Tuesday, April 22, 2025
Google search engine

Homeಸ್ಥಳೀಯಈ ಬಾರಿಯೂ ಮೋದಿ ಹೆಸರಲ್ಲಿ ಗೆಲ್ಲುತ್ತೇನೆ

ಈ ಬಾರಿಯೂ ಮೋದಿ ಹೆಸರಲ್ಲಿ ಗೆಲ್ಲುತ್ತೇನೆ

ಮೈಸೂರು : ನಾನು ಮೊದಲ ಬಾರಿಯೂ ಮೋದಿ ಹೆಸರಿನಲ್ಲಿ ಗೆದ್ದೆ. ಎರಡನೇ ಬಾರಿಯೂ ಅವರ ಹೆಸರಿನಲ್ಲೇ ಗೆದ್ದೆ. ಮೂರನೇ ಬಾರಿಯೂ ಅವರ ಹೆಸರಿನಲ್ಲೇ ಗೆಲ್ಲೂತ್ತೇನೆ ಎಂದು ಸಂಸದ ಪ್ರತಾಪ್ ಸಿಂಹ ವಿಶ್ವಾಸ ವ್ಯಕ್ತಪಡಿಸಿದರು.
ಬಿಜೆಪಿಗೆ ಮೋದಿ ಅಂದರೆ ದೇವರು. ಅವರ ಹೆಸರಿನಲ್ಲಿ ಈ ಬಾರಿಯೂ ಗೆಲ್ಲುತ್ತೇನೆ. ೨೦೧೪ ರಲ್ಲಿ ನಾನು ಒಬ್ಬ ಪತ್ರಕರ್ತನಾಗಿದ್ದೆ, ಮೈಸೂರು ಚುನಾವಣೆ ಬಗ್ಗೆ ಯೋಚನೆ ಮಾಡುವ ಸ್ಥಿತಿಯಲ್ಲೂ ಇರಲಿಲ್ಲ. ಆಗ ಸಂಘದ ಆಶೀರ್ವಾದ ಪಕ್ಷದ ಬಲದಿಂದ ಗೆದ್ದಿದ್ದೆ ಎಂದು ಹೇಳಿದರು.

ಚುನಾವಣೆ ಎಂದರೆ ಆಕಾಂಕ್ಷಿಗಳು ಇರುತ್ತಾರೆ. ಅಂತಿಮವಾಗಿ ಬಿ.ಎಸ್.ಯಡಿಯೂರಪ್ಪ, ರಾಜ್ಯಾಧ್ಯಕ್ಷ ವಿಜಯೇಂದ್ರ ನಮ್ಮ ಹೈಕಮಾಂಡ್ ಎಲ್ಲವನ್ನೂ ತೀರ್ಮಾನ ಮಾಡುತ್ತದೆ. ನಾನು ಒಳ್ಳೆ ಕೆಲಸ ಮಾಡಿದ್ದೇನೆ. ಪಕ್ಷ ನನ್ನ ಕೈ ಬಿಡಲ್ಲ ಎಂಬ ಅಚಲ ನಂಬಿಕೆ ಇದೆ. ಪಕ್ಷದ ವಿಶ್ವಾಸ ನ್ನ ಮೇಲಿದೆ. ನನಗೆ ಮತ್ತೊಂದು ಅವಕಾಶ ಸಿಗುತ್ತದೆ ಎಂದು ಹೇಳಿದರು.
ನಾನು ಮೋದಿ ಅವರ ಪುಸ್ತಕ ಬರೆದವನು. ನನ್ನ ಬಗ್ಗೆ ಮೋದಿ ಅವರಿಗೆ ಗೊತ್ತಿದೆ. ಮೋದಿ ಅವರು ನನಗೆ ಆಶೀರ್ವಾದ ಮಾಡುತ್ತಾರೆ. ಕಾಂಗ್ರೆಸ್ ನಲ್ಲಿ ಸೋಲಿನ ಟಿಕೆಟ್‌ಗೆ ಹೊಡೆದಾಟವಿದೆ. ಇನ್ನೂ ಬಿಜೆಪಿ ಯಲ್ಲಿ ಗೆಲುವಿನ ಪೈಪೋಟಿ ಇರಬಾರದು ಎಂದು ಹೇಗೆ? ಗೆಲ್ಲುವ ಕುದುರೆ ಏರಲು ಎಲ್ಲರು ಪ್ರಯತ್ನ ಪಡುತ್ತಾ ಇರುತ್ತಾರೆ. ಮೋದಿ ಅವರ ಕೃಪೆಯಿಂದ ಕೆಲಸ ಮಾಡಿ ಮೈಸೂರಿನಲ್ಲಿ ಬಿಜೆಪಿ ಗೆಲ್ಲುವ ಸ್ಥಿತಿಯನ್ನು ನಾನು ಮಾಡಿದ್ದೇನೆ. ನನಗೆ ತಾಯಿ ಚಾಮುಂಡಿ, ಕಾವೇರಿ ತಾಯಿ. ಮೋದಿ ಆಶೀರ್ವಾದ ಇದೆ ಎಂದು ಹೇಳಿದರು.

RELATED ARTICLES
- Advertisment -
Google search engine

Most Popular