ಯಳಂದೂರು : ತಾಲೂಕಿನ ಗುಂಬಳ್ಳಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಈಚೆಗೆ ಕಳ್ಳತನ ನಡೆದಿದ್ದು ಸಾವಿರಾರು ರೂಪಾಯಿ ಮೌಲ್ಯದ ವಸ್ತುಗಳ ಕಳ್ಳತನವಾಗಿದೆ.
ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಜೂ. ೦೮ ರಂದು ಈ ಕಳ್ಳತನ ನಡೆದಿದೆ. ಶಾಲೆಯಲ್ಲಿದ್ದ ೨ ಕಂಪ್ಯೂಟರ್, ೨ ಪ್ರಾಜೆಕ್ಟರ್, ಸ್ಪೀಕರ್, ಯುಪಿಎಸ್ ಬ್ಯಾಟರಿಗಳನ್ನು ಸೇರಿದಂತೆ ವಿವಿಧ ವಸ್ತುಗಳನ್ನು ಕಳ್ಳರು ಬಾಗಿಲಿನ ಬೀಗಗಳನ್ನು ಒಡೆದು ಕಳ್ಳತನ ಮಾಡಿದ್ದಾರೆ. ಈ ಬಗ್ಗೆ ಶಾಲೆಯ ಮುಖ್ಯ ಶಿಕ್ಷಕಿ ಪುಟ್ಟನಂಜಮ್ಮ ಯಳಂದೂರು ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಸ್ಥಳಕ್ಕೆ ಪೊಲೀಸರು ಹಾಗೂ ಶ್ವಾನದಳದ ಸಿಬ್ಬಂಧಿ ಭೇಟಿ ನೀಡಿ ಪರಿಶೀಲಿಸಿ ಮುಂದಿನ ಕ್ರಮ ವಹಿಸಿದ್ದಾರೆ.