Thursday, April 3, 2025
Google search engine

Homeಅಪರಾಧಟಿಪ್ಪರ್​ - ಕಾರು ಮುಖಾಮುಖಿ ಡಿಕ್ಕಿ: ಸ್ಥಳದಲ್ಲೇ ಇಬ್ಬರು ಸಾವು

ಟಿಪ್ಪರ್​ – ಕಾರು ಮುಖಾಮುಖಿ ಡಿಕ್ಕಿ: ಸ್ಥಳದಲ್ಲೇ ಇಬ್ಬರು ಸಾವು

ಹಾವೇರಿ: ಟಿಪ್ಪರ್​ ಹಾಗೂ ಕಾರು (Car) ಮುಖಾಮುಖಿ ಡಿಕ್ಕಿಯಾಗಿ ಸಂಭವಿಸಿದ ಅಪಘಾತದಲ್ಲಿ (Accident) ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದು, ಇಬ್ಬರು ಗಾಯಗೊಂಡಿರುವ ಘಟನೆ ರಾಣೆಬೆನ್ನೂರು (Ranebennur) ತಾಲೂಕಿನ ಅಂಕಸಾಪುರ ಗ್ರಾಮದಲ್ಲಿ ನಡೆದಿದೆ.

ಮಾಲತೇಶ್​ ಕುಂದ್ರಳ್ಳಿ (21), ಮಾಲತೇಶ್​(24) ಮೃತರು.

ಘಟನೆಯಲ್ಲಿ ರಾಣೆಬೆನ್ನೂರಿನ ಲಲಿತಾ ಪಾಟೀಲ್​​, ನಾಗರಾಜ್ ಎಂಬುವರಿಗೆ ಗಾಯಗಳಾಗಿದ್ದು ಆಸ್ಪತ್ರೆಗೆ ದಾಖಲಿಸಲಾಗಿದೆ. ಇನ್ನು ಲಲಿತಾ ಪಾಟೀಲ್​​ ಅವರಿಗೆ ಗಂಭೀರ ಗಾಯಗಳಾದ ಹಿನ್ನೆಲೆ ದಾವಣಗೆರೆ ಜಿಲ್ಲಾಸ್ಪತ್ರೆಗೆ ಸಾಗಿಸಲಾಗಿದೆ.

ರಾಣೆಬೆನ್ನೂರು ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

RELATED ARTICLES
- Advertisment -
Google search engine

Most Popular