Saturday, April 19, 2025
Google search engine

Homeಅಪರಾಧತುಮಕೂರು ಜಾತ್ರೆಯಲ್ಲಿ ಊಟ ಸೇವಿಸಿ ಮೂವರು ಸಾವು

ತುಮಕೂರು ಜಾತ್ರೆಯಲ್ಲಿ ಊಟ ಸೇವಿಸಿ ಮೂವರು ಸಾವು

ತುಮಕೂರು: ಮಧುಗಿರಿ ತಾಲೂಕಿನ ಬುಳ್ಳಸಂದ್ರ ಗ್ರಾಮದಲ್ಲಿ ನಡೆದ ಜಾತ್ರೆಯಲ್ಲಿ ಊಟ ಸೇವಿಸಿ ಮೂವರು ಮಹಿಳೆಯರು ಮೃತಪಟ್ಟು, ಹಲವರು ಅಸ್ವಸ್ಥಗೊಂಡಿರುವ ಘಟನೆ ನಡೆದಿದೆ.

ಮೃತರನ್ನು ಬುಳ್ಳಸಂದ್ರದ ನಿವಾಸಿಗಳಾದ ತಿಮ್ಮಕ್ಕ (೮೦) ಮತ್ತು ಗಿರಿಯಮ್ಮ (೮೬) ಮತ್ತು ಆಂಧ್ರಪ್ರದೇಶದ ಮಡಕಶಿರಾ ತಾಲ್ಲೂಕಿನ ಸಿದ್ಧಗಿರಿ ಗ್ರಾಮದ ಕಾಟಮ್ಮ (೪೫) ಎಂದು ಗುರುತಿಸಲಾಗಿದೆ. ಕರಿಯಮ್ಮ ಮತ್ತು ಮುತ್ತುರಾಯ ಭೂತಪ್ಪ ದೇವರ ವಾರ್ಷಿಕ ಜಾತ್ರೆ ಆರಂಭವಾಯಿತು. ಭಾನುವಾರ ಮಾಂಸಾಹಾರಿ ಆಹಾರವನ್ನು ಸೇವಿಸಿದ ನಂತರ, ಹಲವರಲ್ಲಿ ವಾಂತಿ ಮತ್ತು ಭೇದಿ ಕಾಣಿಸಿಕೊಂಡು ಅಸ್ವಸ್ಥರಾಗಿದ್ದಾರೆ.

ಜನರು ತಮ್ಮ ತಮ್ಮ ಮನೆಗಳಲ್ಲಿಯೇ ಆಹಾರ ಸಿದ್ಧಪಡಿಸಿ, ಜಾತ್ರೆಗೆ ತಂದಿದ್ದರು. ಮೂರು ಕುಟುಂಬಗಳು ತಯಾರಿಸಿದ ಆಹಾರ ಸೇವಿಸಿದವರಲ್ಲಿ ಆರೋಗ್ಯ ಸಮಸ್ಯೆ ಕಾಣಿಸಿಕೊಂಡಿದೆ ಎಂದು ಸಹಾಯಕ ಆಯುಕ್ತ ಗೋಟೂರು ಶಿವಣ್ಣ ಹೇಳಿದ್ದಾರೆ. ಘಟನೆ ಬೆನ್ನಲ್ಲೇ ಮಧುಗಿರಿ ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಲಕ್ಷ್ಮಣ್, ಆರೋಗ್ಯಾಧಿಕಾರಿ ಶ್ರೀನಿವಾಸ್, ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ದಯಾನಂದ ಗ್ರಾಮಕ್ಕೆ ಭೇಟಿ ನೀಡಿ ಪರಿಸ್ಥಿತಿ ಅವಲೋಕಿಸಿದರು.

ಇದೀಗ ಆಹಾರದ ಮಾದರಿಗಳನ್ನು ಪರೀಕ್ಷೆಗಾಗಿ ಪ್ರಯೋಗಾಲಯಕ್ಕೆ ಕಳುಹಿಸಲಾಗಿದೆ ಎಂದು ಶಿವಣ್ಣ ತಿಳಿಸಿದರು. ಮಧುಗಿರಿ ತಾಲೂಕಿನ ಚಿನ್ನೇನಹಳ್ಳಿ ಗ್ರಾಮದಲ್ಲಿ ಇತ್ತೀಚೆಗೆ ಕಲುಷಿತ ನೀರು ಕುಡಿದು ಏಳು ಮಂದಿ ಸಾವನ್ನಪ್ಪಿದ್ದರು.

RELATED ARTICLES
- Advertisment -
Google search engine

Most Popular