Friday, April 11, 2025
Google search engine

Homeಅಪರಾಧಕಾನೂನುತಂಬಾಕು ದಾಳಿ : 23 ಪ್ರಕರಣ ದಾಖಲು

ತಂಬಾಕು ದಾಳಿ : 23 ಪ್ರಕರಣ ದಾಖಲು

ಶಿವಮೊಗ್ಗ: ಶಿವಮೊಗ್ಗ ನಗರದ ಬಸ್ ನಿಲ್ದಾಣದ ಸುತ್ತಲಿನ ಪ್ರದೇಶದಲ್ಲಿ ಕೋಟ್ಪಾ ಕಾಯ್ದೆಯನ್ನು ಉಲ್ಲಂಘಿಸುವವರ ವಿರುದ್ಧ ದಾಳಿಯನ್ನು ಹಮ್ಮಿಕೊಳ್ಳಲಾಯಿತು.

ಒಟ್ಟು 23 ಪ್ರಕರಣಗಳನ್ನು ದಾಖಲಿಸಿ ರೂ. 3500 ದಂಡವನ್ನು ಸಂಗ್ರಹಿಸಲಾಯಿತು. ಹಾಗೂ ತಂಬಾಕು ಉತ್ಪನ್ನಗಳ ದುಷ್ಪರಿಣಾಮಗಳ ಕುರಿತು ಮತ್ತು ಕೋಟ್ಪಾ(ಸಿಗರೇಟ್ ಹಾಗೂ ಇತರೆ ತಂಬಾಕು ಉತ್ಪನ್ನಗಳ ಕಾಯ್ದೆ) ಕಾಯ್ದೆ ಕುರಿತು ತಂಬಾಕು ಮಾರಾಟಗಾರರಿಗೆ ಅರಿವು ಮೂಡಿಸಲಾಯಿತು. ತಂಡದಲ್ಲಿ ಶಿವಮೊಗ್ಗ ತಾಲ್ಲೂಕು ಆರೋಗ್ಯ ಅಧಿಕಾರಿ ಡಾ. ಚಂದ್ರಶೇಖರ್, ರಾಷ್ಟ್ರೀಯ ತಂಬಾಕು ನಿಯಂತ್ರಣ ಕಾರ್ಯಕ್ರಮದ ಜಿಲ್ಲಾ ಸಲಹೆಗಾರ ಹೇಮಂತರಾಜ್ ಅರಸ್, ಸಮಾಜ ಕಾರ್ಯಕರ್ತ ರವಿರಾಜ್, ಹಾಗೂ ಪೊಲೀಸ್ ಇಲಾಖೆಯ ಸಿಬ್ಬಂದಿಗಳು ಭಾಗವಹಿಸಿದ್ದರು.

RELATED ARTICLES
- Advertisment -
Google search engine

Most Popular