ಬೆಂಗಳೂರು: ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಸ್ಪರ್ಧಿಸುವಂತೆ ಪಕ್ಷ ಸೂಚಿಸಿದರೆ ಅದಕ್ಕೆ ಸಿದ್ಧ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೇಳಿದ್ದರು. ಆದರೆ ಅವರ ಕುಟುಂಬದಿಂದ ಅಚ್ಚರಿ ಅಭ್ಯರ್ಥಿಯನ್ನು ಕಣಕ್ಕಿಳಿಸುತ್ತಾರೆ ಎಂಬ ಮಾತು ಕೇಳಿ ಬರುತ್ತಿದೆ. ಇದೆಲ್ಲದಕ್ಕೂ ಅವರು ತೆರೆ ಎಳೆದಿದ್ದಾರೆ.
ಈ ಕುರಿತಾಗಿ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ಡಿ.ಕೆ. ಶಿವಕುಮಾರ್, ‘ನಮ್ಮ ಕುಟುಂಬದ ಯಾವುದೇ ಸದಸ್ಯರು ಚುನಾವಣಾ ರಾಜಕೀಯಕ್ಕೆ ಬರುವ ಪ್ರಶ್ನೆಯೇ ಇಲ್ಲ. ಈ ಬಗ್ಗೆ ನಾನು ಬಹಳ ಹಿಂದೆಯೇ ಸ್ಪಷ್ಟಪಡಿಸಿದ್ದೇನೆ. ಆದರೂ ಈ ಬಗ್ಗೆ ಆಗಾಗ ಸೃಷ್ಟಿಯಾಗುವ ವದಂತಿಗಳಿಗೆ ಯಾರೂ ಕಿವಿಗೊಡಬಾರದು’ ಎಂದು ವಿನಂತಿಸುತ್ತಿದ್ದೇನೆ ಎಂದು ತಿಳಿಸಿದ್ದಾರೆ.
ಎಚ್.ಡಿ. ಕುಮಾರಸ್ವಾಮಿ ಅವರು ಮಂಡ್ಯ ಸಂಸದರಾಗಿ ಆಯ್ಕೆಯಾದ ಬೆನ್ನಲ್ಲೇ ಅವರ ರಾಜೀನಾಮೆಯಿಂದ ತೆರವಾಗಿರುವ ಚನ್ನಪಟ್ಟಣ ವಿಧಾನಸಭಾ ಕ್ಷೇತ್ರಕ್ಕೆ ಉಪ ಚುನಾವಣೆ ನಡೆಯಲಿದೆ.