Friday, April 18, 2025
Google search engine

Homeರಾಜ್ಯತಿರುಪತಿ ಲಡ್ಡುಕೇಸ್: ಮುಜರಾಯಿ ದೇಗುಲಗಳ ಪ್ರಸಾದ ಪರೀಕ್ಷೆಗೆ ಸೂಚನೆ

ತಿರುಪತಿ ಲಡ್ಡುಕೇಸ್: ಮುಜರಾಯಿ ದೇಗುಲಗಳ ಪ್ರಸಾದ ಪರೀಕ್ಷೆಗೆ ಸೂಚನೆ

ಬೆಂಗಳೂರು: ತಿರುಪತಿ ತಿರುಮಲ ದೇಗುಲದ ಲಡ್ಡುವಿನಲ್ಲಿ ಪ್ರಾಣಿಗಳ ಕೊಬ್ಬು ಬಳಕೆಯಾಗಿರುವ ಪ್ರಕರಣ ಗಂಭೀರ ಸ್ವರೂಪ ಪಡೆದುಕೊಂಡ ಬೆನ್ನಲ್ಲೇ ಎಚ್ಚೆತ್ತುಕೊಂಡಿರುವ ಕರ್ನಾಟಕ ಸರ್ಕಾರ ಮುಜರಾಯಿ ವ್ಯಾಪ್ತಿಯ ಎಲ್ಲ ದೇಗುಲಗಳಲ್ಲಿ ಪ್ರಸಾದ ತಯಾರಿಗೆ ನಂದಿನಿ ತುಪ್ಪವನ್ನೇ ಬಳಸುವಂತೆ ಸುತ್ತೋಲೆ ಹೊರಡಿಸಿತ್ತು.

ಮುಜರಾಯಿ ವ್ಯಾಪ್ತಿಯ ಎಲ್ಲ ದೇಗುಲಗಳ ಪ್ರಸಾದವನ್ನು ಪ್ರಯೋಗಾಲಯದಲ್ಲಿ ಪರಿಶೀಲನೆಗೆ ಒಳಪಡಿಸುವಂತೆ ಆದೇಶಿಸಿದೆ.ಮುಜರಾಯಿ ಇಲಾಖೆ ಅಡಿಯಲ್ಲಿ ರಾಜ್ಯದಲ್ಲಿ ೩೪,೦೦೦ ಕ್ಕೂ ಹೆಚ್ಚು ದೇವಾಲಯಗಳಿವೆ. ಅವುಗಳಲ್ಲಿ, ೨೦೫ ದೇಗುಲಗಳ ವಾರ್ಷಿಕ ಆದಾಯ ೨೫ ಲಕ್ಷ ರೂ.ಗಿಂತ ಹೆಚ್ಚಿದ್ದು, ವರ್ಗ-ಎ ಎಂದು ವರ್ಗೀಕರಿಸಲ್ಪಟ್ಟಿವೆ. ೧೯೩ ದೇಗುಲಗಳನ್ನು ೫ ಲಕ್ಷದಿಂದ ರೂ. ೨೫ ಆದಾಯದೊಂದಿಗೆ ವರ್ಗ-ಬಿ ಎಂದು ಗುರುತಿಸಲಾಗಿದೆ. ಉಳಿದವುಗಳನ್ನು ೫ ಲಕ್ಷ ರೂ. ಆದಾಯದೊಂದಿಗೆ ವರ್ಗ-ಸಿ ಎಂದು ವರ್ಗೀಕರಿಸಲಾಗಿದೆ. ಇವುಗಳಲ್ಲಿ ಹೆಚ್ಚಿನ ದೇವಾಲಯಗಳು ಭಕ್ತರಿಗೆ ಪ್ರಸಾದವನ್ನು ನೀಡುತ್ತವೆ.

ರಾಜ್ಯದ ದೇವಾಲಯಗಳು ಭಕ್ತರಿಗೆ ಸುರಕ್ಷಿತ ಮತ್ತು ಆರೋಗ್ಯಕರ ಪ್ರಸಾದ ಮತ್ತು ಆಹಾರವನ್ನು ನೀಡುತ್ತವೆ ಎಂದು ಮುಜರಾಯಿ ಸಚಿವ ರಾಮಲಿಂಗಾ ರೆಡ್ಡಿ ತಿಳಿಸಿದ್ದಾರೆ. ಮುಜರಾಯಿ ವ್ಯಾಪ್ತಿಯ ದೇಗುಲಗಳ ಪ್ರಸಾದದ ವಿಚಾರದಲ್ಲಿ ಜನರಿಗೆ ಯಾವುದೇ ಅನುಮಾನ ಇರಬಾರದು. ಹೀಗಾಗಿ ಪ್ರಸಾದಗಳ ಪರೀಕ್ಷೆ ನಡೆಸುವಂತೆ ಸುತ್ತೋಲೆ ಹೊರಡಿಸಿದ್ದೇವೆ ಎಂದು ಅವರು ತಿಳಿಸಿದ್ದಾರೆ.

RELATED ARTICLES
- Advertisment -
Google search engine

Most Popular