ಯಳಂದೂರು: ಕಾಂಗ್ರೆಸ್ ಪಕ್ಷ ಗ್ಯಾರಂಟಿ ಯೋಜನೆಯಡಿಯಲ್ಲಿ ಅನೇಕ ಯೋಜನೆಗಳನ್ನು ಖಾತ್ರಿ ಮಾಡಿದ್ದು ಕೋಟ್ಯಾಂತರ ಮಂದಿ ಇದರ ಲಾಭವನ್ನು ಪಡೆಯುತ್ತಿದ್ದಾರೆ. ನುಡಿದಂತೆ ನಡೆದ ಸರ್ಕಾರ ಕಾಂಗ್ರೆಸ್ ಪಕ್ಷದ್ದಾಗಿದ್ದು ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಪಕ್ಷದ ಜಯ ಶತಸಿದ್ಧ ಎಂದು ತಾಪಂ ಮಾಜಿ ಅಧ್ಯಕ್ಷ ಹೊನ್ನೂರು ನಿರಂಜನ್ ತಿಳಿಸಿದರು.
ಅವರು ಮಂಗಳವಾರ ತಾಲೂಕಿನ ಹೊನ್ನೂರು ಗ್ರಾಮದಲ್ಲಿ ಈ ಬಾರಿಯ ಲೋಕಸಭಾ ಚುನಾವಣೆಯ ಚಾಮರಾಜನಗರ ಕ್ಷೇತ್ರದ ಅಭ್ಯರ್ಥಿ ಸುನೀಲ್‌ಬೋಸ್ ಪರ ಮತಯಾಚನೆ ಮಾಡಿ ಮಾತನಾಡಿದರು. ರಾಜ್ಯದ ಕಾಂಗ್ರೆಸ್‌ನ ಆಡಳಿತ ವೈಖರಿ ಹಾಗೂ ಜನಪರವಾದ ಕಾರ್ಯಕ್ರಮಗಳು ಇಲ್ಲಿನ ಜನರು ತುಂಬಾ ಮೆಚ್ಚಿಕೊಂಡಿದ್ದಾರೆ. ಅಲ್ಲದೆ ಇದರಿಂದ ಬಡವರಿಗೆ ಅನೇಕ ಉಪಯೋಗಗಳಾಗುತ್ತಿದೆ. ಇದೆ ಮಾದರಿಯಲ್ಲಿ ಕೇಂದ್ರದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದರೆ ಇನ್ನಷ್ಟು ಗ್ಯಾರಂಟಿ ಯೋಜನೆಗಳು ನೀಡಲು ಯೋಜನೆಗಳನ್ನು ಮಾಡಿಕೊಂಡಿದೆ. ಇದನ್ನು ತನ್ನ ಪ್ರಣಾಳಿಕೆಯಲ್ಲೂ ಬಿಡುಗಡೆ ಮಾಡಿದೆ. ಮನೆಮನೆಗಳಿಗೂ ಗ್ಯಾರಂಟಿ ಕಾರ್ಡ್‌ಗಳನ್ನು ವಿತರಿಸಿ ಈಗಾಗಲೇ ಇದರ ಬಗ್ಗೆ ಅರಿವು ಮೂಡಿಸಲಾಗುತ್ತಿದೆ. ಎಲ್ಲೆಡೆ ಇದಕ್ಕೆ ಉತ್ತಮ ಸ್ಪಂಧನೆ ಲಭಿಸುತ್ತಿದೆ. ನಮ್ಮ ಕ್ಷೇತ್ರದಲ್ಲಿ ಈ ಬಾರಿ ಕಾಂಗ್ರೆಸ್ ಪಕ್ಷಕ್ಕೆ ಜಯ ಲಭಿಸುವುದು ನೂರಕ್ಕೆ ನೂರರಷ್ಟು ಸತ್ಯವಾಗಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಗ್ರಾಪಂ ಸದಸ್ಯರಾದ ಅನಿತಾ, ಆರ್. ಪುಟ್ಟಬಸವಯ್ಯ, ನೇತ್ರಾವತಿ, ಇಂದ್ರಮಲ್ಲೇಶ್, ಭಾಗ್ಯಮಹದೇವಸ್ವಾಮಿ, ನಾಗರಾಜು, ಕುಮಾರ್, ಗುರುಪ್ರಸಾದ್, ಬೀಚಳ್ಳಿ ಮಹದೇವಸ್ವಾಮಿ ಮುಖಂಡರಾದ ರೇವಣ್ಣ, ಚಂದ್ರು, ಸಿದ್ದಪ್ಪಸ್ವಾಮಿ, ಮಹದೇವಸ್ವಾಮಿ, ಸೋಮಣ್ಣ ಸೇರಿದಂತೆ ಅನೇಕರು ಇದ್ದರು.