ಹಾಸನ : ಯಾವುದೇ ಶುಲ್ಕವಿಲ್ಲದೆ ಉಚಿತವಾಗಿ ವ್ಯಾಜ್ಯ ಬಗೆಹರಿಸಿಕೊಳ್ಳಲು ಜನರು ಖಾಯಂ ಜನತಾ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಬಹುದಾಗಿದೆ ಇಲ್ಲಿ 2 ರಿಂದ 3 ತಿಂಗಳುಗಳಲ್ಲಿ ಪ್ರಕರಣಗಳನ್ನು ಇತ್ಯರ್ಥಗೊಳಿಸಲಾಗುವುದು ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಹೇಮಾವತಿರವರು ತಿಳಿಸಿದ್ದಾರೆ.
ಖಾಯಂ ಜನತಾ ನ್ಯಾಯಾಲಯದ ವ್ಯಾಪ್ತಿಗೆ 9 ಸೇವೆಗಳನ್ನು ತರಲಾಗಿದೆ. ಪ್ರಯಾಣಿಕರು ಅಥವಾ ಸರಕುಗಳನ್ನು ವಾಯು ಮಾರ್ಗ, ರಸ್ತೆ ಅಥವಾ ನೀರಿನ ಮೂಲಕ ಸಾಗಿಸುವ ಸಾಗಣೆ ಸೇವೆ, ಅಂಚೆ, ಟೆಲಿಗ್ರಾಫ್, ದೂರವಾಣಿ ಸೇವೆ, ಸಾರ್ವಜನಿಕರಿಗೆ ವಿದ್ಯುತ್, ಬೆಳಕು ಅಥವಾ ನೀರಿನಲ್ಲಿ ಸರಬರಾಜು ಮಾಡುವ ಯಾವುದೇ ಸಂಸ್ಥೆ, ಸಾರ್ವಜನಿಕ ಸಂರಕ್ಷಣೆ ಅಥವಾ ನೈರ್ಮಲ್ಯ ವ್ಯವಸ್ಥೆ ಆಸ್ಪತ್ರೆ ಸೇವೆ ಮತ್ತು ವಿತರಣೆ, ವಿಮೆ ಸೇವೆ, ಬ್ಯಾಂಕಿAಗ್ ಹಾಗೂ ಹಣಕಾಸು ಸಂಸ್ಥೆಗಳು, ವಸತಿ ಮತ್ತು ರಿಯಲ್ ಎಸ್ಟೇಟ್ ಹಾಗು ಶಿಕ್ಷಣಕ್ಕೆ ಸಂಬAಧಿಸಿದ ಪ್ರಕರಣಗಳನ್ನು ಈ ನ್ಯಾಯಾಲಯದಲ್ಲಿ ರಾಜಿ ಮಾಡಿಸುವ ಮೂಲಕ ಇತ್ಯರ್ಥ ಪಡಿಸಲಾಗುವುದು ಎಂದು ತಿಳಿಸಿದ್ದಾರೆ.
ಈ ಅದಾಲತ್‌ಗಳಿಗೆ ಬರುವ ಪ್ರಕರಣಗಳಲ್ಲಿ ವಿವಾದಕ್ಕೊಳಗಾದ ಸ್ವತ್ತಿನ ಮೌಲ್ಯ ಹಣಕಾಸು ಸಂಸ್ಥೆಗಳ ವ್ಯವಹಾರಕ್ಕೆ ಸಂಬAಧಪಟ್ಟAತೆ ರೂ. 1 ಕೋಟಿ ಮೀರಿರಬಾರದು ಎಂದು ತಿಳಿಸಿದರು.
