Monday, April 21, 2025
Google search engine

Homeರಾಜ್ಯಹೊಸ ವರ್ಷಾಚರಣೆ: ನಂದಿಗಿರಿಧಾಮಕ್ಕೆ ಪ್ರವಾಸಿಗರಿಗೆ ನಿರ್ಬಂಧ

ಹೊಸ ವರ್ಷಾಚರಣೆ: ನಂದಿಗಿರಿಧಾಮಕ್ಕೆ ಪ್ರವಾಸಿಗರಿಗೆ ನಿರ್ಬಂಧ

ಚಿಕ್ಕಬಳ್ಳಾಪುರ: ಹೊಸ ವರ್ಷಾಚರಣೆಗೆ ನಂದಿಗಿರಿಧಾಮಕ್ಕೆ ಪ್ರವಾಸಿಗರಿಗೆ ನಿರ್ಬಂಧಿಸಲಾಗಿದೆ. ಡಿಸೆಂಬರ್ 31ರ ಸಂಜೆ 6ರಿಂದ ಜನವರಿ 1ರ ಬೆಳಗ್ಗೆ 6 ಗಂಟೆವರೆಗೆ ನಂದಿಬೆಟ್ಟಕ್ಕೆ ಪ್ರವಾಸಿಗರಿಗೆ ನಿರ್ಬಂಧಿಸಿ ಚಿಕ್ಕಬಳ್ಳಾಪುರ ಡಿಸಿ ರವೀಂದ್ರ ಆದೇಶ ಹೊರಡಿಸಿದ್ದಾರೆ.

ಹೊಸ ವರ್ಷಾಚರಣೆ ವೇಳೆ ಯಾವುದೇ ಅಹಿತಕರ ಘಟನೆ ನಡೆಯದಂತೆ ಮುಂಜಾಗ್ರತಾವಾಗಿ ಈ ಕ್ರಮಕೈಗೊಳ್ಳಲಾಗಿದೆ ಎಂದು ಜಿಲ್ಲಾಡಳಿತ ತಿಳಿಸಿದೆ.

ವಿಶ್ವ ಪ್ರಸಿದ್ಧ ನಂದಿ ಗಿರಿಧಾಮದಲ್ಲಿ 2024ರ ನೂತನ ವರ್ಷವನ್ನು ಅದ್ಧೂರಿಯಾಗಿ ಬರಮಾಡಿಕೊಳ್ಳಬೇಕೆಂಬ ಎಂಬ ಆಸೆ ಇಟ್ಟುಕೊಂಡವರಿಗೆ ನಿರಾಸೆ ಮೂಡಿಸಿದೆ. ನೂತನ ವರ್ಷಾರಂಭದಲ್ಲಿ ಯಾವುದೇ ರೀತಿಯ ಅಹಿತಕರ ಘಟನೆ ನಡೆಯದಂತೆ ಮುನ್ನೆಚ್ಚರಿಕೆ ಕ್ರಮವಾಗಿ ಸಾರ್ವಜನಿಕರಿಗೆ ನಂದಿಗಿರಿಧಾಮ ಪ್ರವೇಶಕ್ಕೆ ಜಿಲ್ಲಾಡಳಿತ ನಿರ್ಬಂಧ ಹೇರಿದೆ.

RELATED ARTICLES
- Advertisment -
Google search engine

Most Popular