Monday, April 21, 2025
Google search engine

Homeರಾಜಕೀಯಸಂವಿಧಾನ ಬದಲಿಸಿದರೆ ದೇಶದಲ್ಲಿ ರಕ್ತಪಾತ : ಮುಖ್ಯಮಂತ್ರಿ ಸಿದ್ದರಾಮಯ್ಯ

ಸಂವಿಧಾನ ಬದಲಿಸಿದರೆ ದೇಶದಲ್ಲಿ ರಕ್ತಪಾತ : ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಂಗಳೂರು: ಬಿಜೆಪಿಯವರು ಒಂದು ವೇಳೆ ಸಂವಿಧಾನ ಬದಲಾವಣೆ ಮಾಡುವ ಕೆಲಸಕ್ಕೆ ಹೊರಟರೆ ದೇಶದಲ್ಲಿ ರಕ್ತಪಾತವಾಗಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಬಿಜೆಪಿ ಸಂಸದ ಅನಂತಕುಮಾರ್ ಹೆಗಡೆ ಅವರ ಸಂವಿಧಾನ ಬದಲಾವಣೆ ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು, ಸಂವಿಧಾನ ಬದಲಾವಣೆ ಮಾಡುವುದು ಬಿಜೆಪಿಯವರ ರಹಸ್ಯ ಅಜೆಂಡಾ. ಸಂವಿಧಾನಕ್ಕೆ ಅನಗತ್ಯ ತಿದ್ದುಪಡಿತರಲಾಗಿದೆ. ಅವುಗಳನ್ನು ಸರಿಪಡಿಸಬೇಕು. ಅದಕ್ಕೆ ಮೂರನೇ ಎರಡರಷ್ಟು ಬಹುಮತ ಬೇಕು ಎಂದು ಹೆಗಡೆ ಹೇಳಿದ್ದಾರೆ. ಅವರು ಜನತೆಯಲ್ಲಿ ಮೂರನೇ ಎರಡರಷ್ಟು ಬಹುಮತ ಕೇಳಿರುವುದು ದೇಶದ ಉದ್ಧಾರಕ್ಕಲ್ಲ ಎಂದು ಸಿದ್ದರಾಮಯ್ಯ ಹೇಳಿದರು.

ಮನವಾದಿವನ್ನು ಸಮರ್ಥನೆ ಮಾಡಿಕೊಳ್ಳೋದು, ಮನುಸ್ಮೃತಿಗೆ ಅನುಗುಣವಾಗಿ ಸಂವಿಧಾನ ಇರಬೇಕು ಅನ್ನೋದು ಅವರ ಹಿಡನ್ ಅಜೆಂಡಾ. ಅದಕ್ಕೆ ಇಡೀ ದೇಶದ ಬಡವರು, ದಲಿತರು, ಅಲ್ಪಸಂಖ್ಯಾತರು ಹಿಂದುಳಿಬದವರು ಎಲ್ಲರೂ ಅವರನ್ನು ವಿರೋಧ ಮಾಡುತ್ತಾರೆ. ಒಂದು ವೇಳೆ ಸಂವಿಧಾನ ಬದಲಾವಣೆಯ ಕೆಲಸ ಆದರೆ ದೇಶದಲ್ಲಿ ರಕ್ತಪಾತವಾಗಲಿದೆ ಎಂದು ಸಿದ್ದರಾಮಯ್ಯ ಎಚ್ಚರಿಕೆ ನೀಡಿದರು.

RELATED ARTICLES
- Advertisment -
Google search engine

Most Popular