Wednesday, January 14, 2026
Google search engine

Homeರಾಜ್ಯಗ್ರಾಮೀಣ ಭಾಗದ ಅಭಿವೃದ್ಧಿಗೆ ಮನ್ರೇಗಾ ಯೋಜನೆಗಿಂತ ಉಪಯುಕ್ತ ಯೋಜನೆ ಬೇರೊಂದಿಲ್ಲ : ಡಿಕೆ ಶಿವಕುಮಾರ್

ಗ್ರಾಮೀಣ ಭಾಗದ ಅಭಿವೃದ್ಧಿಗೆ ಮನ್ರೇಗಾ ಯೋಜನೆಗಿಂತ ಉಪಯುಕ್ತ ಯೋಜನೆ ಬೇರೊಂದಿಲ್ಲ : ಡಿಕೆ ಶಿವಕುಮಾರ್

ಬೆಂಗಳೂರು: ಗ್ರಾಮೀಣ ಭಾಗದ ಅಭಿವೃದ್ಧಿಗೆ ನೆರವಾಗಿದ್ದ ಮನರೇಗಾ ಯೋಜನೆಯನ್ನು ಕೇಂದ್ರ ಬಿಜೆಪಿ ಸರ್ಕಾರ ಕೊಂದಿದೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಆಕ್ರೋಶ ವ್ಯಕ್ತಪಡಿಸಿದ್ದು, ಈ ಬಗ್ಗೆ ಅರಮನೆ ಮೈದಾನದಲ್ಲಿ ಮಂಗಳವಾರ ನಡೆದ “ಮನರೇಗಾ ಬಚಾವ್ ಸಂಗ್ರಾಮ” ಹೋರಾಟದ ಪೂರ್ವಸಿದ್ಧತಾ ಸಭೆಯಲ್ಲಿ ಮಾತನಾಡಿದ ಅವರು, ಶ್ರೀಮತಿ ಸೋನಿಯಾ ಗಾಂಧಿ ಅವರು ಮನಮೋಹನ್ ಸಿಂಗ್ ಅವರ ಸರ್ಕಾರದಲ್ಲಿ ಸಂವಿಧಾನದ ಮೂಲಕ ಬಡವರಿಗೆ ಉದ್ಯೋಗ ಖಾತರಿ ಹಕ್ಕನ್ನು ನೀಡಿದ್ದರು. ಇದರಿಂದ ನಮ್ಮ ರಾಜ್ಯದ ಪಂಚಾಯಿತಿ ಹಾಗೂ ಗ್ರಾಮಗಳ ಮಟ್ಟದಲ್ಲಿ ಪ್ರತಿ ವರ್ಷ 6 ಸಾವಿರ ಕೋಟಿ ಮೊತ್ತದ ಕಾಮಗಾರಿಗಳು ನಡೆಯುತ್ತಿದ್ದವು ಎಂದರು.

ಅಲ್ಲದೆ ಈ ಕೆಲಸಗಳನ್ನು ಸ್ಥಳೀಯ ಪಂಚಾಯಿತಿ ಸದಸ್ಯರು ತೀರ್ಮಾನ ಮಾಡುತ್ತಿದ್ದು, ನರೇಗಾ ಉದ್ಯೋಗ ಕಾರ್ಡ್ ಹೊಂದಿರುವವರಿಗೆ ಉದ್ಯೋಗ ನೀಡಬೇಕಿತ್ತು, ಉದ್ಯೋಗ ಸಿಗದಿದ್ದರೆ ಕೂಲಿ ನೀಡಲಾಗುತ್ತಿತ್ತು. ಇದರಲ್ಲಿ ದುರ್ಬಳಕೆ ತಡೆಗಟ್ಟಲು ಹೆಬ್ಬೆರಳಚ್ಚು ಸಂಗ್ರಹ ವಿಧಾನ ಅಳವಡಿಸಿಕೊಳ್ಳಲಾಗಿತ್ತು ಎಂದು ತಿಳಿಸಿದರು.

ಇನ್ನೂ ಈ ಯೋಜನೆಯಲ್ಲಿ ಕಾರ್ಮಿಕರಿಗೆ ಕನಿಷ್ಠ ವೇತನ ನಿಗದಿಯಾಗಿತ್ತು. ನಾವು ಬಳ್ಳಾರಿ ಪಾದಯಾತ್ರೆ ಮಾಡುವ ಸಂದರ್ಭದಲ್ಲಿ ಕೆಲವು ಮಹಿಳೆಯರನ್ನು ವಿಚಾರಿಸಿದೆವು. ಕೆಲವು ಮಹಿಳೆಯರು ಬೇರೆಯವರ ಜಮೀನಿನಲ್ಲಿ ಹೋಗಿ ಕೆಲಸ ಮಾಡಲು ಇಚ್ಛಿಸುವುದಿಲ್ಲ ಎಂದು ಹೇಳಿದ್ದರು.

ಆಗ ಕೆಪಿಸಿಸಿ ಕಾರ್ಯಾಧ್ಯಕ್ಷನಾಗಿದ್ದ ನಾನು ದೆಹಲಿಗೆ ಹೋಗಿ, ಈ ಪರಿಸ್ಥಿತಿಯನ್ನು ಸೋನಿಯಾ ಗಾಂಧಿ ಅವರಿಗೆ ತಿಳಿಸಿದೆ. ಅವರು ಸಿ.ಪಿ ಜೋಷಿ ಅವರನ್ನು ಕರೆಸಿ ಈ ವಿಚಾರದ ಬಗ್ಗೆ ಗಮನಹರಿಸಿ ಎಂದು ಸೂಚಿಸಿದರು.

RELATED ARTICLES
- Advertisment -
Google search engine

Most Popular