ಚಾಮರಾಜನಗರ: ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮದಿಂದ ಚಾಮರಾಜನಗರ ಉಪವಿಭಾಗ ವ್ಯಾಪ್ತಿಯಲ್ಲಿ ಬರುವ 66/11 ಕೆವಿ ದೊಡ್ಡರಾಯಪೇಟೆ ಉಪಕೇಂದ್ರದಿಂದ ಹೊರಹೊಮ್ಮುವ 11 ಕೆವಿ ರಾಮಸಮುದ್ರ ಫೀಡರ್‍ನಲ್ಲಿ ತುರ್ತು ಕಾಮಗಾರಿಯನ್ನು ನಾಳೆ ಅ. 15ರಂದು ಹಮ್ಮಿಕೊಂಡಿರುವುದರಿಂದ ಅಂದು ಬೆಳಿಗ್ಗೆ 10 ರಿಂದ ಮಧ್ಯಾಹ್ನ 2 ಗಂಟೆಯವರೆಗೆ ವಿವಿಧೆಡೆ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ.
ವಿವೇಕ ನಗರ, ದೀನಬಂದು ಶಾಲೆ ಹಿಂಭಾಗ, ಫಾರೆಸ್ಟ್ ನರ್ಸರಿ ರಸ್ತೆ, ಕಾನ್ವೆಂಟ್ ರಸ್ತೆ ಮತ್ತು ಸುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ ಎಂದು ನಿಗಮದ ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.