Friday, April 11, 2025
Google search engine

Homeರಾಜಕೀಯಕುಟುಂಬ ರಾಜಕಾರಣ ವಿರುದ್ಧದ ಹೋರಾಟದಲ್ಲಿ ಯಾವುದೇ ರಾಜಿ ಇಲ್ಲ : ಮತ್ತೆ ಗುಡುಗಿದ ಶಾಸಕ ಯತ್ನಾಳ್

ಕುಟುಂಬ ರಾಜಕಾರಣ ವಿರುದ್ಧದ ಹೋರಾಟದಲ್ಲಿ ಯಾವುದೇ ರಾಜಿ ಇಲ್ಲ : ಮತ್ತೆ ಗುಡುಗಿದ ಶಾಸಕ ಯತ್ನಾಳ್

ನವದೆಹಲಿ : ಬಿಜೆಪಿ ರಾಜ್ಯಾಧ್ಯಕ್ಷ ನಾಯಕತ್ವದ ವಿರುದ್ಧ ನಿಲುವು ಹೊಂದಿದ್ದ ಕಾರಣಕ್ಕಾಗಿ ಶಾಸಕ ಬಸನಗೌಡ ಪಾಟೀಲ ಬಿಜೆಪಿ ಕೇಂದ್ರ ಶಿಸ್ತು ಸಮಿತಿ ಕಾರಣ ನೀಡುವಂತೆ ನೋಟಿಸ್ ನೀಡಿತ್ತು. ಈ ವಿಚಾರವಾಗಿ ಇಂದು ಶಾಸಕ ಯತ್ನಾಳ್ ಅವರು ಕೇಂದ್ರೀಯ ಶಿಸ್ತು ಸಮಿತಿಯ ಎದುರು ಹಾಜರಾಗಿ ಉತ್ತರ ನೀಡಲಿದ್ದು, ಅದಕ್ಕೂ ಮುನ್ನ ಮಾಧ್ಯಮಗಳ ಜೊತೆಗೆ ಮಾತನಾಡಿದ ಅವರು, ಕುಟುಂಬ ರಾಜಕಾರಣದ ವಿರುದ್ಧದ ಹೋರಾಟದಲ್ಲಿ ಯಾವುದೇ ರಾಜಿ ಇಲ್ಲ ಎಂದು ಮತ್ತೆ ಬಿಎಸ್ ಯಡಿಯೂರಪ್ಪ ಕುಟುಂಬದ ವಿರುದ್ಧ ಗುಡುಗಿದರು.

ನವದೆಹಲಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಶಾಸಕ ಯತ್ನಾಳ್ ಶೋಕಾಸ್ ನೋಟಿಸ್ ಗೆ ಸಮಗ್ರವಾದಂತಹ ಉತ್ತರ ಬರೆದಿದ್ದೇನೆ. ಶೋಕಾಸ್ ನೋಟಿಸ್ ಗೆ ಆರು ಪುಟಗಳ ಸಮಗ್ರ ಉತ್ತರವನ್ನು ಸಿದ್ಧಪಡಿಸಿದ್ದೇನೆ. ಕುಟುಂಬ ರಾಜಕಾರಣ ವಿರುದ್ಧದ ಹೋರಾಟದಲ್ಲಿ ಯಾವುದೇ ರಾಜಿ ಇಲ್ಲ. ರಾಜ್ಯ ಬಿಜೆಪಿಯಲ್ಲಿ ಬಿಎಸ್ ಯಡಿಯೂರಪ್ಪ ಕುಟುಂಬ ರಾಜಕಾರಣದ ಬಗ್ಗೆ ವಿವರಣೆ ನೀಡಿದ್ದೇನೆ. ಎಲ್ಲಾ ಸಂಸದರು ಪಕ್ಷದ ಹಿತ ದೃಷ್ಟಿಯಿಂದ ಮಾತನಾಡಿದ್ದಾರೆ ಎಂದು ಅವರು ತಿಳಿಸಿದರು.

ವಕ್ಫ್ ವಿರುದ್ಧ ಬಿವೈ ವಿಜಯೇಂದ್ರ ಪಾದಯಾತ್ರೆ ಆರಂಭಿಸಿರುವ ವಿಚಾರವಾಗಿ ಪ್ರತಿಕ್ರಿಯೆ ನೀಡಿದ ಅವರು, ಈಗ ಬಿವೈ ವಿಜಯೇಂದ್ರ ಪ್ರವಾಸ ಮಾಡುವ ಅಗತ್ಯವಿಲ್ಲ. ಈಗಾಗಲೇ ಎಲ್ಲಾ ಕಡೆಗೆ ನಾವು ಪ್ರವಾಸ ಮಾಡಿದ್ದೇವೆ. ರಾಜ್ಯಾಧ್ಯಕ್ಷರಿಗೆ ಈಗ ಜ್ಞಾನೋದಯ ಆಗಿದೆ ಅವರಿಗೆ ಒಳ್ಳೆಯದಾಗಲಿ ಎಂದು ಅವರು ಬಿವೈ ವಿಜಯೇಂದ್ರ ಅವರಿಗೆ ತಿರುಗೇಟು ನೀಡಿದರು.

RELATED ARTICLES
- Advertisment -
Google search engine

Most Popular