Friday, April 18, 2025
Google search engine

Homeರಾಜ್ಯಅಕ್ರಮ ವನ್ಯಜೀವಿ ಉತ್ಪನ್ನ ಮರಳಿಸಲು ಕೊನೆ ಅವಕಾಶ ನೀಡುವ ಚಿಂತನೆ: ಈಶ್ವರ ಖಂಡ್ರೆ

ಅಕ್ರಮ ವನ್ಯಜೀವಿ ಉತ್ಪನ್ನ ಮರಳಿಸಲು ಕೊನೆ ಅವಕಾಶ ನೀಡುವ ಚಿಂತನೆ: ಈಶ್ವರ ಖಂಡ್ರೆ

ಬೆಂಗಳೂರು: ಹುಲಿ  ಉಗುರಿನ ಲಾಕೆಟ್ ಸರ ಧರಿಸಿದವರ ವಿರುದ್ಧ ಹಲವಾರು ದೂರುಗಳು  ಬರುತ್ತಿದ್ದು, ಬಹುತೇಕರಿಗೆ ಕಾನೂನಿನ ಅರಿವಿಲ್ಲ ಎಂಬುದು ವೇದ್ಯವಾಗಿದ್ದು, ಅಕ್ರಮ ವನ್ಯಜೀವಿ ಉತ್ಪನ್ನಗಳನ್ನು ಸರ್ಕಾರಕ್ಕೆ ಮರಳಿಸಲು ಕೊನೆಯ ಅವಕಾಶ ನೀಡುವ ಸಾಧ್ಯತೆಗಳನ್ನು ಪರಾಮರ್ಶಿಸಲಾಗುತ್ತಿದೆ ಎಂದು ಅರಣ್ಯ, ವನ್ಯಜೀವಿ ಮತ್ತು ಪರಿಸರ ಸಚಿವ ಈಶ್ವರ ಖಂಡ್ರೆ ತಿಳಿಸಿದ್ದಾರೆ.

ವಿಕಾಸಸೌಧದ ತಮ್ಮ ಕಚೇರಿಯಲ್ಲಿಂದು ಅರಣ್ಯ ಇಲಾಖೆಯ ಉನ್ನತಾಧಿಕಾರಿಗಳೊಂದಿಗೆ ಸುದೀರ್ಘ ಸಮಾಲೋಚನೆ ನಡೆಸಿದ ತರುವಾಯ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು.

2005ರವರೆಗೆ ಪೂರ್ವಜರು ಹೊಂದಿದ್ದ ವನ್ಯಜೀವಿ ಅಂಗಾಂಗದಿಂದ ಮಾಡಿದ ಉತ್ಪನ್ನಗಳನ್ನು ಅರಣ್ಯ ಇಲಾಖೆಯಿಂದ ದೃಢೀಕರಿಸಿಕೊಂಡು ಮಾಲೀಕತ್ವದ ಹಕ್ಕು ಪಡೆದುಕೊಳ್ಳಲು ಅವಕಾಶ ನೀಡಲಾಗಿತ್ತು. ಈಗ 2022ರಲ್ಲಿ ತಿದ್ದುಪಡಿ ಮಾಡಲಾದ “Any person to voluntarily surrender any captive animals or animal products to the Chief Wild Life Warden. No compensation will be paid to the person for surrendering such items. The surrendered items become property of the state government’’. ಇಂತಹ ಅಕ್ರಮ ದಾಸ್ತಾನನ್ನು ಸರ್ಕಾರಕ್ಕೆ ಮರಳಿಸಲು ಅವಕಾಶ ಕಲ್ಪಿಸಲಾಗಿದೆ. ಆದರೆ ಹೀಗೆ ಮರಳಿಸುವವರಿಗೆ ಯಾವುದೇ ಪರಿಹಾರ ನೀಡಲಾಗುವುದಿಲ್ಲ. ಈ ಸಾಧ್ಯತೆಗಳ ಬಗ್ಗೆ ಪರಾಮರ್ಶಿಸಿ, ಇದಕ್ಕೆ ಇತಿಶ್ರೀ ಹಾಡಲು ನಿರ್ಧರಿಸಲಾಗಿದೆ ಎಂದು ವಿವರಿಸಿದರು.

RELATED ARTICLES
- Advertisment -
Google search engine

Most Popular