ಬೆಂಗಳೂರು: ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಮತ್ತು ಸಚಿವ ಸಂಪುಟ ಪುನರ್ ರಚನೆ ಸದ್ಯಕ್ಕೆ ಯಾವುದು ಇಲ್ಲ ಎಂದು ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವ ಬೋಸರಾಜು ಹೇಳಿದ್ದಾರೆ.
ಸಿಎಂ ಸಿದ್ದರಾಮಯ್ಯಅವರ ದೆಹಲಿ ಪ್ರವಾಸದ ಬೆನ್ನಲ್ಲೆ ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಮತ್ತು ಸಂಪುಟ ಪುನರ್ ರಚನೆ ಬಗೆಗಿನ ಚರ್ಚೆಗೆ ಪ್ರತಿಕ್ರಿಯೆ ನೀಡಿದ ಅವರು,ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಅಜೆಂಡಾದಲ್ಲೇ ಇಲ್ಲ.ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಊಹಾಪೋಹಗಳು ಅಷ್ಟೇ ಎಂದರು.
ನಮಗೆ ಸಿಕ್ಕಿರುವ ಮಾಹಿತಿ ಪ್ರಕಾರ ಯಾವುದು ಇಲ್ಲ. ನಾನು 55 ವರ್ಷಗಳಿಂದ ಪಕ್ಷದಲ್ಲಿ ಇದ್ದೇನೆ. ಕಾಂಗ್ರೆಸ್ ನಲ್ಲಿ ಎಲ್ಲಾ ಜವಾಬ್ದಾರಿ ಪಡೆದುಕೊಂಡು ಬಂದಿದ್ದೇನೆ. ಏನೇ ಬದಲಾವಣೆ ಆಗಬೇಕಾದ್ರೆ ಸಮಯ ಬಂದಾಗ ಹೈಕಮಾಂಡ್ ನಿರ್ಧಾರ ಮಾಡುತ್ತದೆ ಎಂದು ತಿಳಿಸಿದರು. ಸಿಎಂ ರಾಜ್ಯದ ಸ್ಥಿತಿ ಬಗ್ಗೆ ಪಕ್ಷದ ವಿಷಯ ಮಾತ್ರ ಹೈಕಮಾಂಡ್ ಬಳಿ ಚರ್ಚೆ ಮಾಡಿರುತ್ತಾರೆ ಎಂದರು ನುಡಿದರು.