Friday, April 18, 2025
Google search engine

Homeರಾಜ್ಯಸಿಟಿ ರವಿ ಹೇಳಿಕೆ ಕುರಿತು ತನಿಖೆಯಾಗಬೇಕು, ಆ ಬಳಿಕವಷ್ಟೆ ಕಾನೂನು ಕ್ರಮ: ಬೊಮ್ಮಾಯಿ ಆಗ್ರಹ

ಸಿಟಿ ರವಿ ಹೇಳಿಕೆ ಕುರಿತು ತನಿಖೆಯಾಗಬೇಕು, ಆ ಬಳಿಕವಷ್ಟೆ ಕಾನೂನು ಕ್ರಮ: ಬೊಮ್ಮಾಯಿ ಆಗ್ರಹ

ನವದೆಹಲಿ: ವಿಧಾನ ಪರಿಷತ್ ಸದಸ್ಯ ಸಿ.ಟಿ ರವಿಯವರು ಸದನದಲ್ಲಿ ಅವಾಚ್ಯವಾಗಿ ಹೇಳಿಕೆ ನೀಡಿದ್ದಾರೊ ಇಲ್ಲವೊ ಎಂಬುದರ ಸತ್ಯಶೋಧನೆಯಾಗಬೇಕು. ಈ ಬಗ್ಗೆ ತನಿಖೆ ಆಗಬೇಕು ಆ ಬಳಿಕವಷ್ಟೆ ಕಾನೂನು ಕ್ರಮವಾಗಬೇಕು ಎಂದು ಮಾಜಿ ಸಿಎಂ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಆಗ್ರಹಿಸಿದ್ದಾರೆ.

ದೆಹಲಿಯಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪೊಲೀಸರ ನಡವಳಿಕೆಯನ್ನು ನಾವು ಸಮರ್ಥಿಸಿಕೊಳ್ಳುವುದಕ್ಕೆ ಸಾಧ್ಯವಿಲ್ಲ. ಹಿಂದೆ ವಿಧಾನಸೌಧದಲ್ಲಿ ಪಾಕಿಸ್ತಾನ್ ಜಿಂದಾಬಾದ್ ಅಂದವರಿಗೆ ಈ ಸರ್ಕಾರ ಯಾವುದೇ ಶಿಕ್ಷೆ ವಿಧಿಸಲಿಲ್ಲ. ಸಿ.ಟಿ.ರವಿಯವರು ತಾವು ಆ ರೀತಿ ಹೇಳಿಕೆ ನೀಡಲಿಲ್ಲ ಎಂದು ಬಹಳ ಸ್ಪಷ್ಟವಾಗಿ ನಿರಾಕರಿಸಿದ್ದಾರೆ. ನಾವು ನ್ಯಾಯಸಮರ್ಥವಾಗಿ ಮಾತನಾಡುತ್ತಿದ್ದೇವೆ. ನಾವೇನೂ ತನಿಖೆ ಬೇಡ ಎಂದು ಹೇಳಿಲ್ಲವಲ್ಲ. ಸತ್ಯಶೋಧನೆ ಆಗದೇ ತನಿಖೆಯಾಗದೇ ಯಾವುದೇ ಅಂತಿಮನಿರ್ಧಾರಕ್ಕೆ ಬರುವುದು ತಪ್ಪು ಎಂದು ತಿಳಿಸಿದರು.

ಕರ್ನಾಟಕದಲ್ಲಿ ಆಡಳಿತ ಹಳಿ ತಪ್ಪಿದೆ. ಪೊಲೀಸ್ ರಾಜ್ಯ ನಡೆಯುತ್ತಿದೆ. ಪ್ರತಿಯೊಂದಕ್ಕೂ ಪೋಲಿಸ್ ದುರ್ಬಳಕೆ ಆಗುತ್ತಿದೆ. ವಿರೋಧ ಪಕ್ಷಗಳ ಮೇಲೆ ದ್ವೇಷ ಸಾಧಿಸಲು ಹಲವಾರು ಎಸ್‌ಐಟಿ ರಚನೆ ಮಾಡಿ ಹಲವಾರು ತನಿಖೆ ಮಾಡುತ್ತಿದ್ದಾರೆ. ಸ್ವತಃ ಮುಖ್ಯಮಂತ್ರಿಗಳೇ ಭ್ರಷ್ಟಾಚಾರದಲ್ಲಿ ಮುಳುಗಿದ್ದು ಅವರ ವಿರುದ್ಧವೇ ತನಿಖೆ ನಡೆಯುತ್ತಿದೆ. ಇಂತಹ ಸಂದರ್ಭದಲ್ಲಿ ಪೊಲೀಸ್ ವ್ಯವಸ್ಥೆ ದುರ್ಬಳಕೆ ವಿಧಾನಸೌಧದವರೆಗೂ ತಲುಪಿದೆ ಎಂದು ಬಸವರಾಜ ಬೊಮ್ಮಾಯಿ ಆರೋಪಿಸಿದರು. ಸಿ.ಟಿ. ರವಿಯವರ ಬಂಧನ ಸದನದೊಳಗೆ ಆಗಿರುವ ಘಟನೆಯ ಬಗ್ಗೆ ಸಭಾಪತಿಯವರು ನಿರ್ಣಯ ಮಾಡಬೇಕು ಎಂದು ಹೇಳಿದರು.

RELATED ARTICLES
- Advertisment -
Google search engine

Most Popular