Friday, June 12, 2026
Google search engine

Homeಸ್ಥಳೀಯನೆಲ-ಜಲ-ಭಾಷೆ ವಿಚಾರದಲ್ಲಿ ರಾಜಿ ಇಲ್ಲ : ಪ್ರಿಯಾಂಕ್ ಖರ್ಗೆ

ನೆಲ-ಜಲ-ಭಾಷೆ ವಿಚಾರದಲ್ಲಿ ರಾಜಿ ಇಲ್ಲ : ಪ್ರಿಯಾಂಕ್ ಖರ್ಗೆ

ಬೆಂಗಳೂರು :  ಮೇಕೆದಾಟು ಯೋಜನೆಗೆ ವಿರೋಧ ವ್ಯಕ್ತಪಡಿಸಿರುವ ತಮಿಳುನಾಡು ಸಿಎಂ ವಿಜಯ್ ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ಆಗಮಿಸುತ್ತಿರುವ ಹಿನ್ನೆಲೆ ಅವರ ವಿರುದ್ದ ಕಪ್ಪುಬಾವುಟ ಪ್ರದರ್ಶನಕ್ಕೆ ಮುಂದಾಗಿದ್ದಾರೆ.

ಈ ಕುರಿತು ಮಾತನಾಡಿರುವ ಗೃಹ ಸಚಿವ ಪ್ರಿಯಾಂಕ್ ಖರ್ಗೆ, ನೆಲ, ಜಲ, ಭಾಷೆಯ ವಿಚಾರದಲ್ಲಿ ರಾಜಿ ಇಲ್ಲ.  ವಿಜಯ್ ಬಂದು ದೇವರ ದರ್ಶನ ಪಡೆದು ಹೋಗಲಿ.  ಬಂದು  ಹೋದ ತಕ್ಷಣ ನಮ್ಮ ಹಕ್ಕು ಬಿಟ್ಟು ಕೊಡುತ್ತೀವಾ.  ಸುಪ್ರೀಂ ಕೋರ್ಟ್ ಈಗಾಗಲೇ ಸ್ಪಷ್ಟವಾಗಿ ಹೇಳಿದೆ ಎಂದು ತಿಳಿಸಿದರು.

ದೆಹಲಿಯಿಂದ ಮಂಗಳೂರಿಗೆ ತಮಿಳುನಾಡು ಸಿಎಂ ವಿಜಯ್ ಆಗಮಿಸುತ್ತಿದ್ದು ಬಿಗಿ ಪೊಲೀಸ್ ಭದ್ರತೆ ವಹಿಸಲಾಗಿದೆ. ಕೆಲವೇ ಕ್ಷಣಗಳಲ್ಲಿ ಸಿಎಂ ವಿಜಯ್  ಮಂಗಳೂರಿಗೆ ಆಗಮಿಸಲಿದ್ದಾರೆ.

RELATED ARTICLES
- Advertisment -
Google search engine

Most Popular