Tuesday, April 22, 2025
Google search engine

Homeರಾಜ್ಯಸಿಎಂ,ಡಿಸಿಎಂ ಹುದ್ದೆ ಬೇಕೆನ್ನುವವರು ಮತ್ತೊಮ್ಮೆ ಚುನಾವಣೆ ಎದುರಿಸಲಿ: ಡಿ.ಕೆ ಸುರೇಶ್ ತಿರುಗೇಟು

ಸಿಎಂ,ಡಿಸಿಎಂ ಹುದ್ದೆ ಬೇಕೆನ್ನುವವರು ಮತ್ತೊಮ್ಮೆ ಚುನಾವಣೆ ಎದುರಿಸಲಿ: ಡಿ.ಕೆ ಸುರೇಶ್ ತಿರುಗೇಟು

ಬೆಂಗಳೂರು: ಸಿಎಂ ಮತ್ತು ಡಿಸಿಎಂ ಹುದ್ದೆಗಳಿಗಾಗಿ ಆಸೆ ಪಡುತ್ತಿರುವವರು ಮತ್ತೊಮ್ಮೆ ಚುನಾವಣೆ ಎದುರಿಸಲಿ, ತಮ್ಮ ತಮ್ಮ ನಾಯಕತ್ವದಲ್ಲಿ ಪಕ್ಷವನ್ನು ಮುನ್ನಡೆಸಿ ಚುನಾವಣೆಯಲ್ಲಿ ಗೆದ್ದು ಸಿಎಂ ಆದರೂ ಆಗಲಿ, ಡಿಸಿಎಂ ಅದರೂ ಅಗಲಿ. ಯಾರು ಬೇಡ ಅಂತಾರೆ? ಎಂದು ಸಚಿವ ಕೆ.ಎನ್.ರಾಜಣ್ಣಗೆ ಮಾಜಿ ಸಂಸದ ಡಿ.ಕೆ.ಸುರೇಶ್ ತಿರುಗೇಟು ನೀಡಿದ್ದಾರೆ.

ಲೋಕಸಭಾ ಚುನಾವಣೆ ಬಳಿಕ ಡಿಕೆಶಿ ಅಧ್ಯಕ್ಷ ಸ್ಥಾನ ಬಿಡಬೇಕು. ಈ ಬಗ್ಗೆ ಹೈಕಮಾಂಡ್ ಹೇಳಿತ್ತು ಎಂಬ ಕೆ.ಎನ್.ರಾಜಣ್ಣ ಹೇಳಿಕೆ ವಿಚಾರವಾಗಿ ನಗರದಲ್ಲಿ ಇಂದು ನಡೆಸಿದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಡಿಕೆಶಿ ಅವರಿಗೆ ಜವಾಬ್ದಾರಿ ಕೊಟ್ಟಿರುವುದು ಪಕ್ಷದ ವರಿಷ್ಠರು. ಶಿವಕುಮಾರ್ ವರಿಷ್ಠರ ಮುಂದೆ ಎಲ್ಲವನ್ನೂ ತಿಳಿಸಿದ್ದಾರೆ. ವರಿಷ್ಠರ ಬಳಿ ನೀಡಿರುವ ಮಾಹಿತಿಯನ್ನ ಬೇರೆಯವರಿಗೆ ತಿಳಿಸಲು ಸಾಧ್ಯವಿಲ್ಲ.

ಯಾವ ಹುದ್ದೆ ಕೂಡ ಶಾಶ್ವತ ಅಲ್ಲ. ಯಾವ ನಾಯಕರು ಕೂಡಾ ಶಾಶ್ವತ ಅಲ್ಲ. ಹೇಳಿಕೆ ಕೊಡುವವರು ಕೂಡ ಹಿಂದೆ ತಿರುಗಿ ಅವರ ಬೆನ್ನು ನೋಡಿಕೊಳ್ಳಬೇಕಾಗುತ್ತದೆ. ಸರ್ಕಾರ ಉತ್ತಮ ಆಡಳಿತ ನಡೆಸಲಿ ಎಂಬ ಜವಾಬ್ದಾರಿ ಕೊಟ್ಟಿದೆ. ಅದಕ್ಕೆ ಯೋಗ್ಯತೆ ಇಲ್ಲ ಅಂದ್ರೆ ಎಲ್ಲರೂ ಸೇರಿ ಇದನ್ನ ಬಿಟ್ಟು ಚುನಾವಣೆಗೆ ಹೋಗುವುದು ವಾಸಿ ಎಂದು ಕಿಡಿಕಾರಿದ್ದಾರೆ.

ಹಿಂದೆ ಕಡಿಮೆ ಸ್ಥಾನಗಳನ್ನು ಗೆದ್ದ ಕಾರಣ ರಾಮಕೃಷ್ಣ ಹೆಗಡೆಯವರು ವಿಧಾನಸಭೆಯನ್ನು ವಿಸರ್ಜಿಸಿ ಚುನಾವಣೆ ನಡೆಸಿದ್ದರು, ಅದರಲ್ಲಿ ತಪ್ಪೇನೂ ಇಲ್ಲ. ಅಸೆಂಬ್ಲಿ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಸಂದ ಗೆಲುವಿನ ಶ್ರೇಯಸ್ಸು ಕಾರ್ಯಕರ್ತರಿಗೆ ಸಲ್ಲಬೇಕು, ಎರಡೂವರೆ ವರ್ಷಗಳ ಕಾಲ ಅವರು ಹಗಲಿರುಳು ಬೆವರು ಸುರಿಸಿ ಶ್ರಮಪಟ್ಟ ಕಾರಣ ಪಕ್ಷ ಗೆಲ್ಲುವುದು ಸಾಧ್ಯವಾಯಿತು ಎಂದರು.

RELATED ARTICLES
- Advertisment -
Google search engine

Most Popular