Monday, April 21, 2025
Google search engine

Homeಸ್ಥಳೀಯಈ ಬಾರಿಯ ನಾಡಹಬ್ಬ ದಸರಾ ಪ್ಲಾಸ್ಟಿಕ್ ಮುಕ್ತ: ಜಿಲ್ಲಾಡಳಿತ ಸಿದ್ಧತೆ

ಈ ಬಾರಿಯ ನಾಡಹಬ್ಬ ದಸರಾ ಪ್ಲಾಸ್ಟಿಕ್ ಮುಕ್ತ: ಜಿಲ್ಲಾಡಳಿತ ಸಿದ್ಧತೆ

ಮೈಸೂರು: ಈ ಬಾರಿಯ ಮೈಸೂರು ವಿಶ್ವ ವಿಖ್ಯಾತ ದಸರಾ ಮಹೋತ್ಸವವನ್ನು ಪ್ಲಾಸ್ಟಿಕ್ ಮುಕ್ತವಾಗಿ ಆಚರಿಸಲು ಜಿಲ್ಲಾಡಳಿತ ಸಿದ್ಧತೆ ನಡೆಸಿದೆ. ದಸರಾ ಸಂದರ್ಭದಲ್ಲಿ ಹೆಚ್ಚಿನ ಪ್ರವಾಸಿಗರು ಮೈಸೂರಿನ ನಾನಾ ಪ್ರವಾಸಿ ತಾಣಗಳಿಗೆ ಭೇಟಿ ನೀಡುತ್ತಾರೆ. ವಿವಿಧ ಮಳಿಗೆ, ಅಂಗಡಿ ಮುಂಗಟ್ಟು, ದಸರಾ ಕಾರ್ಯಕ್ರಮ ನಡೆಯುವ ಸ್ಥಳ, ಚಾಮುಂಡಿಬೆಟ್ಟ, ಅರಮನೆ, ಝೂ ಆಹಾರ ಮೇಳ, ಯುವ ದಸರಾ, ಹಾ ಗೂ ಪ್ರಮುಖ ಬೀದಿ ಬದಿಯಲ್ಲಿ ಉತ್ಪಾದನೆಯಾಗುವ ಕಸದಲ್ಲಿ ಪ್ಲಾಸ್ಟಿಕ್ ಪ್ರಮಾಣವೇ ಹೆಚ್ಚಿರುತ್ತದೆ. ಇದನ್ನು ಗಮನದಲ್ಲಿಟ್ಟುಕೊಂಡು ಈ ಸಲ ಪ್ಲಾಸ್ಟಿಕ್‌ಗೆ ಮುಕ್ತ ಮಾಡಲು ಪರಿಸರ ಸ್ನೇಹಿ ದಸರಾ ಆಚರಿಸಲು ಜಿಲ್ಲಾಡಳಿತ ಸಜ್ಜಾಗಿದೆ.

ದಸರಾ ವೇಳೆ ೧೦ ಟನ್ ಕಸ ಹೆಚ್ಚುವರಿಯಾಗಿ ಸಂಗ್ರಹವಾಗುತ್ತದೆ. ಇದರಲ್ಲಿ ಶೇ.೫೦ರಷ್ಟು ಕಸ ಪ್ಲಾಸ್ಟಿಕ್ ಬಾಟಲ್, ಕವರ್‌ಗಳೇ ಆಗಿರುತ್ತವೆ. ವ್ಯಾಪಾರಿಗಳು ಹಾಗೂ ಸಾರ್ವಜನಿಕರಲ್ಲಿ ತ್ಯಾಜ್ಯ ವಸ್ತುಗಳ ನಿರ್ವಹಣೆ, ಪ್ಲಾಸ್ಟಿಕ್ ಬಳಕೆ ಮಾಡದಂತೆ ಜಾಗೃತಿ ಮೂಡಿಸಲಾಗುತ್ತಿದೆ. ದಸರೆಯನ್ನು ಪರಿಸರ ಸ್ನೇಹಿಯಾಗಿ ಆಚರಿಸಲು ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಚ್.ಸಿ.ಮಹದೇವಪ್ಪ ಅವರು ಈಗಾಗಲೇ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ. ಹೆಚ್ಚು ಜನ ಸೇರುವ ಆಹಾರ ಮೇಳ ಸೇರಿದಂತೆ ಇತರ ವೇದಿಕೆಗಳಲ್ಲಿ ಪ್ಲಾಸ್ಟಿಕ್ ಬಳಸಬಾರದು ಎಂದು ಸೂಚನೆ ನೀಡಿದ್ದರು. ಈ ಸಂಬಂಧ ಬೆಳಗ್ಗೆ ಹಾಗೂ ಸಂಜೆ ಕೆಲಸ ಮಾಡಲು ಎರಡು ತಂಡ ರಚಿಸುವಂತೆ ಪಾಲಿಕೆ ಆಯುಕ್ತರಿಗೆ ನಿರ್ದೇಶನ ನೀಡಿದ್ದಾರೆ.

ಪ್ಲಾಸ್ಟಿಕ್ ಮುಕ್ತ ದಸರಾ ನಡೆಸಲು ನಗರಪಾಲಿಕೆ ಉತ್ಸುಕವಾಗಿದೆ. ಎಲ್ಲೆಲ್ಲಿ ಹೆಚ್ಚು ಪ್ಲಾಸ್ಟಿಕ್ ಹಾಗೂ ತ್ಯಾಜ್ಯ ಸಂಗ್ರಹವಾಗುತ್ತದೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗುತ್ತದೆ. ಅಂಗಡಿಗಳಲ್ಲಿ ಪ್ಲಾಸ್ಟಿಕ್ ಬಳಕೆ ಕಂಡು ಬಂದರೆ ದಂಡ ವಿಧಿಸುತ್ತಿದ್ದೇವೆ. ಈ ಸಂಬಂಧ ಹೋಟೆಲ್ ಮಾಲೀಕರ ಸಂಘ, ಚೇಂಬರ್ ಆಫ್‌ಕಾಮರ್ಸ್, ಬೀದಿ ಬದಿ ವ್ಯಾಪಾರಿಗಳೊಂದಿಗೆ ಸಭೆ ನಡೆಸಿ, ಪರಿಸರ ಸ್ನೇಹಿ ದಸರಾ ಆಚರಣೆಗೆ ಸಹಕರಿಸುವಂತೆ ಮೇಯರ್ ಶಿವಕುಮಾರ್ ಮನವಿ ಮಾಡಿದುರು.

RELATED ARTICLES
- Advertisment -
Google search engine

Most Popular