Thursday, December 4, 2025
Google search engine

Homeರಾಜ್ಯಸಾರ್ವಜನಿಕ ಆರೋಗ್ಯ ವ್ಯವಸ್ಥೆಯನ್ನು ಬಲಪಡಿಸಲು ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಬಿಸಿಯೂಟ ಸಿಬ್ಬಂದಿಗೆ ಸೂಕ್ತವಾದ ಗೌರವ ಧನ...

ಸಾರ್ವಜನಿಕ ಆರೋಗ್ಯ ವ್ಯವಸ್ಥೆಯನ್ನು ಬಲಪಡಿಸಲು ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಬಿಸಿಯೂಟ ಸಿಬ್ಬಂದಿಗೆ ಸೂಕ್ತವಾದ ಗೌರವ ಧನ ನೀಡುವುದು ಅವಶ್ಯಕ : ಸಂಸದ ಡಾ.ಕೆ.ಸುಧಾಕರ್

ನವದೆಹಲಿ: ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಬಿಸಿಯೂಟ ಸಿಬ್ಬಂದಿಯ ಗೌರವಧನ ಹೆಚ್ಚಳ ಮತ್ತು ಸಾಮಾಜಿಕ ಭದ್ರತೆಯ ಬಗ್ಗೆ ಸಂಸದ ಡಾ.ಕೆ.ಸುಧಾಕರ್ ಕೇಂದ್ರ ಸರ್ಕಾರದ ಗಮನ ಸೆಳೆದಿದ್ದಾರೆ.

ರಾಜ್ಯದಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಬಿಸಿಯೂಟ ಸಿಬ್ಬಂದಿ ಧರಣಿ ನಡೆಸುತ್ತಿರುವ ಸಮಯದಲ್ಲೇ ಸಂಸದ ಡಾ.ಕೆ.ಸುಧಾಕರ್ ಲೋಕಸಭೆಯ ಶೂನ್ಯವೇಳೆಯಲ್ಲಿ ಈ ಸಮಸ್ಯೆ ಕುರಿತು ಮಾತನಾಡಿದರು.

ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಬಿಸಿಯೂಟ ಸಿಬ್ಬಂದಿಯಲ್ಲಿ ಬಹುತೇಕ ಬಡಕುಟುಂಬದ ಮಹಿಳೆಯರೇ ಇರುವುದರಿಂದ . ಶಾಲಾ ಮಕ್ಕಳಿಗೆ ಬಿಸಿಯೂಟ ಪೂರೈಕೆ, ಅಪೌಷ್ಟಿಕತೆ ನಿವಾರಣೆ, ಗರ್ಭಿಣಿಯರು ಹಾಗೂ ತಾಯಂದಿರಿಗೆ ಸರ್ಕಾರಿ ಯೋಜನೆಗಳ ನೆರವು ಸೇರಿದಂತೆ ಹಲವಾರು ವಿಧದಲ್ಲಿ ಇವರು ಕಾರ್ಯನಿರ್ವಹಿಸುತ್ತಿದ್ದಾರೆ. ಅಪೌಷ್ಟಿಕತೆ ವಿರುದ್ಧ ಹೋರಾಡುತ್ತಿರುವ ಈ ಮಹಿಳೆಯರು ಅತೀ ಕಡಿಮೆ ಗೌರವಧನ ಪಡೆಯುತ್ತಿದ್ದು, ಆರ್ಥಿಕವಾಗಿ ತೀರಾ ದುರ್ಬಲರಾಗಿದ್ದಾರೆ ಎಂಬುದು ಬೇಸರದ ಸಂಗತಿ. ಆದ್ದರಿಂದ ಹೋರಾಟ ಮಾಡುತ್ತಿರುವ ಮಹಿಳೆಯರ ಅಹವಾಲುಗಳನ್ನು ಕೇಂದ್ರ ಸರ್ಕಾರ ಆಲಿಸಬೇಕು ಎಂದು ಮನವಿ ಮಾಡಿದರು.

ಕಾರ್ಯಕರ್ತೆಯರ ಪ್ರಮುಖ ಬೇಡಿಕೆಗಳನ್ನು ಸರ್ಕಾರದ ಗಮನಕ್ಕೆ ತಂದ 4 ಅಂಶಗಳು.

  1. ಬೆಲೆ ಏರಿಕೆಯನ್ನು ಗಮನದಲ್ಲಿರಿಸಿಕೊಂಡು ಗೌರವಧನದ ಪರಿಷ್ಕರಣೆ
  2. ಪಿಂಚಣಿ, ವಿಮೆ ಸೇರಿದಂತೆ ಸಾಮಾಜಿಕ ಭದ್ರತೆ ಕಲ್ಪಿಸುವುದು
  3. ಕಾರ್ಯಕರ್ತೆಯರ ಕೆಲಸವನ್ನು `ಅಗತ್ಯ ಸೇವೆಗಳು’ ಎಂದು ಅಧಿಕೃತವಾಗಿ ಗುರುತಿಸುವುದು
  4. ದೇಶದಾದ್ಯಂತ ಕಾರ್ಯಕರ್ತೆಯರಿಗೆ ಏಕರೂಪದ ಸೌಲಭ್ಯಗಳನ್ನು ನೀಡಲು ರಾಜ್ಯ ಸರ್ಕಾರಗಳೊಂದಿಗೆ ಮಾತುಕತೆ

ದೇಶದ ಅಪೌಷ್ಟಿಕತೆ ನಿವಾರಣೆ ಕಾರ್ಯಕ್ರಮಕ್ಕಾಗಿ ಮತ್ತು ಸಾರ್ವಜನಿಕ ಆರೋಗ್ಯ ವ್ಯವಸ್ಥೆಯನ್ನು ಬಲಪಡಿಸಲು ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಬಿಸಿಯೂಟ ಸಿಬ್ಬಂದಿಗೆ ಸೂಕ್ತವಾದ ಗೌರವ ಧನ ನೀಡುವುದು ಅವಶ್ಯಕವಾಗಿದೆ. ನಮ್ಮ ಮಕ್ಕಳು ಹಾಗೂ ತಾಯಂದಿರ ಆರೋಗ್ಯ ಕಾಪಾಡುವ ಈ ಸಿಬ್ಬಂದಿಗೆ ಭದ್ರತೆ, ಘನತೆ ಹಾಗೂ ಗೌರವ ನೀಡುವುದು ಅಗತ್ಯ ಎಂದು ಹೇಳಿದರು.

RELATED ARTICLES
- Advertisment -
Google search engine

Most Popular