ಬೀದರ್ : ಜಿಲ್ಲೆಯಲ್ಲಿ ಪೆಟ್ರೋಲ್, ಡಿಸೇಲ್ ಮತ್ತು ಎಲ್.ಪಿ.ಜಿ ಸಿಲಿಂಡರ್ಗಳ ಅಭಾವ ಉಂಟಾಗಿದೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ವದಂತಿಗಳಿಗೆ ಸಾರ್ವಜನಿಕರು ಕಿವಿಗೊಡಬಾರದು, ಜಿಲ್ಲೆಯಲ್ಲಿ ಪೆಟ್ರೋಲ್ ಮತ್ತು ಡಿಸೇಲ್ಗಳ ಯಾವುದೇ ಕೊರತೆಯಿಲ್ಲದ್ದರಿಂದ ಸಾರ್ವಜನಿಕರು ಆತಂಕಪಡುವ ಅಗತ್ಯವಿಲ್ಲ ಎಂದು ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ ಅವರು ತಿಳಿಸಿದ್ದಾರೆ.
ಜಿಲ್ಲೆಯಾದ್ಯಂತ ಎಲ್ಲಾ ತೈಲ ಕಂಪನಿ ಬಳಿ ಮತ್ತು ಪೆಟ್ರೋಲ್ ಬಂಕ್ಗಳಲ್ಲಿ ಸಾಕಷ್ಟು ಪ್ರಮಾಣದ ಇಂಧನ ದಾಸ್ತಾನು ಲಭ್ಯವಿದ್ದು, ಎಲ್ಲಾ ಪೆಟ್ರೋಲ್ ಬಂಕ್ಗಳಿಗೆ ನಿರಂತರವಾಗಿ ಇಂಧನ ಪೂರೈಕೆ ಮಾಡಲಾಗುತ್ತಿದೆ. ಪೂರೈಕೆಯಲ್ಲಿ ಯಾವುದೇ ರೀತಿಯ ವ್ಯತ್ಯಯ ಉಂಟಾಗಿಲ್ಲ. ಜನರು ಗಾಬರಿಯಿಂದ ಅಗತ್ಯಕ್ಕಿಂತ ಹೆಚ್ಚಿನ ಇಂಧನವನ್ನು ಸಂಗ್ರಹಿಸಿಟ್ಟುಕೊಳ್ಳಬಾರದು ಎಂದು ಸೂಚಿಸಿದೆ.
ಇನ್ನೂ ಇಂಧನ ಅಭಾವದ ಬಗ್ಗೆ ಸುಳ್ಳು ಸುದ್ಧಿ ಅಥವಾ ವದಂತಿ ಹಬ್ಬಿಸುವವರ ವಿರುದ್ಧ ಕಾನೂನು ರೀತ್ಯಾ ಕಠಿಣ ಕ್ರಮ ಜರುಗಿಸಲಾಗುವುದು. ಗೃಹ ಬಳಕೆಯ ಸಿಲಿಂಡರ್ಗಳಿಗೆ ಸಂಬಂಧಿಸಿದಂತೆ ಜಿಲ್ಲೆಯಲ್ಲಿ ಗೃಹಬಳಕೆ ಸಿಲಿಂಡರ್ಗಳ ಸರಬರಾಜು ಸಮರ್ಪಕವಾಗಿ ನಡೆಯುತ್ತಿದೆ. ಗೃಹ ಬಳಕೆ ಸಿಲಿಂಡರ್ನ್ನು ೨೫ ದಿನಗಳ ಬಳಿಕವೇ ಬುಕ್ ಮಾಡಲು ಅವಕಾಶ ಕಲ್ಪಿಸಲಾಗಿರುತ್ತದೆ.
ಸಾರ್ವಜನಿಕರು ಆತಂಕಗೊಳಗಾಗಿ ಗ್ಯಾಸ್ ಏಜೆನ್ಸಿಗಳ ಮುಂದೆ ಜನಸಂದಣಿ ಆಗುತ್ತಿರುವುದು ಕಂಡುಬಂದಿರುತ್ತದೆ. ಜಿಲ್ಲೆಯಲ್ಲಿ ಎಲ್ಪಿಜಿ ಸಿಲಿಂಡರ್ಗಳ ಕೊರತೆ ಇರುವುದಿಲ್ಲ ಹಾಗೂ ಎಚ್ಪಿಸಿ, ಐಓಸಿ ಮತ್ತು ಬಿಪಿಸಿ ತೈಲ ಕಂಪನಿಗಳ ಜೊತೆ ಜಿಲ್ಲಾಡಳಿತ ಸಂಪರ್ಕದಲ್ಲಿದ್ದು, ಯಾವುದೇ ತೊಂದರೆ ಉಂಟಾಗದಂತೆ ಬೇಡಿಕೆಗೆ ಅನುಗುಣವಾಗಿ ಸಿಲಿಂಡರ್ ಸರಬರಾಜಿಗೆ ಕ್ರಮಕೈಗೊಳ್ಳಲಾಗುತ್ತಿದೆ. ಸಾರ್ವಜನಿಕರು ಭಯಪಡುವ ಅಗತ್ಯವಿಲ್ಲ ಮತ್ತು ಹೆಚ್ಚುವರಿಯಾಗಿ ದಾಸ್ತಾನು ಮಾಡಿಟ್ಟುಕೊಳ್ಳಬಾರದು. ಸಾರ್ವಜನಿಕರು ಯಾವುದೇ ವದಂತಿಗಳಿಗೆ ಕಿವಿಗೊಡದೆ ಜಿಲ್ಲಾಡಳಿತದೊಂದಿಗೆ ಸಹಕರಿಸುವಂತೆ ತಿಳಿಸಿದ್ದಾರೆ.



