ಮಂಡ್ಯ: ತಮಿಳುನಾಡಿಗೆ ನೀರು ಬಿಡುವುದಿಲ್ಲ ಎಂದು ಹೇಳಿ ಮತ್ತೆ ಕಾವೇರಿ ನೀರು ಹರಿಸುವ ಮೂಲಕ ರಾಜ್ಯ ಸರ್ಕಾರ ರೈತರಿಗೆ ಮತ್ತೆ ದ್ರೋಹ ಎಸಗಿದೆ.
ಕಾವೇರಿ ನದಿ ನೀರು ಪ್ರಾಧಿಕಾರದ ಆದೇಶದ ಬೆನ್ನಲ್ಲೆ ಕೆ.ಆರ್.ಎಸ್ ಡ್ಯಾಂ ನಿಂದ ತಮಿಳುನಾಡಿಗೆ ಮತ್ತೆ 4 ಸಾವಿರ ಕ್ಯೂಸೆಕ್ ನೀರು ಬಿಡುಗಡೆ ಮಾಡಲಾಗಿದೆ.
15 ದಿನಗಳ ಕಾಲ 5 ಸಾವಿರ ಕ್ಯೂಸೆಕ್ ನೀರು ಬಿಡಲು ಪ್ರಾಧಿಕಾರ ಆದೇಶ ನೀಡಿದ್ದು, ಪ್ರಾಧಿಕಾರದ ಆದೇಶ ಒಪ್ಪಲು ಸಾಧ್ಯವಿಲ್ಲ. ನೀರು ಬಿಡುವುದಿಲ್ಲ ಸುಪ್ರೀಂಕೋರ್ಟ್ ಗೆ ಮೆಲ್ಮನವಿ ಸಲ್ಲಿಸುವುದಾಗಿ ರಾಜ್ಯ ಸರ್ಕಾರ ಹೇಳಿತ್ತು.
ರಾಜ್ಯ ಸರ್ಕಾರದ ಇಬ್ಬಗೆಯ ದ್ರೋಹಕ್ಕೆ ಜಿಲ್ಲೆಯ ರೈತರು ಆಕ್ರೋಶ ವ್ಯಕ್ತಪಡಿಸಿದ್ದು, ಮತ್ತೆ ಕಾವೇರಿ ಚಳವಳಿ ತೀವ್ರಗೊಳಿಸಲು ರೈತರು ನಿರ್ಧರಿಸಿದ್ದಾರೆ.