ಮಡಿಕೇರಿ : ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಸಮಗ್ರ ಗಿರಿಜನ ಯೋಜನಾ ಇಲಾಖೆ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಸಹಕಾರದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಪರಿಶಿಷ್ಟ ಪಂಗಡ ಉಪ ಯೋಜನೆಯಡಿ ‘ಗಿರಿಜನ ಉತ್ಸವ’ ಕಾರ್ಯಕ್ರಮವು ನಾಳೆ ಡಿ.೧ ರಂದು ಬೆಳಗ್ಗೆ ೧೦ ಗಂಟೆಗೆ ಪೊನ್ನಂಪೇಟೆ ತಾಲ್ಲೂಕು ತಿತಿಮತಿ ಸರ್ಕಾರಿ ಮಾದರಿ ಪ್ರಾಥಮಿಕ ಶಾಲೆಯಲ್ಲಿ ನಡೆಯಲಿದೆ.
ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಹಾಗೂ ಕೊಡಗು ಜಿಲ್ಲಾ ಉಸ್ತುವಾರಿ ಸಚಿವ ಎನ್.ಎಸ್.ಭೋಸರಾಜು, ಮುಖ್ಯಮಂತ್ರಿ ಅವರ ಕಾನೂನು ಸಲಹೆಗಾರರು ಹಾಗೂ ಶಾಸಕ ಎ.ಎಸ್.ಪೊನ್ನಣ್ಣ, ಸಂಸದ ಪ್ರತಾಪ್ ಸಿಂಹ, ಮಡಿಕೇರಿ ವಿಧಾನಸಭಾ ಕ್ಷೇತ್ರದ ಶಾಸಕ ಡಾ.ಮಂತರ್ ಗೌಡ, ವಿಧಾನ ಪರಿಷತ್ ಸದಸ್ಯ ಎಂ.ಪಿ.ಸುಜಾ ಕುಶಾಲಪ್ಪ, ಎಸ್.ಎಲ್.ಭೋಜೇಗೌಡ, ತಿತಿಮತಿ ಗ್ರಾ.ಪಂ. ಅಧ್ಯಕ್ಷ ಪಿ.ಎಸ್.ಪೊನ್ನು, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ನಿರ್ದೇಶಕ ಧರಣೀದೇವಿ ಮಾಲಗತ್ತಿ, ಜಿಲ್ಲಾಧಿಕಾರಿ ವೆಂಕಟ್ ರಾಜಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್, ಜಿ.ಪಂ.ಸಿಇಒ ವರ್ಣಿತ್ ನೇಗಿ, ಮೈಸೂರು ವಿಭಾಗದ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಜಂಟಿ ನಿರ್ದೇಶಕ ವಿ.ಎನ್.ಮಲ್ಲಿಕಾರ್ಜುನ ಸ್ವಾಮಿ, ಸಮಗ್ರ ಗಿರಿಜನ ಯೋಜನಾ ಇಲಾಖೆಯ ಯೋಜನಾ ಸಮನ್ವಯಾಧಿಕಾರಿ ಎಸ್.ಹೊನ್ನೇಗೌಡ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಉಪ ನಿರ್ದೇಶಕ ಎಂ.ಚಂದ್ರಕಾಂತ್, ಇತರರು ಪಾಲ್ಗೊಳ್ಳಲಿದ್ದಾರೆ.