ಚಾಮರಾಜನಗರ: ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮದಿಂದ ಚಾಮರಾಜನಗರ ಉಪವಿಭಾಗ ವ್ಯಾಪ್ತಿಯಲ್ಲಿ ಬರುವ ೬೬/೧೧ ಕೆ.ವಿ ಕೆಐಎಡಿಬಿ ಬದನಗುಪ್ಪೆ ಉಪ ಕೇಂದ್ರದಿಂದ ಹೊರಹೊಮ್ಮುವ ಕೆಐಎಡಿಬಿ, ಎಂಜಿನಿಯರಿಂಗ್ ಕಾಲೇಜು, ಕೆ. ಬಸವನಪುರ ಐಪಿ ಮಾರ್ಗಗಳ ತುರ್ತು ನಿರ್ವಹಣೆ ಕಾರ್ಯವನ್ನು ಹಮ್ಮಿಕೊಂಡಿರುವುದರಿಂದ ಇಂದು ಸೆ.೦೩ ಬೆಳಿಗ್ಗೆ ೧೦ರಿಂದ ಸಂಜೆ ೫ ಗಂಟೆಯವರೆಗೆ ವಿವಿಧೆಡೆ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ.
ಕೆಐಎಡಿಬಿ ಇಂಡಸ್ಟ್ರಿಯಲ್ ಏರಿಯಾ ಮತ್ತು ಸುತ್ತಮುತ್ತಲ ಪ್ರದೇಶ, ಎಂಜಿನಿಯರಿಂಗ್ ಕಾಲೇಜು, ಬಸವರಾಜೇಂದ್ರ ಆಸ್ಪತ್ರೆ ಭಾಗದಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ. ಸಾರ್ವಜನಿಕರು ನಿಗಮದ ಜೊತೆ ಸಹಕರಿಸಬೇಕು ಎಂದು ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮದ ಸಹಾಯಕ ಕಾರ್ಯಪಾಲಕ ಎಂಜಿನಿಯರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.