ಮೈಸೂರು: ನಾಳೆ ಆಷಾಢ ಮಾಸದ ಪ್ರಯುಕ್ತ ಮೈಸೂರಿನ ಚಾಮುಂಡಿ ಬೆಟ್ಡದಲ್ಲಿ ವಿಶೇಷ ಪೂಜೆ ನೆರವೇರಲಿದ್ದು, ಈ ಹಿನ್ನೆಲೆಯಲ್ಲಿ ಜಿಲ್ಲಾಡಳಿತ ವತಿಯಿಂದ ಸಕಲ ಸಿದ್ದತೆ ಮಾಡಲಾಗಿದೆ.
ಚಾಮುಂಡಿ ಬೆಟ್ಟಕ್ಕೆ ಬರುವಂತಹ ಭಕ್ತಾದಿಗಳಿಗೆ ಯಾವುದೇ ತೊಂದರೆ ಆಗದಂತೆ ಸಕಲ ಸೌಲಭ್ಯ ಒದಗಿಸುವ ನಿಟ್ಟಿನಲ್ಲಿ ಜಿಲ್ಲಾಡಳಿತ ಕಾರ್ಯ ಪ್ರವೃತ್ತರಾಗಿದ್ದು, ಇಂದು ಸಿದ್ದತಾ ಸ್ಥಳಕ್ಕೆ ಜಿಲ್ಲಾಧಿಕಾರಿ ಜಿ. ಲಕ್ಷ್ಮೀಕಾಂತ್ ರೆಡ್ಡಿ ಅವರು ಇಂದು ಭೇಟಿ ಪರಿಶೀಲನೆ ನಡೆಸಿದರು. ಪೊಲೀಸ್ ಆಯುಕ್ತರಾದ ಸೀಮಾ ಲಾಟ್ಕರ್, ಡಿಸಿಫಿ ಮುತ್ತು ರಾಜ್ ಹಾಗೂ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.