ಮೈಸೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾಗಿ ನೇಮಕಗೊಂಡಿರುವ ಜಿಲ್ಲಾ ಪಂಚಾಯ್ತಿ ಮಾಜಿ ಅಧ್ಯಕ್ಷ ಕೆ.ಮರೀಗೌಡರು ನಾಳೆ ಶುಕ್ರವಾರ ಬೆಳಿಗ್ಗೆ ೮ ಗಂಟೆಗೆ ಚಾಮುಂಡೇಶ್ವರಿ ಬೆಟ್ಟದಲ್ಲಿ ದೇವಿಗೆ ಪೂಜೆ ಸಲ್ಲಿಸಿ ಮಧ್ಯಾಹ್ನ ೧೨ ಗಂಟೆಗೆ ಮೂಡಾ ಕಛೇರಿಯಲ್ಲಿ ಮೂಡಾ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಳ್ಳಲಿದ್ದಾರೆ ಎಂದು ಇಲವಾಲ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಬಿ.ಗುರುಸ್ವಾಮಿ ತಿಳಿಸಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಕೆ, ಮರೀಗೌಡರು ಮೂರು ದಶಕಕ್ಕೂ ಮಿಗಿಲಾಗಿ ಸಾರ್ವಜನಿಕ ಜೀವನದಲ್ಲಿ ವಿವಿಧ ಹುದ್ದೆಗಳನ್ನು ಅಲಂಕರಿಸಿ ಜನ ಮೆಚ್ಚುವ ಹಾಗೆ ಕೆಲಸ ಮಾಡಿದ ಕಾಂಗ್ರೆಸ್ ಪಕ್ಷದ ಹಿರಿಯ ನಾಯಕರು ಹಾಗೂ ಮುಖ್ಯಮಂತ್ರಿ ಸಿದ್ದರಾಮಯ್ಯರವರ ಕಟ್ಟಾ ಬೆಂಗಲಿಗರಾಗಿರುವ ಕೆ.ಮರೀಗೌಡರ ಪದಗ್ರಹಣ ಸಮಾರಂಭಕ್ಕೆ ಮೈಸೂರು ಮಹಾನಗರಪಾಲಿಕೆಯ ಮಾಜಿ ಮೇಯರ್‌ಗಳು, ಉಪಮೇಯರ್‌ಗಳು, ನಗರಪಾಲಿಕೆ ಮಾಜಿ ಸದಸ್ಯರು, ಜಿಲ್ಲಾ ಪಂಚಾಯ್ತಿ ಮಾಜಿ ಅಧ್ಯಕ್ಷರುಗಳು, ಉಪಾಧ್ಯಕ್ಷರುಗಳು, ಮಾಜಿ ಜಿ.ಪಂ. ಸದಸ್ಯರು ತಾ.ಪಂ ಮಾಜಿ ಅಧ್ಯಕ್ಷರು, ಉಪಾಧ್ಯಕ್ಷರುಗಳು, ಸದಸ್ಯರುಗಳು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರು, ಮುಂಚೂಣಿ ಘಟಕಗಳ ಪದಾಧಿಕಾರಿಗಳು, ಜಿಲ್ಲೆಯ ಕಾಂಗ್ರೆಸ್ ಮುಖಂಡರು, ಕಾಂಗ್ರೆಸ್ ಮಹಿಳಾ ಘಟಕದ ಅಧ್ಯಕ್ಷರುಗಳು, ಉಪಾಧ್ಯಕ್ಷರುಗಳು, ಪದಾಧಿಕಾರಿಗಳು, ವಿವಿಧ ನಿಗಮ ಮಂಡಳಿಗಳ ಮಾಜಿ ಅಧ್ಯಕ್ಷರುಗಳು, ಎ.ಪಿ.ಎಂ.ಸಿ ಮಾಜಿ ಅಧ್ಯಕ್ಷರುಗಳು, ಉಪಾಧ್ಯಕ್ಷರುಗಳು, ಸದಸ್ಯರುಗಳು, ಗ್ರಾ.ಪಂ. ಹಾಲಿ ಅಧ್ಯಕ್ಷರುಗಳು, ಮಾಜಿ ಅಧ್ಯಕ್ಷರುಗಳು, ಉಪಾಧ್ಯಕ್ಷರುಗಳು, ಸದಸ್ಯರುಗಳು, ಹಿತೈಶಿಗಳು, ಅಭಿಮಾನಿಗಳು, ಕಾಂಗ್ರೆಸ್ ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಪದಗ್ರಹಣ ಸಮಾರಂಭವನ್ನು ಯಶಸ್ವಿಗೊಳಿಸಬೇಕೆಂದು ಮನವಿ ಮಾಡಿದರು. ಈ ಸಂದರ್ಭದಲ್ಲಿ ಚಾಮುಂಡೇಶ್ವರಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಜೆ. ಸತೀಶ್‌ಕುಮಾರ್ ಉಪಸ್ಥಿತರಿದರು.