Monday, April 7, 2025
Google search engine

Homeರಾಜ್ಯಇಂದು ವಿಶ್ವವಿಖ್ಯಾತ ಬೆಂಗಳೂರು ಕರಗ ಮಹೋತ್ಸವಕ್ಕೆ ಚಾಲನೆ

ಇಂದು ವಿಶ್ವವಿಖ್ಯಾತ ಬೆಂಗಳೂರು ಕರಗ ಮಹೋತ್ಸವಕ್ಕೆ ಚಾಲನೆ

ಬೆಂಗಳೂರು: ವಿಶ್ವ ವಿಖ್ಯಾತ ಬೆಂಗಳೂರು ಕರಗ ಮಹೋತ್ಸವಕ್ಕೆ ಇಂದು ಚಾಲನೆ ನೀಡಲಾಗುತ್ತಿದ್ದು, ಏಪ್ರಿಲ್ 4 ರಿಂದ ಏಪ್ರಿಲ್ 14ರವರೆಗೆ ನಡೆಯಲಿದ್ದು, ಈ ಬಾರಿ 20 ಲಕ್ಷಕ್ಕೂ ಹೆಚ್ಚು ಮಂದಿ ಭಾಗಿಯಾಗುವ ನಿರೀಕ್ಷೆಯಿದೆ.

ಇಂದಿನಿಂದ ಉತ್ಸವ ಆರಂಭವಾಗಿ ಏಪ್ರಿಲ್ 14 ರವರೆಗೆ ನಡೆಯಲಿದ್ದು, ವಿವಿಧ ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ಶ್ರೀ ಧರ್ಮರಾಯಸ್ವಾಮಿ ಕರಗ ವಿಜೃಂಭಣೆಯಿಂದ ನಡೆಯಲಿದೆ. ಕಳೆದ 12 ವರ್ಷಗಳಿಂದ ಜ್ಞಾನೇಂದ್ರ ಅವರು ಕರಗ ಹೊರುತ್ತಿದ್ದಾರೆ. ಒಟ್ಟಾರೆ ಏ.4 ರಂದು ಧ್ವಜಾರೋಹಣ, ಪೂಜಾ ವಿಧಿವಿಧಾನದ ಮೂಲಕ ಅರಂಭವಾಗುವ ಕರಗ ಏ.14ರವರೆಗೆ ಜರುಗಲಿದೆ.

‘ಕರಗ’ ಎಂಬ ಹೆಸರು ಹೂವಿನ ದಿಂಡು ಮತ್ತು ದೇವಿಯ ವಿಗ್ರಹವನ್ನು ಹೊಂದಿರುವ ಕಲಶದ ಅನುರೂಪವಾಗಿದೆ. ಕರಗವನ್ನು ಮುಟ್ಟದೆ ಅಂದರೆ ಹೂವಿನ ದಿಂಡಿನಿಂದ ಅಲಂಕೃತಗೊಂಡ ಮಣ್ಣಿನ ಮಡಿಕೆ ಅದರಲ್ಲಿರುವ ಕಲಶವನ್ನು ಕೈಯಲ್ಲಿ ಮುಟ್ಟದೆ ಆ ಕಲಶವನ್ನು ಹೊರುವ ವ್ಯಕ್ತಿಯ ತಲೆ ಮೇಲೆ ಇಡಲಾಗುತ್ತದೆ. ಕರಗವನ್ನು ಹೊರುವವನು ಮಹಿಳೆಯಂತೆ ಕಂಕಣ, ಮಂಗಳ-ಸೂತ್ರ ಮತ್ತು ಹಣೆಯ ಮೇಲೆ ಸಿಂಧೂರವನ್ನು ಇಟ್ಟುಕೊಂಡಿರುತ್ತಾನೆ. ಹಿಂದೂ ಮಹಾಕಾವ್ಯವಾದ ಮಹಾಭಾರತದಲ್ಲೂ ನಾವು ಕರಗ ಉತ್ಸವದ ಉಲ್ಲೇಖವನ್ನು ಗುರುತಿಸಬಹುದಾಗಿದೆ. ಕರಗವು ದ್ರೌಪದಿಯನ್ನು ಸರ್ವೋತ್ಕೃಷ್ಟ ಮಹಿಳೆ ಎಂದು ಚಿತ್ರಿಸುತ್ತದೆ ಮತ್ತು ಅವಳನ್ನು ಶಕ್ತಿ ದೇವತೆ ಎಂದು ಗೌರವಿಸುತ್ತದೆ.

RELATED ARTICLES
- Advertisment -
Google search engine

Most Popular