Thursday, April 17, 2025
Google search engine

Homeರಾಜ್ಯಸದ್ಯಕ್ಕೆ ಸಾರಿಗೆ ಬಸ್ ಪ್ರಯಾಣ ದರ ಹೆಚ್ಚಳ ಇಲ್ಲ, ಸಚಿವ ರಾಮಲಿಂಗ ರೆಡ್ಡಿ ಸ್ಪಷ್ಟನೆ

ಸದ್ಯಕ್ಕೆ ಸಾರಿಗೆ ಬಸ್ ಪ್ರಯಾಣ ದರ ಹೆಚ್ಚಳ ಇಲ್ಲ, ಸಚಿವ ರಾಮಲಿಂಗ ರೆಡ್ಡಿ ಸ್ಪಷ್ಟನೆ

ಬೆಂಗಳೂರು: ರಾಜ್ಯದ ಜನತೆಗೆ ಸಾರಿಗೆ ಸಚಿವ ರಾಮಲಿಂಗ ರೆಡ್ಡಿ ನೆಮ್ಮದಿಯ ಸುದ್ದಿಯೊಂದನ್ನು ನೀಡಿದ್ದು, ಸಾರಿಗೆ ಬಸ್ ಪ್ರಯಾಣ ದರವನ್ನು ತಕ್ಷಣ ಹೆಚ್ಚಿಸುವ ಯಾವುದೇ ಪ್ರಸ್ತಾವನೆ ಇಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ಕೆಎಸ್‌ಆರ್‌ಟಿಸಿ ಮತ್ತು ಇತರ ಸಾರಿಗೆ ನಿಗಮಗಳ ಪ್ರಯಾಣ ದರ ಏರಿಕೆ ಪ್ರತಿಕ್ರಿಯೆ ನೀಡಿದ ಅವರು, ಸಾರಿಗೆ ಬಸ್ ಪ್ರಯಾಣ ದರವನ್ನು ಹೆಚ್ಚಳ ಮಾಡುವ ಯಾವುದೇ ಯೋಜನೆಗಳು ಸದ್ಯಕ್ಕೆ ಪರಿಗಣನೆಯಲ್ಲಿಲ್ಲ. ಈ ಹಿಂದೆ ಸಾರಿಗೆ ನಿಗಮಗಳು ಪ್ರಯಾಣ ದರ ಪರಿಷ್ಕರಣೆಗೆ ಪ್ರಸ್ತಾವನೆ ಸಲ್ಲಿಸಿದ್ದವು. ಆದರೆ, ಇತ್ತೀಚೆಗೆ ಪ್ರಯಾಣ ದರ ಹೆಚ್ಚಳಕ್ಕೆ ಯಾವುದೇ ಪ್ರಸ್ತಾವನೆ ಸಲ್ಲಿಸಿಲ್ಲ ಎಂದು ಸಚಿವರು ಖಚಿತಪಡಿಸಿದ್ದಾರೆ.

ಪ್ರಯಾಣ ದರ ಏರಿಕೆ ಕುರಿತು ರಾಜ್ಯ ಸರ್ಕಾರ ನಿರ್ಧಾರ ಕೈಗೊಳ್ಳಲಿದೆ, ಮುಖ್ಯ ಕಾರ್ಯದರ್ಶಿ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಪ್ರಯಾಣ ದರ ಏರಿಕೆಗೆ ಶಿಫಾರಸು ಮಾಡಿದ್ದರೂ ಅಂತಿಮ ನಿರ್ಧಾರ ಸರ್ಕಾರದ್ದು. ಸಾರಿಗೆ ನಿಗಮ ಮಂಡಳಿ ಸಭೆಯಲ್ಲಿ ಈ ವಿಷಯದ ಕುರಿತು ಚರ್ಚೆಗಳು ನಡೆಯಲಿದ್ದು, ಯಾವುದೇ ಬದಲಾವಣೆಗಳಿಗೆ ಸರ್ಕಾರದ ಅನುಮೋದನೆ ಅಗತ್ಯವಿದೆ ಎಂದು ಅವರು ಹೇಳಿದರು.

RELATED ARTICLES
- Advertisment -
Google search engine

Most Popular