Friday, April 11, 2025
Google search engine

Homeರಾಜ್ಯಮೂರು ಘಾಟ್ ಬಂದ್: ಸಾರ್ವಜನಿಕರಿಗೆ ಅನುಕೂಲ ಮಾಡಿಕೊಡಬೇಕು: ಯು.ಟಿ. ಖಾದರ್ ಸೂಚನೆ

ಮೂರು ಘಾಟ್ ಬಂದ್: ಸಾರ್ವಜನಿಕರಿಗೆ ಅನುಕೂಲ ಮಾಡಿಕೊಡಬೇಕು: ಯು.ಟಿ. ಖಾದರ್ ಸೂಚನೆ

ಮಂಗಳೂರು: ಮಂಗಳೂರು-ಬೆಂಗಳೂರನ್ನು ಸಂಪರ್ಕಿಸುವ ಮೂರು ಘಾಟ್ ಗಳಾದ ಶಿರಾಡಿ, ಚಾರ್ಮಾಡಿ ಹಾಗೂ ಮಡಿಕೇರಿ ಘಾಟ್ ಗಳನ್ನು ಬಂದ್ ಮಾಡುವುದರಲ್ಲಿ ಜಿಲ್ಲಾಧಿಕಾರಿಗಳ ನಡುವೆ ಸಮನ್ವಯತೆಯ ಕೊರತೆ ಕಂಡುಬಂದಿದ್ದು, ಲೋಕೋಪಯೋಗಿ ಇಲಾಖೆ ರಸ್ತೆ ಸುರಕ್ಷತೆಗೆ ಪ್ರಾಮುಖ್ಯತೆ ಕೊಟ್ಟು ಸಾರ್ವಜನಿಕರಿಗೆ ಅನುಕೂಲ ಮಾಡಿಕೊಡಬೇಕು ಎಂದು ಲೋಕೋಪಯೋಗಿ ಇಲಾಖೆಯ ಪ್ರಧಾನ ಕಾರ್ಯದರ್ಶಿ ಎಸ್. ಸೆಲ್ವಕುಮಾರ್ ಅವರಿಗೆ ಸ್ಪೀಕರ್ ಯು.ಟಿ.ಖಾದರ್ ಸೂಚನೆ ನೀಡಿದ್ದಾರೆ.

ಈ ಪ್ರಮುಖ ಮೂರೂ ಘಾಟ್ ರಸ್ತೆಗಳನ್ನು ಬಂದ್ ಮಾಡಿದರೆ ಜನರು ಪರದಾಟ ನಡೆಸಬೇಕಾಗುತ್ತದೆ. ವಿಮಾನ ಸಂಚಾರ ಜನಸಾಮಾನ್ಯರ ಕೈಗೆಟಕದು. ರೈಲು ಸಂಚಾರ ತುರ್ತು ಸಂದರ್ಭಗಳಿಗೆ ಅನುಗುಣವಾಗಿಲ್ಲ. ಈ ನಿಟ್ಟಿನಲ್ಲಿ ರಸ್ತೆ ಸಂಚಾರ ಅನಿವಾರ್ಯ ವಾಗಿರುತ್ತದೆ. ಒಂದೊಂದು ಜಿಲ್ಲೆ ತೀರ್ಮಾನ ತೆಗೆದುಕೊಂಡರೆ ಜನರಿಗೆ ಸಮಸ್ಯೆ ಯಾಗುತ್ತದೆ. ನಾಲ್ಕು ಜಿಲ್ಲೆಯ ಜಿಲ್ಲಾಧಿಕಾರಿಗಳು ಪರಸ್ಪರ ಮಾತುಕತೆ ನಡೆಸಿ ಪೂರ್ವ ಸಿದ್ಧತೆಯೊಂದಿಗೆ ಘಾಟ್ ಬಂದ್ ಬಗ್ಗೆ ಚಿಂತಿಸಬೇಕು. ಮಡಿಕೇರಿ ಘಾಟ್ ನಲ್ಲಿ ಆಗಿರುವಂತಹ ಸಮಸ್ಯೆ ಮರುಕಳಿಸದಂತೆ ವ್ಯವಸ್ಥೆ ಮಾಡಬೇಕಾದುದು ನಾಲ್ಕೂ ಜಿಲ್ಲಾಧಿಕಾರಿಗಳ ಹಾಗೂ ಲೋಕೋಪಯೋಗಿ ಇಲಾಖೆಯ ಕರ್ತವ್ಯವಾಗಿದೆ ಎಂದು ಖಾದರ್ ಹೇಳಿದ್ದಾರೆ.

RELATED ARTICLES
- Advertisment -
Google search engine

Most Popular