Friday, April 18, 2025
Google search engine

Homeರಾಜ್ಯಸಿ.ಟಿ. ರವಿ ಪ್ರಕರಣ ಮುಂದುವರಿಸುವುದರಲ್ಲಿ ಯಾವುದೇ ಅರ್ಥವಿಲ್ಲ: ಸತೀಶ್‌ ಜಾರಕಿಹೊಳಿ

ಸಿ.ಟಿ. ರವಿ ಪ್ರಕರಣ ಮುಂದುವರಿಸುವುದರಲ್ಲಿ ಯಾವುದೇ ಅರ್ಥವಿಲ್ಲ: ಸತೀಶ್‌ ಜಾರಕಿಹೊಳಿ

ಬೆಳಗಾವಿ: ಸಿ.ಟಿ. ರವಿ ಪ್ರಕರಣ ಮುಂದುವರಿಸುವುದರಲ್ಲಿ ಯಾವುದೇ ಅರ್ಥವಿಲ್ಲ. ಘಟನೆ ಆಗಿ ಹೋಗಿದೆ. ಮತ್ತೆ ಅದನ್ನು ಮುಂದುವರಿಸುವುದರಲ್ಲಿ ಅರ್ಥವೇ ಇಲ್ಲ ಎಂದು ಲೋಕೋಪಯೋಗಿ ಸಚಿವ ಸತೀಶ ಜಾರಕಿಹೊಳಿ ಹೇಳಿದರು.ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿ.ಟಿ.ರವಿ ಅವರು ಇದರಲ್ಲಿ ನನ್ನ ಪಾತ್ರವಿಲ್ಲ. ನಾನು ಅಂತಹ ಹೇಳಿಕೆ ನೀಡಿಲ್ಲ .

ಹೀಗಿರುವಾಗ ಅದನ್ನು ಸಾರ್ವಜನಿಕವಾಗಿ ಬೆಳೆಸುವುದರಲ್ಲಿ ಅರ್ಥವಿಲ್ಲ. ದೇಶದಲ್ಲಿ ಇಂಥ ಘಟನೆಗಳು ಹೊಸದಲ್ಲ. ಸಂಸತ್ ಮತ್ತು ವಿಧಾನಸಭೆಯಲ್ಲಿ ಇಂತಹ ಸಾಕಷ್ಟು ಘಟನೆಗಳು ನಡೆದಿವೆ. ಕೆಲವು ಪ್ರಸಂಗಗಳಲ್ಲಿ ಕ್ಷಮೆ ಕೇಳಿದ ಬಳಿಕ ಮುಗಿದು ಹೋಗಿವೆ ಎಂದರು.

ಕೆಲವು ಘಟನೆಗಳು ಹಾಗೆಯೇ ಮುಚ್ಚಿ ಹೋಗಿವೆ. ಹೀಗಾಗಿ ಈ ಪ್ರಕರಣವನ್ನು ಈಗಲೇ ಮುಗಿಸುವುದು ಒಳ್ಳೆಯದು. ಸಾರ್ವಜನಿಕವಾಗಿ ಈ ಪ್ರಕರಣ ಮುಂದುವರಿಸುವುದು ಅನವಶ್ಯಕ ಎಂದರು. ಸಿ.ಟಿ.ರವಿಗೆ ತೊಂದರೆ ಆಗಬಾರದೆಂಬ ಕಾರಣಕ್ಕೆ ಖಾನಾಪುರದಿಂದ ಶಿಫ್ಟ್ ಮಾಡಿದ್ದರು. ಯಾರ ನಿರ್ದೇಶನದ ಮೇರೆಗೆ ಅವರನ್ನು ಠಾಣೆಯಿಂದ ಠಾಣೆಗೆ ಸುತ್ತಾಡಿಸಿದ್ದಾರೆ ಎಂಬುದು ಗೊತ್ತಿಲ್ಲ ಎಂದು ಹೇಳಿದರು.

RELATED ARTICLES
- Advertisment -
Google search engine

Most Popular