Sunday, April 20, 2025
Google search engine

Homeಅಪರಾಧಕಾನೂನುಆರೋಪಿಗಳ ಕಟ್ಟಡ ಅಕ್ರಮ ತೆರವಿಗೆ ಸುಪ್ರೀಂ ಕೋರ್ಟ್ ತಡೆ

ಆರೋಪಿಗಳ ಕಟ್ಟಡ ಅಕ್ರಮ ತೆರವಿಗೆ ಸುಪ್ರೀಂ ಕೋರ್ಟ್ ತಡೆ

ನವದೆಹಲಿ: ನಮ್ಮ ಅನುಮತಿ ಇಲ್ಲದೆ ದೇಶದಲ್ಲಿ ಯಾವುದೇ ಆರೋಪಿಯ ಆಸ್ತಿಗಳನ್ನು ತೆರವು ಮಾಡುವಂತಿಲ್ಲ ಎಂದು ಅಧಿಕಾರಿಗಳಿಗೆ ನಿರ್ದೇಶನ ನೀಡಿರುವ ಸುಪ್ರೀಂ ಕೋರ್ಟ್, ಅಕ್ರಮವಾಗಿ ಕಟ್ಟಡಗಳನ್ನು ಉರುಳಿಸುವ ಒಂದೇ ಒಂದು ನಿದರ್ಶನವಿದ್ದರೂ ಅದು ಸಾಂವಿಧಾನಿಕ ತತ್ವಗಳಿಗೆ ವಿರುದ್ಧವಾದುದ್ದಾಗಿದೆ ಎಂದು ಅಭಿಪ್ರಾಯ ಪಟ್ಟಿದೆ.

ಈ ಆದೇಶವು ಸಾರ್ವಜನಿಕ ರಸ್ತೆಗಳು, ಫುಟ್‌ಪಾತ್‌ಗಳು ಮತ್ತು ಇತರೆಡೆ ನಿರ್ಮಾಣ ಮಾಡಲಾಗಿರುವ ಅಕ್ರಮ ಕಟ್ಟಡಗಳಿಗೆ ಅನ್ವಯಿಸುವುದಿಲ್ಲ ಎಂದು ನ್ಯಾಯಮೂರ್ತಿಗಳಾದ ಬಿ.ಆರ್. ಗವಾಯಿ ಮತ್ತು ಕೆ.ವಿ. ವಿಶ್ವನಾಥನ್ ಅವರನ್ನೊಳಗೊಂಡ ಪೀಠ ಹೇಳಿದೆ.
ಅಕ್ರಮವಾಗಿ ಕಟ್ಟಡಗಳನ್ನು ತೆರವು ಮಾಡಿದ ಒಂದೇ ಒಂದು ನಿದರ್ಶನವಿದ್ದರೂ ಅದು ನಮ್ಮ ಸಾಂವಿಧಾನಿಕ ತತ್ವಗಳಿಗೆ ವಿರುದ್ಧವಾದದ್ದಾಗಿದೆ’ ಎಂದು ಪೀಠ ಹೇಳಿದೆ.

ಹಲವು ರಾಜ್ಯಗಳಲ್ಲಿ ಅಪರಾಧ ಪ್ರಕರಣಗಳಲ್ಲಿ ಭಾಗಿಯಾದ ಆರೋಪಿಗಳ ಕಟ್ಟಡಗಳನ್ನು ಅಕ್ರಮವಾಗಿ ತೆರವು ಮಾಡಲಾಗಿದೆ ಎಂದು ಆರೋಪಿಸಿ ಸಲ್ಲಿಸಲಾಗಿರುವ ಅರ್ಜಿಗಳನ್ನು ಸುಪ್ರೀಂ ಕೋರ್ಟ್ ವಿಚಾರಣೆ ನಡೆಸುತ್ತಿದೆ. ಈ ಬಗ್ಗೆ ನ್ಯಾಯಾಲಯಕ್ಕೆ ಉತ್ತರಿಸಿದ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ, ಅಕ್ರಮ ಕಟ್ಟಡಗಳ ತೆರವು ಕಾರ್ಯಾಚರಣೆ ಸುತ್ತ ಸಂಕಥನ ರಚಿಸಲಾಗಿದೆ ಎಂದು ಹೇಳಿದ್ದಾರೆ. ಪ್ರಕರಣದ ಮುಂದಿನ ವಿಚಾರಣೆಯನ್ನು ನ್ಯಾಯಾಲಯ ಅಕ್ಟೋಬರ್ ೧ಕ್ಕೆ ಮುಂದೂಡಿದೆ.

RELATED ARTICLES
- Advertisment -
Google search engine

Most Popular