ಬೆಂಗಳೂರು: ರಾಜ್ಯದಲ್ಲಿ ಜಾತಿಗಣತಿ ವರದಿ ಜಾರಿ ಮಾಡಲು ಮುಹೂರ್ತ ಫಿಕ್ಸ್ ಆಗಿದೆ ಎಂದು ಸಚಿವ ಸತೀಶ್ ಜಾರಕಿಹೊಳಿ ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜಾತಿಗಣತಿ ವರದಿಯನ್ನು ಎಲ್ಲರೂ ಒಟ್ಟಾಗಿ ತೀರ್ಮಾನ ಮಾಡುತ್ತೇವೆ. ಜಾತಿಗಣತಿ ಜಾರಿ ಬಳಿಕ ನೋಡೋಣ ಏನು ಆಗುತ್ತದೆ ಎಂದು ಹೇಳಿದ್ದಾರೆ.
ಜಾತಿ ಗಣತಿ ವರದಿ ಜಾರಿ ಬಗ್ಗೆ ಪ್ರಬಲ ಸಮುದಾಯಗಳ ವಿರೋಧದ ವಿಚಾರದ ಕುರಿತು ಪ್ರತಿಕ್ರಿಯೆ ನೀಡಿದ ಸಚಿವ ಸತೀಶ್ ಜಾರಕಿಹೊಳಿ, ವರದಿ ಓಪನ್ ಆಗಲಿ, ಆಮೇಲೆ ನೋಡೋನ, ಜಾತಿಗಣತಿ ವರದಿ ಜಾರಿಯಾದ ಮೇಲೆ ಸದನವನ್ನೇ ಕರೆಯಬೇಕು. ಅಧಿವೇಶನದಲ್ಲಿ ಯಾರೆಲ್ಲಾ ಪ್ರಶ್ನೆ ಕೇಳ್ತಾರೆ ನೋಡಣ. ವರದಿ ಬಗ್ಗೆ ಸಮಗ್ರವಾಗಿ ಚರ್ಚೆಯಾಗಬೇಕು ಎಂದರು.
ಇಂದು ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ರಾಜ್ಯ ಸರ್ಕಾರದ ಸಚಿವ ಸಂಪುಟ ಸಭೆಯಲ್ಲಿ ಮಹತ್ವದ ಜಾತಿಗಣತಿ ವರದಿ ಮಂಡನೆಯಾಗುವ ಸಾಧ್ಯತೆ ಇದೆ.