ಗುಂಡ್ಲುಪೇಟೆ: ತಾಲ್ಲೂಕಿನ ಮುಂಟೀಪುರ ರಸ್ತೆಯಲ್ಲಿ ಮೂರು ಹುಲಿಗಳು ರಸ್ತೆಯಲ್ಲಿ ಓಡಾಡುತ್ತಿರುವ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತಿದ್ದು ಟ್ರಾಕ್ಟರ್‌ನಲ್ಲಿ ಗ್ರಾಮಕ್ಕೆ ತೆರಳುತಿದ್ದ ಸ್ಥಳೀಯರು ವೀಡಿಯೋ ಮಾಡಿ ಹರಿಬಿಟ್ಟಿದ್ದಾರೆ.
ಈ ಮಾರ್ಗ ಸಂಚರಿಸುವ ವಾಹನ ಸವಾರರು ಹಾಗೂ ಜಾನುವಾರು ಮೇಯಿಸುವವರು ಮತ್ತು ಜಮೀನಿನಲ್ಲಿ ಕೆಲಸ ಮಾಡುವ ರೈತರು ಗ್ರಾಮಸ್ಥರು ಆತಂಕಕ್ಕೆ ಒಳಗಾಗಿದ್ದಾರೆ, ಈ ಬಗ್ಗೆ ಅರಣ್ಯ ಇಲಾಖೆ ಹುಲಿ ಸೆರೆ ಹಿಡಿದು ಜನರ ಆತಂಕ ದೂರ ಮಾಡಬೇಕಿದೆ.