Thursday, April 17, 2025
Google search engine

Homeರಾಜ್ಯವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ ಪ್ರತಿಭಟನೆ

ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ ಪ್ರತಿಭಟನೆ

ಬೆಂಗಳೂರು: ಫ್ರೀಡಂ ಪಾರ್ಕ್‌ನಲ್ಲಿ ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ ಪ್ರತಿಭಟನೆ ನಡೆಸಲಿದೆ.

ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರ ಜೊತೆ ಸಭೆ ನಡೆಸಿದರೂ ಮಾತುಕತೆ ವಿಫಲವಾದ ಹಿನ್ನೆಲೆಯಲ್ಲಿ ಇಂದು ಸಂಘಟನೆ ರಾಜ್ಯಾದ್ಯಂತ ಪ್ರತಿಭಟನೆಗೆ ಕರೆ ನೀಡಿದೆ. ಈ ಪ್ರತಿಭಟನೆಯಿಂದ ಸರ್ಕಾರಿ ಶಾಲೆಯಲ್ಲಿ ತರಗತಿಗಳು ವ್ಯತ್ಯಯವಾಗುವ ಸಾಧ್ಯತೆಯಿದೆ.

ಬೃಹತ್ ಪ್ರತಿಭನೆ ಅಂಗವಾಗಿ ಆ.1 ರಿಂದಲೇ ವಿವಿಧ ಸ್ವರೂಪದ ಹೋರಾಟಗಳನ್ನು ರಾಜ್ಯಾದ್ಯಂತ ನಡೆಸಲಾಗುತ್ತಿದೆ.

ಬೇಡಿಕೆ ಏನು?

ಸರ್ಕಾರ 2017 ರ ವೃಂದ ಮತ್ತು ನೇಮಕಾತಿ ನಿಯಮಗಳು 2016ಕ್ಕಿಂತ ಮೊದಲು ನೇಮಕಾತಿ ಹೊಂದಿದ ಶಿಕ್ಷಕರಿಗೆ ಅನ್ವಯವಾಗುವುದಿಲ್ಲ ಎಂದು ಕಾರ್ಯಾದೇಶ ಹೊರಡಿಸಿ, ಮೂಲತಃ 1 ರಿಂದ 7, 8ಕ್ಕೆ ನೇಮಕ ಹೊಂದಿದ ಶಿಕ್ಷಕರನ್ನು ಪಿಎಸ್‌ಟಿ ಎಂದು ಪದನಾಮ ಮಾಡಿ 1 ರಿಂದ 5ಕ್ಕೆ ಹಿಂಬಡ್ತಿ ನೀಡಿದೆ. ಇದರಿಂದ ಸುಮಾರು 1.20 ಲಕ್ಷ ಶಿಕ್ಷಕರಿಗೆ ಅನ್ಯಾಯವಾಗಲಿದೆ. ಹಾಗಾಗಿ ಕೂಡಲೇ ಈ ಆದೇಶವನ್ನು ಹಿಂದಕ್ಕೆ ಪಡೆಯಬೇಕು

2016ಕ್ಕಿಂತ ಮೊದಲು ನೇಮಕ ಹೊಂದಿದ ಶಿಕ್ಷಕರನ್ನು ಎನ್‌ಸಿಟಿ ಈ ನಿಯಮಾವಳಿ ಪ್ರಕಾರ ಪದವಿ ವಿದ್ಯಾರ್ಹತೆ ಹೊಂದಿದ ಎಲ್ಲ ಸೇವಾನಿರತ ಶಿಕ್ಷಕರನ್ನು ಜಿಪಿಟಿ ಶಿಕ್ಷಕರೆಂದು ಸೇವಾ ಜೇಷ್ಠತೆಯೊಂದಿಗೆ ಪುನರ್ ಪದನಾಮಕರಣ ಮಾಡಬೇಕು

ಈ ಮೊದಲಿನ ಪ್ರೌಢಶಾಲಾ ಬಡ್ತಿ ನಿಯಮಾವಳಿಯಂತೆ 2016ರ ಮೊದಲು ನೇಮಕಾತಿ ಹೊಂದಿದ ಹಾಗೂ ಬಿ ಇಡಿ ಪದವಿ ಪಡೆದ ಪ್ರಾಥಮಿಕ ಶಾಲಾ ಶಿಕ್ಷಕರು ಖಾಲಿಯಾಗುವವರೆಗೂ ಪ್ರೌಢಶಾಲೆಗೆ ಬಡ್ತಿ ನೀಡಬೇಕು. ನಂತರದಲ್ಲಿ ಹೊಸದಾಗಿ ನೇಮಕಗೊಂಡ ಜಿಪಿಟಿ ಶಿಕ್ಷಕರನ್ನು ಪರಿಗಣಿಸಬೇಕು. ಈ ಮೊದಲಿನ ನಿಯಮಾವಳಿಯಂತೆ ಮುಖ್ಯ ಶಿಕ್ಷಕರ ಹುದ್ದೆಗೆ ವಿದ್ಯಾರ್ಹತೆಯನ್ನು ಪರಿಗಣಿಸದೇ ಅಖಂಡ ಸೇವಾಹಿರಿತನದ ಆಧಾರದ ಮೇಲೆ ಬಡ್ತಿ ನೀಡಬೇಕು.

RELATED ARTICLES
- Advertisment -
Google search engine

Most Popular