Saturday, April 19, 2025
Google search engine

Homeರಾಜ್ಯಸುದ್ದಿಜಾಲಎಲ್ಲದಕ್ಕೂ ಕಾಲವೇ ಉತ್ತರ ನೀಡುತ್ತದೆ: ಹೆಚ್.ಡಿ ರೇವಣ್ಣ

ಎಲ್ಲದಕ್ಕೂ ಕಾಲವೇ ಉತ್ತರ ನೀಡುತ್ತದೆ: ಹೆಚ್.ಡಿ ರೇವಣ್ಣ

ಮೈಸೂರು: ನಾನು ಸದ್ಯಕ್ಕೆ ಪ್ರಜ್ವಲ್ ಭೇಟಿ ಮಾಡಲ್ಲ. ನಾನು ಭೇಟಿಗೆ ಹೋದರೆ ರೇವಣ್ಣ ಏನೋ ಹೇಳಿಕೊಟ್ಟ ಅಂತಾ ಹೇಳುತ್ತಾರೆ. ಹೀಗಾಗಿ ನಾನು ಹೋಗಲ್ಲ ಎಂದು ಮಾಜಿ ಸಚಿವ ಹೆಚ್.ಡಿ ರೇವಣ್ಣ ಹೇಳಿದ್ದಾರೆ.

ಮೈಸೂರಿನಲ್ಲಿ ಸುದ್ದಿಗಾರರಿಗೆ ಪ್ರತಿಕ್ರಿಯಿಸಿ, ನಮಗೆ ಸದ್ಯಕ್ಕೆ ದೇವರು ಬಿಟ್ಟರೆ ಇನ್ಯಾರು ಎಂದು ಮಾತು ಆರಂಭಿಸಿದ ರೇವಣ್ಣ, ಸೋಮವಾರ ನನ್ನ ಪತ್ನಿ ಹೋಗಿದ್ದಾರೆ, ಮಗ ಅಲ್ವ ಹೀಗಾಗಿ ಹೋಗಿದ್ದಾರೆ ಅಷ್ಟೇ. ತಾಯಿ-ಮಗ ಏನು ಮಾತಾಡಿದ್ದಾರೆ ನನಗೆ ಗೊತ್ತಿಲ್ಲ, ಕೇಳಲೂ ಹೋಗಿಲ್ಲ ಎಂದರು.

ಸೂರಜ್ ರೇವಣ್ಣ ಮಹಾನ್ ದೈವ ಭಕ್ತ. ಅವನು ಬಹಳ ಬೇಗ ಇದರಿಂದ ಹೊರಬರುತ್ತಾನೆ ಅನ್ನೋ ನಂಬಿಕೆ ಇದೆ. ಉಳಿದ ಯಾವ ವಿಚಾರಗಳ ಬಗ್ಗೆಯೂ ನಾನು ಮಾತನಾಡಲ್ಲ. ಎಲ್ಲವೂ ನ್ಯಾಯಾಲಯದ ಮುಂದೆ ಇವೆ. ಎಲ್ಲವೂ ಮುಗಿಯಲಿ, ಆಮೇಲೆ ಎಲ್ಲವನ್ನೂ ಎಳೆ ಎಳೆಯಾಗಿ ಬಿಚ್ಚಿಡುತ್ತೇನೆ ಎಂದು ರೇವಣ್ಣ ತಿಳಿಸಿದರು.

ಎಂಥೆಂತವರಿಗೋ ಕಷ್ಟ ಬರುತ್ತದೆ, ಅದ್ರಲ್ಲಿ ನಮ್ಮದು ಏನಿದೆ. ದೇವೇಗೌಡರು ಒಂದು ತಿಂಗಳಿನಿಂದ ಸಹಜವಾಗಿ ನೋವಿನಲ್ಲೇ ಇದ್ದಾರೆ. ಎಲ್ಲದಕ್ಕೂ ಕಾಲವೇ ಉತ್ತರ ನೀಡುತ್ತದೆ ಅಲ್ಲದೆ ನಾನು ಯಾವತ್ತೂ ಯಾವುದಕ್ಕೂ ಎದೆಗುಂದುವುದಿಲ್ಲ. 30 ವರ್ಷದಿಂದ ರಾಜಕಾರಣ ಮಾಡಿದ್ದೇನೆ. ಇಂಥವನೆಲ್ಲ ಬಹಳ ನೋಡಿದ್ದೇನೆ ಎಂದರು.

RELATED ARTICLES
- Advertisment -
Google search engine

Most Popular