Sunday, April 20, 2025
Google search engine

Homeರಾಜ್ಯರಾಜ್ಯ, ರಾಷ್ಟ್ರ ರಾಜಕೀಯದಲ್ಲಿ ಅಸ್ಥಿರತೆ ಉಂಟಾಗಲಿದೆ: ಕೋಡಿಮಠದ ಶ್ರೀ ಭವಿಷ್ಯ

ರಾಜ್ಯ, ರಾಷ್ಟ್ರ ರಾಜಕೀಯದಲ್ಲಿ ಅಸ್ಥಿರತೆ ಉಂಟಾಗಲಿದೆ: ಕೋಡಿಮಠದ ಶ್ರೀ ಭವಿಷ್ಯ

ಹುಬ್ಬಳ್ಳಿ: ರಾಷ್ಟ್ರ ರಾಜಕಾರಣ‌, ರಾಜ್ಯ ರಾಜಕಾರಣದಲ್ಲೂ ಅಸ್ಥಿರತೆ ಉಂಟಾಗಲಿದ್ದು, ಯುಗಾದಿ ನಂತರ ಏನಾಗುತ್ತೇ ಎಂದು‌ ಕಾದು‌ನೋಡಿ ಎಂದು ಕೋಡಿಮಠದ ಶಿವಾನಂದ ಶಿವಯೋಗಿ ರಾಜೇಂದ್ರ ಸ್ವಾಮೀಜಿ ಮತ್ತೊಂದು ಭವಿಷ್ಯವಾಣಿ ನುಡಿದ್ದಾರೆ.

ಎಂದು ಹುಬ್ಬಳ್ಳಿಯಲ್ಲಿ ಮಾತನಾಡಿರುವ ಅವರು, ಯುಗಾದಿವರೆಗೂ ಸಮಯ ಇದೆ. ನಂತರ ರಾಜಕೀಯ ಅಸ್ಥಿರತೆ ಉಂಟಾಗಿದೆ. ಇದರ ಜೊತೆಗೆ ರಾಜ್ಯದಲ್ಲಿ ಬರಗಾಲದ ಛಾಯೆ ವಿಚಾರದ ಬಗ್ಗೆಯು ತಿಳಿಸಿದ್ದು, ಮನುಷ್ಯ ಮಾಡಿದ ತಪ್ಪುಗಳನ್ನು ದೇವರು ಕ್ಷಮಿಸುತ್ತಾನೆ. ಆದರೆ ಮನುಷ್ಯ ಮಾಡಿದ ಪಾಪ‌ಕರ್ಮಗಳು ಮನುಷ್ಯನ್ನು ಕ್ಷಮಿಸುವುದಿಲ್ಲ ಎಂದು ಹೇಳಿದ್ದಾರೆ.

ಮನುಷ್ಯನ‌ ಪಾಪಕರ್ಮಗಳೇ ಇಂತಹ ಪರಿಸ್ಥಿತಿಗೆ ಕಾರಣ. ಮನುಷ್ಯನ‌ಕರ್ಮ ಭಾದೆಗಳು ಹೆಚ್ಚಾದಾಗ ಇಂತಹ ದುಸ್ಥಿತಿಗಳನ್ನು ಸಾಮೂಹಿಕವಾಗಿ ಅನುಭವಿಸಬೇಕಾಗುತ್ತದೆ. ಶ್ರಾವಣ ಮಾಸದ ಮಧ್ಯಭಾಗದಲ್ಲಿ ಮಳೆಯಾಗಿದೆ. ಅಮಾವಾಸ್ಯೆ ಕಳೆದ ನಂತರ ಇನ್ನೂ ಮಳೆಯಾಗುವ ಸಾಧ್ಯತೆ ಇದೆ ಎಂದು ಹೇಳಿದ್ದಾರೆ.

ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ಜೆಡಿಎಸ್ ಮೈತ್ರಿ ವಿಚಾರಕ್ಕೆ ಸಂಬಂಧಿಸಿದಂತೆ ಉತ್ತರಿಸಿದ ಸ್ವಾಮಿಸಿ, ಅದು ಅವರವರ ವಿಚಾರ, ಅದರ ಬಗ್ಗೆ ಹೇಳಲು ಆಗುವುದಿಲ್ಲ ಎಂದು ಹೇಳಿದ್ದಾರೆ.

ಇನ್ನು ತಮಿಳುನಾಡಿನ ಉದಯ್​​ ಸ್ಟಾಲಿನ್ ನೀಡಿದ ಸನಾತನ ಧರ್ಮದ ವಿಚಾರಕ್ಕೆ ಉತ್ತರಿಸಿದ ಅವರು ಇದು ಅವರವರ ಧರ್ಮದವರ ಹೇಳಿಕೆ. ಅದು ಅವರ‌ ನೋವಿನ ಸಂಗತಿ, ಎಲ್ಲಾ ಜನಾಂಗದಲ್ಲಿಯೂ ಅವರವರ ನೋವು ಇರುತ್ತದೆ. ಅದನ್ನು ಈ ರೀತಿ ನೋವಿನ‌ ಮೂಲಕ ಹೊರಹಾಕುತ್ತಾರೆ. ಧರ್ಮದ ವಿಚಾರದಲ್ಲಿ ರಾಜಕೀಯ ಬೆರೆಸುವುದು ಸೂಕ್ತವಲ್ಲ ಎಂದು ಹೇಳಿದ್ದಾರೆ.

ಉದಯನಿಧಿ ಸ್ಟಾಲಿನ್ ಅವರಿಗೆ ಯಾವ ನೋವಿನಿಂದ ಹೇಳಿದ್ದಾರೋ ಗೊತ್ತಿಲ್ಲ. ಆಯಾ ಧರ್ಮದಲ್ಲಿರೋರು ತಮಗಾಗಿರೋ‌ ನೋವಿನಿಂದಾಗಿ ಈ ರೀತಿ‌ ಹೇಳಿಕೆ ನೀಡುತ್ತಾರೆ. ಜನರಲ್ಲಿ ಪೂರ್ಣವಾದ ಜ್ಞಾನದ‌ ಕೊರತೆ ಇದೆ. ಪೂರ್ಣವಾದ ಅರಿವಿನ ಕೊರತೆಯಿಂದಾಗಿ ಈ ರೀತಿ ಧರ್ಮ, ರಾಜಕೀಯ ವಿಚಾರ ಮುನ್ನೆಲೆಗೆ ತರುತ್ತಾರೆ. ಧರ್ಮ‌ ಎಂದರೆ ನೆಮ್ಮದಿ,‌ ಶಾಂತಿ ನಿಜವಾದ ಜ್ಞಾನ ಮೂಡಿಸುತ್ತದೆ. ಆದರೆ ಅದರಲ್ಲಿ ನೆಮ್ಮದಿ, ಶಾಂತಿ ಕಂಡುಕೊಳ್ಳದವರಿಂದ‌ ಈ ರೀತಿ ಅಸಮಾಧಾನ‌ ಮೂಡುತ್ತದೆ ಎಂದು ಹೇಳಿದ್ದಾರೆ.

RELATED ARTICLES
- Advertisment -
Google search engine

Most Popular