Friday, April 11, 2025
Google search engine

Homeರಾಜಕೀಯಶಾಸಕ ಮುನಿರತ್ನ ಬಂಧನದ ಹಿಂದೆ ದ್ವೇಷಕಾರಣವಿಲ್ಲ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್

ಶಾಸಕ ಮುನಿರತ್ನ ಬಂಧನದ ಹಿಂದೆ ದ್ವೇಷಕಾರಣವಿಲ್ಲ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್

ಬೆಳಗಾವಿ: ಬಿಜೆಪಿ ಶಾಸಕ, ಮಾಜಿ ಸಚಿವ ಮುನಿರತ್ನ ಅವರ ಬಂಧನದ ಹಿಂದೆ ಯಾವುದೇ ದ್ವೇಷ ರಾಜಕಾರಣವಿಲ್ಲ; ಅವರಿಗೀಗ ಮಾಡಿದ್ದುಣ್ಣೋ ಮಾರಾಯ ಎಂಬಂತಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಖಾತೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು.

ಬೆಳಗಾವಿಯಲ್ಲಿ ವಿಶ್ವ ಪ್ರಜಾಪ್ರಭುತ್ವ ದಿನಾಚರಣೆ ವೇಳೆ ಮಾಧ್ಯಮಗಳೊಂದಿಗೆ ಮಾತನಾಡಿದ ಸಚಿವರು, ಶಾಸಕ ಮುನಿರತ್ನ ಅವರ ವಿಚಾರದಲ್ಲಿ ಯಾರು ದ್ವೇಷ ರಾಜಕಾರಣ ಮಾಡುತ್ತಾರೆ ಅವರು ಮಾಡಿರುವುದು ಎಲ್ಲರಿಗೂ ಗೊತ್ತಿದೆ. ಕಾಂಗ್ರೆಸ್ ನಾಯಕರೇನು ಮುನಿರತ್ನ ಅವರಿಗೆ ಕೆಟ್ಟ ಮಾತುಗಳಿಂದ ಬೈಯಿರಿ, ಅಥವಾ ಬ್ಲಾಕ್ ಮೇಲ್ ಮಾಡಿ ಎಂದು ಹೇಳಿದ್ದಾರಾ? ಮಾಡಿದ್ದುಣ್ಣೋ ಮಾರಾಯ ಎನ್ನುವಂತಾಗಿದೆ ಅವರ ಸ್ಥಿತಿ ಎಂದು ಕಿಡಿಕಾರಿದರು.

ಕೆಲ ರಾಜಕಾರಣಗಳು ಮೊದಲು ಕೆಟ್ಟದಾಗಿ ಮಾತನಾಡುತ್ತಾರೆ; ಆಮೇಲೆ ತಿರುಚಿದ್ದಾರೆ, ದ್ವೇಷದ ರಾಜಕಾರಣ ಎಂದೆಲ್ಲ ಹೇಳುತ್ತಾರೆಂಬ ಪತ್ರಕರ್ತರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಸಚಿವರು, ಕೆಲವೊಬ್ಬರು ಮಾತನಾಡುತ್ತಾರೆ ನಿಜ; ಆದರೆ, ಅದನ್ನು ಪ್ರಮಾಣಿಕರಿಸಿ ನೋಡಬೇಕು. ಆದರೆ, ಮುನಿರತ್ನ ವಿಚಾರದಲ್ಲಿ ಏನಿದೆ ಎನ್ನುವುದು ಎಲ್ಲರಿಗೂ ಗೊತ್ತಿದೆ. ಇದಕ್ಕೆ ಕನ್ನಡಿ ಹಿಡಿಯುವ ಅವಶ್ಯಕತೆ ಇಲ್ಲ ಎಂದು ಸಚಿವರು ಹೇಳಿದರು.

ಮುನಿರತ್ನ ಅವರು ಮಹಿಳೆಯರ ಬಗ್ಗೆ ಆಡಿರುವ ಕೀಳು ಮಾತುಗಳನ್ನು ಯಾರೂ ಕೂಡ ಸಹಿಸಲು ಸಾಧ್ಯವಿಲ್ಲ. ಜಾತಿ, ಜಾತಿಗಳ ಮಧ್ಯೆ ಸಂಘರ್ಷ ತರುವಂತಹ ಮಾತುಗಳನ್ನು ಯಾರೂ ಕೂಡ ಆಡಬಾರದೆಂದು ಸಚಿವರು ಇದೇ ವೇಳೆ ಕಿವಿಮಾತು ಹೇಳಿದರು.

RELATED ARTICLES
- Advertisment -
Google search engine

Most Popular