ರಾಮನಗರ: ರಾಮನಗರ ಜಿಲ್ಲೆಗೆ ಬೆಂಗಳೂರು ದಕ್ಷಿಣ ಎಂಬ ಹೆಸರಿಡುವ ವಿಚಾರಕ್ಕೆ ಸಂಬಂಧಿಸಿ ರಾಮನಗರ ಜಿಲ್ಲೆಯ ಮಾಗಡಿಯಲ್ಲಿ ಸಚಿವ ರಾಮಲಿಂಗಾರೆಡ್ಡಿ ಪ್ರತಿಕ್ರಿಯೆ ನೀಡಿದ್ದಾರೆ. ಹೆಸರು ಬದಲಾವಣೆ ಮಾಡುವುದರಿಂದ ಯಾವುದೇ ತೊಂದರೆ ಇಲ್ಲ. ಹೆಸರು ಬದಲಾವಣೆ ಮಾಡಿದರೆ ನಷ್ಟ ಆಗಲ್ಲ. ಜಿಲ್ಲೆಗೆ ಹೆಚ್ಚಿನ ಅನುದಾನ, ಮೂಲಭೂತ ಸೌಕರ್ಯ ಸಿಗಬೇಕು ಎಂದು ಸಚಿವ ರಾಮಲಿಂಗಾರೆಡ್ಡಿ ಹೇಳಿದ್ದಾರೆ.
ರಾಮನಗರ ಜಿಲ್ಲೆಗೆ ಬೆಂಗಳೂರು ದಕ್ಷಿಣ ಹೆಸರು ಮರುನಾಮಕರಣ ವಿಚಾರ ಸಂಬಂಧ ಮಾಗಡಿಯಲ್ಲಿ ಉಸ್ತುವಾರಿ ಸಚಿವ ರಾಮಲಿಂಗಾರೆಡ್ಡಿ ಅವರು ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದರು. ಈ ವೇಳೆ ಮಾತನಾಡಿದ ಅವರು, ಮರುನಾಮಕರಣದ ವಿಚಾರ ನನಗೆ ಗೊತ್ತಿಲ್ಲ. ನನಗೆ ವೈಯಕ್ತಿಕವಾಗಿ ಡಿಕೆ ಶಿವಕುಮಾರ್ ಸಿಕ್ಕಿಲ್ಲ, ಚರ್ಚೆ ಮಾಡಿಲ್ಲ. ಆದರೆ ಹೆಸರು ಬದಲಾವಣೆ ಮಾಡೋದ್ರಿಂದ ಯಾವುದೇ ತೊಂದರೆ ಇಲ್ಲ. ಹೆಸರು ಬದಲಾವಣೆ ಮಾಡಿದ್ರೆ ಯಾವುದೇ ನಷ್ಟ ಆಗಲ್ಲ.