Sunday, April 20, 2025
Google search engine

Homeರಾಜ್ಯಕಾರಿನಲ್ಲಿ ಮೂವರನ್ನು ಸುಟ್ಟು ಕೊಂದ ಪ್ರಕರಣ: ನಿಷ್ಪಕ್ಷಪಾತ ತನಿಖೆ ನಡೆಸುವಂತೆ ಒತ್ತಾಯಿಸಿ ಎಸ್ ಪಿಗೆ ಮನವಿ...

ಕಾರಿನಲ್ಲಿ ಮೂವರನ್ನು ಸುಟ್ಟು ಕೊಂದ ಪ್ರಕರಣ: ನಿಷ್ಪಕ್ಷಪಾತ ತನಿಖೆ ನಡೆಸುವಂತೆ ಒತ್ತಾಯಿಸಿ ಎಸ್ ಪಿಗೆ ಮನವಿ ಸಲ್ಲಿಸಿದ ಕಾಂಗ್ರೆಸ್ ನಿಯೋಗ

ಮಂಗಳೂರು(ದಕ್ಷಿಣ ಕನ್ನಡ): ತುಮಕೂರಿನಲ್ಲಿ ಬೆಳ್ತಂಗಡಿಯ ಮೂವರನ್ನು ಕಾರಿನಲ್ಲಿ ಸುಟ್ಟು ಕೊಂದ ಪ್ರಕರಣವನ್ನು ನಿಷ್ಪಕ್ಷಪಾತ ತನಿಖೆ ನಡೆಸುವಂತೆ ಒತ್ತಾಯಿಸಿ ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹರೀಶ್ ಕುಮಾರ್ ನೇತೃತ್ವದ ಕಾಂಗ್ರೆಸ್ ನಿಯೋಗವು ಜಿಲ್ಲಾ ಪೊಲೀಸ್ ಅಧೀಕ್ಷರನ್ನು ಭೇಟಿ ಮಾಡಿ ಮನವಿ ಸಲ್ಲಿಸಿತು.

“ದುಷ್ಕರ್ಮಿಗಳ ತಂಡವೊಂದು ಮೋಸದಿಂದ ದ.ಕ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಮೂವರು ಯುವಕರನ್ನು ತುಮಕೂರಿಗೆ ಕರೆಸಿ ಹಣ ದೋಚಿ ಹತ್ಯೆ ಮಾಡಿದೆ. ಪತ್ರಿಕೆ ವರದಿಗಳ ಮೂಲಕ ಹತ್ಯೆಗೀಡಾದವರು 6 ಲಕ್ಷ ಕಳೆದುಕೊಂಡಿದ್ದಾರೆ ಎಂದು ವರದಿಯಾಗಿದೆ. ಆದರೆ ಕೊಲೆಗಡುಕರು 60 ಲಕ್ಷದಿಂದ 1 ಕೋಟಿ ರೂ.ವರೆಗೆ ದೋಚಿದ್ದಾರೆ ಎಂದು ಮೃತರ ಕುಟುಂಬಸ್ಥರು ತಿಳಿಸಿದ್ದಾರೆ. ಈ ಬಗ್ಗೆ ನಿಷ್ಪಕ್ಷಪಾತ ತನಿಖೆ ನಡೆಸಿ ಸತ್ಯಾ ಸತ್ಯತೆಯನ್ನು ಬಯಲಿಗೆಳೆಯಬೇಕು. ಮೋಸದ ಜಾಲದ ಹಿಂದಿರುವ ನೈಜ್ಯ ಆರೋಪಿಗಳನ್ನು ಬಂಧಿಸಬೇಕು. ಆ ಮೂಲಕ ಈ ಮೂರು ಕುಟುಂಬಗಳಿಗೆ ನ್ಯಾಯ ದೊರಕಿಸಿಕೊಡಬೇಕು. ಇನ್ನು ಮುಂದೆ ಜಿಲ್ಲೆಯಲ್ಲಿ ಇಂತಹ ಪ್ರಕರಣ ಮರುಕಳಿಸದಂತೆ ಸೂಕ್ತ ಕ್ರಮಕೈಗೊಳ್ಳಬೇಕು” ಎಂದು ಮನವಿಯಲ್ಲಿ ತಿಳಿಸಲಾಗಿದೆ.

ನಿಯೋಗದಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ ಮಂಜುನಾಥ ಭಂಡಾರಿ, ಮಾಜಿ ಸಚಿವ ಅಭಯಚಂದ್ರ ಜೈನ್, ಮ.ನ.ಪಾ ವಿಪಕ್ಷ ನಾಯಕ ಪ್ರವೀಣ್ ಚಂದ್ರ ಆಳ್ವ, ಜಿಲ್ಲಾ ಕಾಂಗ್ರೆಸ್ ಪಂಚಾಯತ್ ರಾಜ್ ಸಂಘಟನೆ ಅಧ್ಯಕ್ಷ ಶುಭಾಷ್ಚಂದ್ರ ಶೆಟ್ಟಿ ಇದ್ದರು.

ಇದಕ್ಕೂ ಮುನ್ನ ಕೊಲೆಯಾದ ಬೆಳ್ತಂಗಡಿಯ ಮೂವರು ಯುವಕರ ಮನೆಗೆ ಭೇಟಿ ನೀಡದ ನಿಯೋಗ, ರಾಜ್ಯ ಸರ್ಕಾರ ಅಗತ್ಯ ಕ್ರಮಕೈಗೊಳ್ಳುವುದಾಗಿ ಭರವಸೆ ನೀಡಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿತು.

RELATED ARTICLES
- Advertisment -
Google search engine

Most Popular