Saturday, April 19, 2025
Google search engine

Homeಅಪರಾಧಕಾನೂನುಕಾನೂನು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ  ಮಂಡ್ಯ ಪೊಲೀಸ್ ಇಲಾಖೆ ವತಿಯಿಂದ ಪಥಸಂಚಲನ

ಕಾನೂನು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ  ಮಂಡ್ಯ ಪೊಲೀಸ್ ಇಲಾಖೆ ವತಿಯಿಂದ ಪಥಸಂಚಲನ

 ಮಂಡ್ಯ: ಕಾನೂನು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ  ಮಂಡ್ಯ ಪೊಲೀಸ್ ಇಲಾಖೆ ವತಿಯಿಂದ ಪಥಸಂಚಲನ ನಡೆಸಲಾಯಿತು.

ನೂತನ ಎಸ್ಪಿ ಮಲ್ಲಿಕಾರ್ಜುನ ಬಾಲದಂಡಿ ನೇತೃತ್ವದಲ್ಲಿ ಪೊಲೀಸರು ನಗರದ ಗುತ್ತಲು ರಸ್ತೆಯಲ್ಲಿ ಸುಮಾರು 4 ಕಿ.ಮೀ ಪಥಸಂಚಲನ ಮಾಡಿದರು.

ಮಂಡ್ಯದಲ್ಲಿ ಕಿಡಿಗೇಡಿಗಳಿಗೆ ಪೊಲೀಸರಿಂದ ಖಡಕ್ ವಾರ್ನಿಂಗ್ ನೀಡಲಾಗಿದ್ದು, ಅಕ್ರಮ ಚಟುವಟಿಕೆಗಳ ತಡೆಯಲು ಪೊಲೀಸ್ ಇಲಾಖೆ ಹೈ ಅಲರ್ಟ್ ಆಗಿದೆ.

ಜನರಲ್ಲಿ ಪೊಲೀಸರ ಬಗ್ಗೆ ವಿಶ್ವಾಸ ಮೂಡಿಸಲು, ಸಾರ್ವಜನಿಕರಲ್ಲಿ ಭಯದ ವಾತಾವರಣ ಹೋಗಲಾಡಿಸುವ ಸಲುವಾಗಿ ಮುಂದಿನ ದಿನಗಳಲ್ಲಿ ತಾಲ್ಲೂಕು ಮಟ್ಟದಲ್ಲಿ ರೂಟ್ ಮಾರ್ಚ್ ನಡೆಸಲಾಗುವುದು. ಸೂಕ್ಷ ಪ್ರದೇಶಗಳಲ್ಲಿ ಪೊಲೀಸ್ ನಿಯೋಜನೆ ಮಾಡಲಾಗುತ್ತದೆ. ಜನರಲ್ಲಿ ಭಯ ಹೋಗಲಾಡಿಸಲು ಕೆಲಸವನ್ನು ಪೊಲೀಸ್ ಇಲಾಖೆ ಮಾಡುತ್ತೆ. ಮಂಡ್ಯ ಜಿಲ್ಲೆಯಲ್ಲಿ ರೌಡಿಸಂ ಮಟ್ಟಹಾಕಲು ಪ್ಲಾನ್ ಮಾಡಲಾಗುತ್ತಿದೆ. ರೌಡಿಸಂ ನಲ್ಲಿ ತೊಡಗಿರುವವರು, ಜೈಲಿನಿಂದ ಬಿಡುಗಡೆಯಾದವರನ್ನ ನಿಯಂತ್ರಣ ಮಾಡಿ ಆದಷ್ಟು ಬೇಗ ರೌಡಿಸಂ ಕಡಿವಾಣ ಹಾಕಿ ಮಟ್ಟಹಾಕುವ ಕೆಲಸ ಮಾಡುತ್ತೇವೆ ಎಂದು ಮಂಡ್ಯ ಎಸ್ಪಿ ಮಲ್ಲಿಕಾರ್ಜುನ ಬಾಲದಂಡಿ ತಿಳಿಸಿದ್ದಾರೆ.

ರಸ್ತೆ ಸಂಚಾರ ನಿಯಮಗಳನ್ನು ಸಹ ಪಾಲನೆ ಮಾಡಲು ಜಾಗೃತಿ ಮೂಡಿಸಲಾಗುವುದು ಎಂದು ಇದೇ ಸಂದರ್ಭದಲ್ಲಿ ತಿಳಿಸಿದರು.

RELATED ARTICLES
- Advertisment -
Google search engine

Most Popular