ರಾಮನಗರ: ರಾಮನಗರ ಜಿಲ್ಲಾ ವ್ಯಾಪ್ತಿಯಲ್ಲಿ ಬರುವ ಪ್ರವಾಹ ಪೀಡಿತ ಪ್ರದೇಶಗಳನ್ನು ಗುರುತಿಸಿ ಆ ಪ್ರದೇಶದ ಸ್ಥಳೀಯ ಯುವಕರಿಗೆ ಪ್ರವಾಹದ ಸಂದರ್ಭದಲ್ಲಿ ತಮ್ಮನ್ನು ಹಾಗೂ ಸ್ಥಳೀಯರನ್ನು ರಕ್ಷಣೆ ಮಾಡುವ ಕುರಿತು ರಾಮನಗರ ಅಗ್ನಿಶಾಮಕ ಠಾಣೆ ವತಿಯಿಂದ ಮೇ ೨೭ರ ಸೋಮವಾರ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಜಿಲ್ಲಾ ಅಗ್ನಿಶಾಮಕ ಅಧಿಕಾರಿ ಕೆ.ಬಿ. ಮಂಜುನಾಥ ಹಾಗೂ ಸಿಬ್ಬಂದಿ ವರ್ಗದವರಿಂದ ತರಬೇತಿ ಆಯೋಜಿಸಲಾಗಿತ್ತು.
ತರಬೇತಿಗೆ ಸುಮಾರು ೨೫೦ ಕ್ಕೂ ಹೆಚ್ಚಿನ ಸಂಖ್ಯೆಯಲ್ಲಿ ಪ್ರವಾಹ ಪೀಡಿತ ಸ್ಥಳಗಳಲ್ಲಿನ ಯುವಕರು, ಯುವತಿಯರು ಹಾಗೂ ಗೃಹರಕ್ಷಕದಳದ ಅಧಿಕಾರಿ ಮತ್ತು ಸಿಬ್ಬಂದಿಗಳು ಹಾಗೂ ಇತರರು ಉಪಸ್ಥಿತರಿದ್ದರು.
