ರಾಮನಗರ: ಜಿಲ್ಲಾಡಳಿತ ಮತ್ತು ಜಿಲ್ಲಾ ಪಂಚಾಯತ್ ವತಿಯಿಂದ ಗ್ಯಾರಂಟಿ ಯೋಜನೆಗಳ ಫಲಾನುಭವಿಗಳ ಸಮಾವೇಶವನ್ನು ಇದೇ ನಾಳೆ ಮಾ. ೨ರ ಶನಿವಾರ ಮಧ್ಯಾಹ್ನ ೨ ಗಂಟೆಗೆ ಚನ್ನಪಟ್ಟಣ ಟೌನಿನ ಬಾಲಕರ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಮೈದಾನದಲ್ಲಿ ಆಯೋಜಿಸಲಾಗಿದೆ. ಉಪ ಮುಖ್ಯಮಂತ್ರಿಗಳು, ಜಲ ಸಂಪನ್ಮೂಲ ಸಚಿವರು ಹಾಗೂ ಬೆಂಗಳೂರು ನಗರ ಜಿಲ್ಲಾ ಉಸ್ತುವಾರಿ ಸಚಿವ ಡಿ.ಕೆ. ಶಿವಕುಮಾರ್ ಅವರು ಕಾರ್ಯಕ್ರಮ ಉದ್ಘಾಟಿಸುವರು.
ಸಾರಿಗೆ ಮತ್ತು ಮುಜರಾಯಿ ಹಾಗೂ ರಾಮನಗರ ಜಿಲ್ಲಾ ಉಸ್ತುವಾರಿ ಸಚಿವ ರಾಮಲಿಂಗಾರೆಡ್ಡಿ ಹಾಗೂ ಗೃಹ ಸಚಿವರು ಹಾಗೂ ತುಮಕೂರು ಜಿಲ್ಲಾ ಉಸ್ತುವಾರಿ ಸಚಿವ ಡಾ. ಜಿ. ಪರಮೇಶ್ವರ್ ಅವರು ಘನ ಉಪಸ್ಥಿತಿ ವಹಿಸುವರು. ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಶಾಸಕರು ಹಾಗೂ ಮಾಜಿ ಮುಖ್ಯಮಂತ್ರಿಗಳಾದ ಎಚ್.ಡಿ. ಕುಮಾರಸ್ವಾಮಿ ಅವರು ಅಧ್ಯಕ್ಷತೆ ವಹಿಸುವರು.