Saturday, May 2, 2026
Google search engine

Homeಸ್ಥಳೀಯಬಸ್‌ ನಲ್ಲಿ ಮಹಿಳೆಯ ಮಾಂಗಲ್ಯ ಸರ ಎಗರಿಸಿದ ಕಳ್ಳರು

ಬಸ್‌ ನಲ್ಲಿ ಮಹಿಳೆಯ ಮಾಂಗಲ್ಯ ಸರ ಎಗರಿಸಿದ ಕಳ್ಳರು

ಚಾಮರಾಜನಗರ : ನಂಜನಗೂಡಿನಿಂದ ಚಾಮರಾಜನಗರಕ್ಕೆ ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ಪ್ರಯಾಣಿಸುತ್ತಿದ್ದ ಮಹಿಳೆಯೊಬ್ಬರ ಕತ್ತಿನಲ್ಲಿದ್ದ 38 ಗ್ರಾಂ. ತೂಕದ ಚಿನ್ನದ ಮಾಂಗಲ್ಯ ಸರವನ್ನು ಕಳ್ಳರು ಅಪಹರಿಸಿರುವ ಘಟನೆ ನಡೆದಿದೆ.
ನಗರದ ಪೊಲೀಸ್ ಸಿಬ್ಬಂದಿಯೊಬ್ಬರ ಪತ್ನಿ ನಾಗಲಾಂಬಿಕಾ ಮಾಂಗಲ್ಯ ಸರವನ್ನು ಕಳೆದುಕೊಂಡವರು.
ಇವರು ಪೌರ್ಣಿಮೆ ಅಂಗವಾಗಿ ನಂಜನಗೂಡು ನಂಜುಂಡೇಶ್ವರ ದೇವಸ್ಥಾನಕ್ಕೆ ಶುಕ್ರವಾರ ಬೆಳಗ್ಗೆ ತೆರಳಿದ್ದರು. ಬಳಿಕ ದರ್ಶನ ಮುಗಿಸಿ ಮಧ್ಯಾಹ್ನದ ವೇಳೆ ನಗರಕ್ಕೆ ಹಿಂದಿರುಗಿದ್ದಾರೆ. ಈ ವೇಳೆ ಕೆಎಸ್‌ಆರ್‌ಟಿಸಿ ಬಸ್ ತುಂಬಾ ರಶ್ ಇದ್ದ ಕಾರಣ ನಿಂತುಕೊಂಡೇ ಪ್ರಯಾಣ ಬೆಳೆಸಿದ್ದಾರೆ.‌ ಈ ವೇಳೆ ಮರಿಯಾಲದ ಬಳಿ ಸೀಟ್ ಸಿಕ್ಕಿದ್ದು ಮಹಿಳೆಯೊಬ್ಬರ ಪಕ್ಕ ಕುಳಿತಿದ್ದಾರೆ. ನಂತರ ಸಂತೇಮರಹಳ್ಳಿ ವೃತ್ತದಲ್ಲಿ ಬಸ್ ಇಳಿಯುವಾಗ ಕುತ್ತಿಗೆಯಲ್ಲಿದ್ದ ಚಿನ್ನದ ಮಾಂಗಲ್ಯ ಸರ, ತಾಳಿ, ಕಾಸು ಹಾಗೂ ಗುಂಡು ಸೇರಿ ಒಟ್ಟು 39 ಗ್ರಾಂ. ಚಿನ್ನದ ಮಾಂಗಲ್ಯ ಸರ ಇಲ್ಲದಿರುವುದು ಕಂಡುಬಂದಿದೆ.
ಈ ಘಟನೆ ಸಂಬಂಧ ಪಟ್ಟಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

RELATED ARTICLES
- Advertisment -
Google search engine

Most Popular