Friday, April 11, 2025
Google search engine

Homeರಾಜ್ಯಗೃಹಲಕ್ಷ್ಮಿ ಯೋಜನೆ ನಿಲ್ಲಿಸುವ ಮಾತೇ ಇಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ

ಗೃಹಲಕ್ಷ್ಮಿ ಯೋಜನೆ ನಿಲ್ಲಿಸುವ ಮಾತೇ ಇಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಳಗಾವಿ : ಮಹಿಳೆಯರು ಆರ್ಥಿಕವಾಗಿ ಹಾಗೂ ಸಾಮಾಜಿಕವಾಗಿ ಸಬಲರನ್ನಾಗಿಸುವ ಗೃಹಲಕ್ಷ್ಮಿ ಯೋಜನೆಯನ್ನು ನಿಲ್ಲಿಸುವ ಮಾತೇ ಇಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಅವರು ಇಂದು ಬೆಳಗಾವಿಯ ಸುವರ್ಣ ಸೌಧಕ್ಕೆ ಆಗಮಿಸಿದ್ದ ಗೃಹಲಕ್ಷ್ಮಿಯರ ಜೊತೆ ಸಂವಾದ ನಡೆಸಿದ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದರು.

ಮನೆಯಲ್ಲಿ ಕಲಹ ತಂದಿದೆ ಎಂಬ ಬಿಜೆಪಿ ಆರೋಪ ಸುಳ್ಳು

ಇಂದು ಗೃಹಲಕ್ಷ್ಮಿ ಯೋಜನೆಯ ಹಣದಿಂದ ನಾನಾ ಬದುಕಿನ ಅವಕಾಶಗಳನ್ನು ಸೃಷ್ಟಿಸಿಕೊಂಡ 25 ಕ್ಕೂ ಹೆಚ್ಚು ಮಂದಿ ಫಲಾನುಭವಿಗಳನ್ನು ಭೇಟಿ ಮಾಡಿ ಸಂವಾದ ನಡೆಸಿದ್ದೇನೆ. ಗೃಹಲಕ್ಷ್ಮಿ ಯೋಜನೆಯಿಂದ ಫಲಾನುಭವಿಗಳ ಜೀವನದಲ್ಲಿ ಆಗಿರುವ ಲಾಭಗಳ ಬಗ್ಗೆ ವಿವರಿಸಿದ್ದಾರೆ. ಬದುಕಿಗೆ ಹೊಸ ಚೈತನ್ಯ ನೀಡಿದ ಗೃಹಲಕ್ಷ್ಮಿ ಯೋಜನೆಯನ್ನು ಸಾಕಾರಗೊಳಿಸಿದ ಮುಖ್ಯಮಂತ್ರಿಗಳು, ಇಲಾಖೆಯ ಸಚಿವರು ಹಾಗೂ ಸರ್ಕಾರಕ್ಕೆ ಕೃತಜ್ಞರಾಗಿರುವುದಾಗಿ ಗೃಹಲಕ್ಷ್ಮಿಯರು ತಿಳಿಸಿದರು.

ಗೃಹಲಕ್ಷ್ಮಿ ಯೋಜನೆಯಿಂದ ಒಂದೇ ಮನೆಯ ಅತ್ತೆ-ಸೊಸೆಯ ಮಧ್ಯೆ ಜಗಳ ತಂದಿದೆ ಎಂದು ಬಿಜೆಪಿಯವರು ಆರೋಪಿಸಿದ್ದರು. ಆದರೆ ಇಂದಿನ ಕಾರ್ಯಕ್ರಮಕ್ಕೆ ಅತ್ತೆ-ಸೊಸೆಯರೇ ಜೊತೆ ಜೊತೆಯಾಗಿ ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ, ಯೋಜನೆಯಿಂದ ತಮಗಾಗಿರುವ ಲಾಭದ ಬಗ್ಗೆ ಮಾತನಾಡಿದ್ದಾರೆ.

ಈ ಯೋಜನೆಯಿಂದ ಮಹಿಳೆಯರು ಆರ್ಥಿಕವಾಗಿ, ಸಾಮಾಜಿಕವಾಗಿ ಸಬಲರಾಗುತ್ತಿರುವುದು ಸಂತೋಷದ ವಿಚಾರ. ಆದ್ದರಿಂದ ಮಹಿಳೆಯರನ್ನು ಸಶಕ್ತಗೊಳಿಸುವ ಈ ಯೋಜನೆಯನ್ನು ಮುಂದುವರಿಸಲಿದ್ದೇವೆ ಎಂದು ತಿಳಿಸಿದರು. ಬಿಜೆಪಿ ಶಾಸಕರು ಮುಖ್ಯಮಂತ್ರಿಗಳನ್ನು ಭೇಟಿಯಾದ ಕಾರಣದ ಬಗ್ಗೆ ಮಾಧ್ಯಮದವರಿಗೆ ಉತ್ತರಿಸಿ, ಬೆಂಗಳೂರು ನಗರದ ರಸ್ತೆಗಳ ಅಭಿವೃದ್ಧಿಗೊಳಿಸಬೇಕೆಂದು ಮನವಿ ಮಾಡಿದ್ದಾರೆ ಎಂದರು.

RELATED ARTICLES
- Advertisment -
Google search engine

Most Popular