ಯಾವುದೇ ಕಾನೂನಿನಡಿ ರಾಜಿ ಮಾಡಿಕೊಳ್ಳುವ ಅವಕಾಶವಿರದ ಅಪರಾಧಕ್ಕೆ ಸಂಬAಧಿಸಿದ ವಿಷಯವನ್ನು ಇತ್ಯರ್ಥಗೊಳಿಸಲು ಇಲ್ಲಿ ಅಧಿಕಾರವಿರುವುದಿಲ್ಲ. ಅರ್ಜಿ ಸಲ್ಲಿಸಿದ ನಂತರ ಅದೇ ವಿವಾದಕ್ಕೆ ಸಂಬAಧಿಸಿದAತೆ ಯಾವುದೇ ಪಕ್ಷಕಾರನು ನ್ಯಾಯಾಲಯಕ್ಕೆ ಹೋಗುವಂತಿಲ್ಲ ಮತ್ತು ಖಾಯಂ ಜನತಾ ನ್ಯಾಯಾಲಯದ ಐತೀರ್ಪಿನ ವಿರುದ್ಧ ಯಾವುದೇ ನ್ಯಾಯಾಲಯಕ್ಕೆ ಮೇಲ್ಮನವಿ ಸಲ್ಲಿಸುವಂತಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.
ರಾಜ್ಯದಲ್ಲಿ 6 ಕಡೆಗಳಲ್ಲಿ ಬೆಂಗಳೂರು, ಬೆಳಗಾವಿ, ಮೈಸೂರು, ಮಂಗಳೂರು, ಧಾರವಾಡ ಹಾಗೂ ಕಲಬುರ್ಗಿ ಗಳಲ್ಲಿ ಖಾಯಂ ಜನತಾ ನ್ಯಾಯಾಲಯಗಳನ್ನು ಸ್ಥಾಪಿಸಲಾಗಿದೆ ಎಂದರಲ್ಲದೆ ಹಾಸನ ಜಿಲ್ಲೆಯು ಮೈಸೂರು ಖಾಯಂ ಜನತಾ ನ್ಯಾಯಾಲಯದ ವ್ಯಾಪ್ತಿಗೆ ಒಳಪಟ್ಟಿದೆ. ಅರ್ಜಿಗಳನ್ನು ಆನ್ ಲೈನ್‌ನಲ್ಲಿ ಸಲ್ಲಿಸಲು ಅವಕಾಶ ಕಲ್ಪಿಸುವ ಬಗ್ಗೆ ಪ್ರತಿ ಜಿಲ್ಲಾ ಮಟ್ಟದಲ್ಲೂ ನ್ಯಾಯಾಲಯ ತೆರೆಯುವ ಕುರಿತು ಇತರೆ ಜಿಲ್ಲೆಗಳಿಂದ ಜನತಾ ನ್ಯಾಯಾಲಯಕ್ಕೆ ಬರುವ ಬಡವರಿಗೆ ಬಸ್ ಪ್ರಯಾಣ ದರ ಹಾಗೂ ಊಟೋಪಚಾರ ಭತ್ಯೆ, ಅರ್ಜಿ ಸಲ್ಲಿಸಲು ಕಕ್ಷಿದಾರರಿಗೆ ಪ್ರಾರಂಭಿಕ ಹಂತದಲ್ಲಿ ವಕೀಲರ ಮೂಲಕ ಅರಿವು ಮೂಡಿಸಲಾಗುತ್ತಿದೆ ಎಂದು ತಿಳಿಸಿದ್ದಾರೆ.
ದಿನಾಂಕ 01.07.2025 ರಿಂದ 6.10.2025 ರವರೆಗೆ ರಾಷ್ಟçಕ್ಕಾಗಿ 90 ದಿನಗಳ ವಿಶೇಷ ಮಧ್ಯಸ್ಥಿಕೆ ಅಭಿಯಾನ ನಡೆಯುತ್ತಿದ್ದು ನ್ಯಾಯಾಲಯದಲ್ಲಿ ಬಾಕಿಯುಳಿದಿರುವ ಪ್ರಕರಣಗಳಲ್ಲಿ ಕಕ್ಷಿದಾರರು ಇದರ ಸದುಪಯೋಗವನ್ನು ಪಡೆದುಕೊಳ್ಳಬಹುದೆಂದು ಪ್ರಧಾನ ಜಿಲ್ಲಾ ನ್ಯಾಯಾಧೀಶರಾದ ಹೇಮಾವತಿ ತಿಳಿಸಿದ್ದಾರೆ.
