Wednesday, April 9, 2025
Google search engine

Homeಅಪರಾಧಮಲೆ ಮಹದೇಶ್ವರ ಬೆಟ್ಟದ ಬಳಿ ಗಾಂಜಾ ಮಾರಾಟ ಮಾಡಲು ಯತ್ನಿಸುತ್ತಿದ್ದ ಮೂವರ ಬಂಧನ

ಮಲೆ ಮಹದೇಶ್ವರ ಬೆಟ್ಟದ ಬಳಿ ಗಾಂಜಾ ಮಾರಾಟ ಮಾಡಲು ಯತ್ನಿಸುತ್ತಿದ್ದ ಮೂವರ ಬಂಧನ

ಹನೂರು: ತಾಲೂಕಿನ ಧಾರ್ಮಿಕ ಪ್ರಸಿದ್ಧ ಯಾತ್ರಾಸ್ಥಳ ಮಲೆ ಮಹದೇಶ್ವರ ಬೆಟ್ಟದ ಮುಡಿಶೆಡ್‌ ಬಳಿ ಗಾಂಜಾ ಮಾರಾಟ ಮಾಡಲು ಯತ್ನಿಸುತ್ತಿದ್ದ ಮೂವರನ್ನು ಪೊಲೀಸರು ಸೋಮವಾರ ಸಂಜೆ ಬಂಧಿಸಿದ್ದಾರೆ.

ಬೆಂಗಳೂರಿನ ಅಭಿಷೇಕ್ (23), ಹಾವೇರಿಯ ಆದರ್ಶ(22), ಮೈಸೂರಿನ ಉದಯಕುಮಾರ್ (22) ಬಂಧಿತ ಆರೋಪಿಗಳು. ಮ.ಬೆಟ್ಟಕ್ಕೆ ಆಗಮಿಸುವ ಭಕ್ತರಿಗೆ ಹೆಚ್ಚಿನ ಬೆಲೆಗೆ ಮಾರಾಟ ಮಾಡುವ ಉದ್ದೇಶದಿಂದ ಒಣ ಗಾಂಜಾವನ್ನು ಬ್ಯಾಗ್‌ನಲ್ಲಿ ಇಟ್ಟುಕೊಂಡು ಮುಡಿಶೆಡ್ ಸಮೀಪದ ಹಣ್ಣು ಕಾಯಿ ಮಾರಾಟ ಕೇಂದ್ರದ ಆಸುಪಾಸು ತಿರುಗಾಡುತ್ತಿದ್ದರು. ಈ ಬಗ್ಗೆ ದೊರೆತ ಖಚಿತ ಮಾಹಿತಿ ಮೇರೆಗೆ ಇನ್ ಪೆಕ್ಟರ್ ನಂಜುಂಡಸ್ವಾಮಿ ಹಾಗೂ ಸಿಬ್ಬಂದಿಗಳ ತಂಡ ಸಂಜೆ 5ರ ವೇಳೆಯಲ್ಲಿ ದಾಳಿ ನಡೆಸಿದಾಗ ಗಾಂಜಾ ಇರುವುದು ದೃಢಪಟ್ಟಿದೆ. ಆರೋಪಿಗಳನ್ನು ಬಂಧಿಸಿದ ಪೊಲೀಸರು 190 ಗ್ರಾಂ ಒಣ ಗಾಂಜಾವನ್ನು ವಶಕ್ಕೆ ಪಡೆದಿದ್ದಾರೆ. ಮಹದೇಶ್ವರ ಬೆಟ್ಟ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ದಾಳಿ ವೇಳೆ ವೈದ್ಯ ಡಾ.ಜಾಹ್ನವಿ, ಪೊಲೀಸ್‌ ಪೇದೆಗಳಾದ ಅಸ್ಲಾಂ ಪಾಷ, ಅಂಬರೀಶ್ ಹಾಗೂ ಪರಮಾನಂದ ಇದ್ದರು.

RELATED ARTICLES
- Advertisment -
Google search engine

Most Popular