Tuesday, June 9, 2026
Google search engine

Homeಅಪರಾಧಮಂಡ್ಯದಲ್ಲಿ ದುರಂತ: ಒಂದೇ ಕುಟುಂಬದ ಮೂವರು ಅನುಮಾನಾಸ್ಪದ ಸಾವು

ಮಂಡ್ಯದಲ್ಲಿ ದುರಂತ: ಒಂದೇ ಕುಟುಂಬದ ಮೂವರು ಅನುಮಾನಾಸ್ಪದ ಸಾವು

ಮಂಡ್ಯ : ಜಿಲ್ಲೆಯ ನೆಹರು ನಗರದಲ್ಲಿ ಒಂದೇ ಕುಟುಂಬದ ಮೂವರು ಅನುಮಾನಾಸ್ಪದವಾಗಿ ಮೃತಪಟ್ಟಿರುವ ಘಟನೆ ನಡೆದಿದೆ. ಮೃತರನ್ನು ಪ್ರಭಾಕರ್, ಅವರ ಪತ್ನಿ ಜ್ಯೋತಿ ಹಾಗೂ ಪುತ್ರ ಸಂತೋಷ್ ಎಂದು ಗುರುತಿಸಲಾಗಿದೆ.

ಜ್ಯೋತಿ ಮತ್ತು ಸಂತೋಷ್ ಅವರು ಕಳೆದ ರಾತ್ರಿ ಮನೆಯಲ್ಲೇ ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಸಾವಿನ ನಿಖರ ಕಾರಣ ಇನ್ನೂ ತಿಳಿದುಬಂದಿಲ್ಲ. ಇಂದು ಬೆಳಿಗ್ಗೆ ಪ್ರಭಾಕರ್ ಅವರು ತಮ್ಮ ಬಟ್ಟೆ ಅಂಗಡಿಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ಸಂತೋಷ್ ಅವರಿಗೆ ಕೇವಲ ಒಂದು ತಿಂಗಳ ಹಿಂದಷ್ಟೇ ವಿವಾಹವಾಗಿತ್ತು. ಘಟನಾ ಸ್ಥಳಕ್ಕೆ ಮಂಡ್ಯ ಪಶ್ಚಿಮ ಠಾಣೆ ಪೊಲೀಸರು ಭೇಟಿ ನೀಡಿ ತನಿಖೆ ಆರಂಭಿಸಿದ್ದಾರೆ.

RELATED ARTICLES
- Advertisment -
Google search engine

Most Popular