ರಾಷ್ಟಿçÃಯ ಲೋಕ್ ಅದಾಲತ್‌ನ್ನು ಸೆ.13 ರಂದು ಹಮ್ಮಿಕೊಳ್ಳಲಾಗಿದ್ದು ಹೆಚ್ಚಿನ ಸಂಖ್ಯೆಯಲ್ಲಿ ನ್ಯಾಯಾಲಯಗಳಲ್ಲಿ ರಾಜಿ ಮಾಡಬಹುದಾದ ಕ್ರಿಮಿನಲ್ ಪ್ರಕರಣಗಳಲ್ಲಿ ಸಿವಿಲ್ ಪ್ರಕರಣಗಳಲ್ಲಿ ರಾಜಿ ಸಂಧಾನದ ಮೂಲಕ ಹೆಚ್ಚಿನ ಸಂಖ್ಯೆಯಲ್ಲಿ ಪ್ರಕರಣಗಳನ್ನು ಇತ್ಯರ್ಥಪಡಿಸಕೊಳ್ಳಬಹುದು ಎಂದು ಹೇಳಿದ್ದಾರೆ.
ಜಿಲ್ಲಾ ಕಾನೂನು ಸದಸ್ಯ ಕಾರ್ಯದರ್ಶಿ ದಾಕ್ಷಾಯಿಣಿ ಅವರು ಮಾತನಾಡಿ ಪೊಲೀಸ್ ಇಲಾಖೆಯ ಸಂಚಾರಿ ಇ-ಚಲನ್ ನಲ್ಲಿ ದಾಖಲಾಗಿರುವ ಬಾಕಿ ಪ್ರಕರಣಗಳ ದಂಡದ ಮೊತ್ತದಲ್ಲಿ ಶೇಕಡ 50 ರಷ್ಟು ರಿಯಾಯಿತಿ ನೀಡಿ ಪ್ರಕರಣಗಳನ್ನು ಇತ್ಯರ್ಥಪಡಿಸಿಕೊಳ್ಳಲು ಆಯುಕ್ತರು, ಸಾರಿಗೆ ಹಾಗೂ ರಸ್ತೆ ಸುರಕ್ಷತೆ, ಬೆಂಗಳೂರು ಇವರು ದಿನಾಂಕ 23.08.2025 ರಿಂದ 12.09.2025 ರವರೆಗೆ ಇತ್ಯರ್ಥಗೊಳ್ಳುವ ಪ್ರಕರಣಗಳಿಗೆ ಮಾತ್ರ ಅನ್ವಯಿಸುವಂತೆ ಸೆ.12 ರೊಳಗೆ ದಾಖಲಾದ ಪ್ರಕರಣಗಳಿಗೆ ಮಾತ್ರ ಅನ್ವಯಿಸುವಂತೆ ಪೊಲೀಸ್ ಇಲಾಖೆಯ ಸಂಚಾರಿ ಇ-ಚಲನ್ ನಲ್ಲಿ ದಾಖಲಾಗಿರುವ ಬಾಕಿ ಪ್ರಕರಣಗಳ ದಂಡದ ಮೊತ್ತದಲ್ಲಿ ಶೇಕಡ 50 ರಷ್ಟು ರಿಯಾಯಿತಿ ನೀಡಿ ಸರ್ಕಾರವು ಆದೇಶಿಸಿರುತ್ತದೆ ಇದರ ಸದುಪಯೋಗ ಪಡೆದುಕೊಳ್ಳುವಂತೆ ತಿಳಿಸಿದ್ದಾರೆ.