾಜ್ಯದಲ್ಲಿ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ದಿವಾಳಿಯಾಗಿದೆ: ಬಿ ಎಸ್​ ಯಡಿಯೂರಪ್ಪ

ರಾಜ್ಯದಲ್ಲಿ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ದಿವಾಳಿಯಾಗಿದೆ: ಬಿ ಎಸ್​ ಯಡಿಯೂರಪ್ಪ

ಬೆಂಗಳೂರು: ರಾಜ್ಯದಲ್ಲಿ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ದಿವಾಳಿಯಾಗಿದೆ. ಎಲ್ಲ ಅಭಿವೃದ್ಧಿ ಕಾರ್ಯಗಳು ಸ್ಥಗಿತವಾಗಿದೆ. ಸರ್ಕಾರದಲ್ಲಿ ಹಣ ಇಲ್ಲ, ದಿವಾಳಿಯಾಗಿರುವುದು ಸ್ಪಷ್ಟವಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಬಿ ಎಸ್​ ಯಡಿಯೂರಪ್ಪ ಹೇಳಿದರು.

ಬೆಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ರಾಜ್ಯದಲ್ಲಿ ಬರಗಾಲ ಆವರಿಸಿದ ಹಿನ್ನೆಲೆಯಲ್ಲಿ ರಾಜ್ಯ ಬಿಜೆಪಿ ಮುಖಂಡರು ಬರ ಅಧ್ಯಯನ ನಡೆಸುತ್ತಿದ್ದಾರೆ. ಬರ ಅಧ್ಯಯನದ ನಂತರ ಸರ್ಕಾರಕ್ಕೂ ಒಂದು ವಾಸ್ತವದ ಚಿತ್ರಣ ನೀಡುತ್ತೇವೆ ಎಂದರು.

ರಸ್ತೆಗಳು ಡಾಂಬರೀಕರಣಗೊಂಡಿಲ್ಲ. ಬೀದಿ ದೀಪಗಳಿಲ್ಲದೆ ರಾತ್ರಿ ವೇಳೆ ರಸ್ತೆ ಕಾಣುತ್ತಿಲ್ಲ. ಕ್ಷೇತ್ರದ ಅಭಿವೃದ್ದಿಗೆ ಅನುದಾನ ನೀಡುವ ವಿಚಾರದಲ್ಲಿ ಕಾಂಗ್ರೆಸ್ ತಾರತಮ್ಯ ಮಾಡುತ್ತಿದೆ. ರಸ್ತೆಗಳು ಸಂಪೂರ್ಣ ಹಾಳಾಗಿವೆ. ಚಿಕ್ಕಬಾಣಾವರ ಕೆರೆಯಲ್ಲಿ ತ್ಯಾಜ್ಯ ತುಂಬಿದೆ. ಕೆರೆ ಅಭಿವೃದ್ದಿಗೊಳಿಸುವ ನಿಟ್ಟಿನಲ್ಲಿ ಕೆಲಸ ಆಗಬೇಕಿದೆ. ಈ ಪರಿಸ್ಥಿತಿ ಸರಿ ಮಾಡಲು ಏನು ಕೆಲಸ ಮಾಡಿದ್ದೀರಿ? ನಮ್ಮ ಶಾಸಕರ ಜೊತೆ ಮಾತನಾಡಿದ್ದೀರಾ? ನಮ್ಮ ಸರ್ಕಾರ ಇದ್ದಾಗ ಹೇಗೆ ಅಭಿವೃದ್ದಿಯಾಗಿದೆ ಅನ್ನೋದನ್ನ ಜನ ಹೇಳುತ್ತಾರೆ. ಸರ್ಕಾರ ಆರ್ಥಿಕ ದಿವಾಳಿಯಾಗಿದೆ ಎಂದು ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು.

ಬಿಎಸ್​ ಯಡಿಯೂರಪ್ಪ ಅವರ ತಂಡ ಇಂದು (ನ.11) ದೊಡ್ಡಣ್ಣ ಇಂಡಸ್ಟ್ರಿ ಏರಿಯಾ, ನೆಲಗದರನಹಳ್ಳಿಗೆ ಭೇಟಿ ನೀಡಿತು. ಯಡಿಯೂರಪ್ಪ ಅವರಿಗೆ ಕ್ಷೇತ್ರದ ಶಾಸಕ ಮುನಿರಾಜು ಸಾಥ್​ ನೀಡಿದರು.

RELATED ARTICLES
- Advertisment -
Google search engine

Most Popular